ಮಾನವ–ಕಾಡಾನೆ ಸಂಘರ್ಷ ತಡೆಗೆ ಹೊಸ ಯೋಜನೆಗಳು

October 28, 2026
7:06 AM
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ತ್ಯಾಗದಬಾಗಿಲು ಗ್ರಾಮ ವ್ಯಾಪ್ತಿಯಲ್ಲಿ 500 ಎಕರೆ ಪ್ರದೇಶದಲ್ಲಿ ಕಾಡಾನೆ ಪಳಗಿಸುವ ಕೇಂದ್ರ ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಮಾನವ–ಕಾಡಾನೆ ಸಂಘರ್ಷ ತಡೆಗೆ ಹೆಚ್ಚುವರಿಯಾಗಿ ನಾಲ್ಕು ಕಾರ್ಯಪಡೆ ತಂಡಗಳ ನಿಯೋಜನೆ ಹಾಗೂ ಕಾಡಾನೆ ತಡೆ ಬ್ಯಾರಿಕೇಡ್‌ ಅಳವಡಿಕೆಗೂ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಾನವ–ವನ್ಯಜೀವಿ ಸಂಘರ್ಷವನ್ನು ತಡೆಗಟ್ಟಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಚಿಕ್ಕಮಗಳೂರು ನಗರದಲ್ಲಿ ಸುಮಾರು ₹7.45 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಅರಣ್ಯ ಇಲಾಖೆ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ತರೀಕೆರೆ ತಾಲೂಕಿನ ತ್ಯಾಗದಬಾಗಿಲು ಗ್ರಾಮ ವ್ಯಾಪ್ತಿಯಲ್ಲಿ ಸುಮಾರು 500 ಎಕರೆ ಪ್ರದೇಶದಲ್ಲಿ ಕಾಡಾನೆಗಳನ್ನು ಪಳಗಿಸುವ ಕೇಂದ್ರ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಈ ಕೇಂದ್ರ ಸ್ಥಾಪನೆಗೆ ಈಗಾಗಲೇ ಜಾಗ ಗುರುತಿಸಲಾಗಿದ್ದು, ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದು ಸಚಿವರು ಹೇಳಿದರು.

8 ಕಾಡಾನೆ ಕಾರ್ಯಪಡೆ ತಂಡಗಳು :  ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಸ್ತುತ ನಾಲ್ಕು ಕಾಡಾನೆ ಕಾರ್ಯಪಡೆ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಮಾನವ–ಕಾಡಾನೆ ಸಂಘರ್ಷವನ್ನು ನಿಯಂತ್ರಿಸುವ ಉದ್ದೇಶದಿಂದ ಹೆಚ್ಚುವರಿಯಾಗಿ ನಾಲ್ಕು ಕಾರ್ಯಪಡೆ ತಂಡಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಕಾಡಾನೆ ತಡೆ ಬ್ಯಾರಿಕೇಡ್‌ ಅಳವಡಿಕೆಗೆ ಕ್ರಮ :  ಜಿಲ್ಲೆಯಲ್ಲಿ ಸುಮಾರು 20 ಕಿಲೋಮೀಟರ್ ಉದ್ದದ ಕಾಡಾನೆ ತಡೆ ಬ್ಯಾರಿಕೇಡ್‌ ಅಳವಡಿಸುವಂತೆ ಬೇಡಿಕೆ ಸಲ್ಲಿಕೆಯಾಗಿದೆ. ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಕಾಡಾನೆಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಬ್ಯಾರಿಕೇಡ್‌ ಅಳವಡಿಕೆಗೂ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಕಾಡಾನೆಗಳ ಸಂಚಾರದಿಂದ ಉಂಟಾಗುತ್ತಿರುವ ಬೆಳೆ ಹಾನಿ, ಜೀವಹಾನಿ ಹಾಗೂ ಮಾನವ–ವನ್ಯಜೀವಿ ಸಂಘರ್ಷವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅವರು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಆರೋಗ್ಯ ಸಂಶೋಧನೆಗೆ ಅಪಾರ ಅವಕಾಶ – ಕೋಕೋ ಕೃಷಿಯಲ್ಲೂ ಭಾರತಕ್ಕೆ ಭವಿಷ್ಯ – ಡಾ. ಬಾಲಚಂದ್ರ ಹೆಬ್ಬಾರ್
October 28, 2026
7:18 AM
by: ದ ರೂರಲ್ ಮಿರರ್.ಕಾಂ
ಅಡಿಕೆಯೊಂದನ್ನೇ ನಂಬಬೇಡಿ, ಮಿಶ್ರ ಬೆಳೆ ಪದ್ಧತಿಗೆ ಆದ್ಯತೆ ನೀಡಿ – ಕ್ಯಾಂಪ್ಕೊ ಅಧ್ಯಕ್ಷ ಎಸ್‌.ಆರ್‌. ಸತೀಶ್ಚಂದ್ರ
October 27, 2026
12:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-10-2026 | ಮತ್ತೊಂದು ವಾಯುಭಾರ ಕುಸಿತದ ಸಾಧ್ಯತೆ..?
October 27, 2026
12:19 PM
by: ಸಾಯಿಶೇಖರ್ ಕರಿಕಳ
ಅಡಿಕೆ ಬೆಳೆ ವಿಸ್ತರಣೆಗೆ ವೈಜ್ಞಾನಿಕ ನಿಯಂತ್ರಣ ಅಗತ್ಯ – ಸಮಗ್ರ ಕೃಷಿ ನೀತಿ ಅನಿವಾರ್ಯ
October 27, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror