ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, 7 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಶನಿವಾರವಷ್ಟೇ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು. ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿರುವ ಕೋಲಾರ ಕ್ಷೇತ್ರದ ಟಿಕೆಟ್ ಅನ್ನು ಕಾಂಗ್ರೆಸ್ ಬಾಕಿ ಇರಿಸಿಕೊಂಡಿದೆ. ಈ ಮಧ್ಯೆ, ಚಿಕ್ಕಮಗಳೂರಿನಲ್ಲಿ ಮೂಲ ಕಾಂಗ್ರೆಸ್ಸಿಗರ ವಿರೋಧದ ನಡುವೆಯೂ ಹೆಚ್ಡಿ ತಮ್ಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದಾಗಿ ಚಿಕ್ಕಮಗಳೂರಿನಲ್ಲಿ ಬಂಡಾಯದ ಬಿಸಿ ಕಾಂಗ್ರೆಸ್ಗೆ ತಟ್ಟುವ ಸಾಧ್ಯತೆಯೂ ಇದೆ.
ಕಾಂಗ್ರೆಸ್ ನಾಲ್ಕನೇ ಪಟ್ಟಿಯಲ್ಲಿ ಯಾರಿಗೆಲ್ಲಾ ಟಿಕೆಟ್?
ಲಿಂಗಸುಗೂರು ಕ್ಷೇತ್ರ – ದುರ್ಗಪ್ಪ ಎಸ್.ಹೂಲಗೇರಿ
ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರ -ಜಗದೀಶ್ ಶೆಟ್ಟರ್
ಹುಬ್ಬಳ್ಳಿ – ಧಾರವಾಡ ಪಶ್ಚಿಮ ಕ್ಷೇತ್ರ – ದೀಪಕ್ ಚಿಂಚೋರೆ
ಶಿಗ್ಗಾಂವಿ ಕ್ಷೇತ್ರ – ಮೊಹಮ್ಮದ್ ಯೂಸುಫ್ ಸವಣೂರು
ಹರಿಹರ ಕ್ಷೇತ್ರ – ನಂದಗಾವಿ ಶ್ರೀನಿವಾಸ
ಚಿಕ್ಕಮಗಳೂರು ಕ್ಷೇತ್ರ – ಹೆಚ್.ಡಿ.ತಮ್ಮಯ್ಯ
ಶ್ರವಣಬೆಳಗೊಳ ಕ್ಷೇತ್ರ – ಎಂ.ಎ.ಗೋಪಾಲಸ್ವಾಮಿ
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…