ಸಾಲು ಸಾಲು ರಜೆ | ದೇವಸ್ಥಾನಗಳಲ್ಲಿ ಸರದಿ ಸಾಲು | ತಿರುಪತಿಯಲ್ಲಿ ದೇವರ ದರ್ಶನ ಪಡೆಯಲು 40 ಗಂಟೆ |

November 13, 2022
11:16 AM

ವಾರಾಂತ್ಯದ ರಜೆ ಹಾಗೂ ವಿವಿಧ ರಜೆಯ ಕಾರಣದಿಂದ  ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ಭಕ್ತರು ಸಾಲು ಕಂಡುಬಂದಿದೆ. ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳದಲ್ಲೂ ಭಕ್ತರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಈ ನಡುವೆ ತಿರುಪತಿ ತಿರುಮಲದಲ್ಲೂ ಭಕ್ತ ಸಾಗರವೇ ಕಂಡುಬಂದಿದ್ದು ದೇವರ ದರ್ಶನಕ್ಕಾಗಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತಿದ್ದಾರೆ. ದರ್ಶನ ಪಡೆಯಲು 40 ಗಂಟೆ ಹಾಗೂ ವಿಶೇಷ ದರ್ಶನಕ್ಕೆ ನಾಲ್ಕು ಗಂಟೆ ಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಿರುಮಲದಲ್ಲಿ ಶನಿವಾರ ಬೆಳಗ್ಗೆಯಿಂದ ಮಳೆ ಸುರಿಯುತ್ತಿದೆ. ಚಳಿ ಹೆಚ್ಚಿದ್ದರಿಂದ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಪರದಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಸತತ ರಜೆ ಇರುವುದರಿಂದ ವಿವಿಧೆಡೆಯಿಂದ ಭಕ್ತರು ಸ್ವಂತ ವಾಹನದಲ್ಲಿ ತಿರುಮಲಕ್ಕೆ ತೆರಳಿದರು. ಇದರಿಂದ ತಿರುಪತಿಯ ಚೆಕ್ ಪಾಯಿಂಟ್ ಗಳಲ್ಲಿ ತಪಾಸಣೆಗಾಗಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳದಲ್ಲೂ  ಜನಸಂದಣಿ ಕಂಡುಬಂದಿದೆ. ವಿವಿಧ ಸೇವೆಗಳಿಗೆ ಹಾಗೂ ದೇವರ ದರ್ಶನಕ್ಕೆ ಸರದಿ ಸಾಲು ಕಂಡುಬಂದಿದೆ. ಶುಕ್ರವಾರದಿಂದ ಸೋಮವಾರದವರೆಗೆ ಶಾಲಾ ಮಕ್ಕಳಿಗೆ ವಿವಿಧ ಕಾರಣಗಳಿಗೆ ಶಾಲೆಗೆ ರಜೆ ಇರುವ ಕಾರಣದಿಂದ ತೀರ್ಥಯಾತ್ರೆಯನ್ನು ಜನರು ಕೈಗೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror