ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಾನವ–ವನ್ಯಜೀವಿ ಸಂಘರ್ಷವನ್ನು ತಡೆಗಟ್ಟಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಚಿಕ್ಕಮಗಳೂರು ನಗರದಲ್ಲಿ ಸುಮಾರು ₹7.45 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಅರಣ್ಯ ಇಲಾಖೆ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ತರೀಕೆರೆ ತಾಲೂಕಿನ ತ್ಯಾಗದಬಾಗಿಲು ಗ್ರಾಮ ವ್ಯಾಪ್ತಿಯಲ್ಲಿ ಸುಮಾರು 500 ಎಕರೆ ಪ್ರದೇಶದಲ್ಲಿ ಕಾಡಾನೆಗಳನ್ನು ಪಳಗಿಸುವ ಕೇಂದ್ರ ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಈ ಕೇಂದ್ರ ಸ್ಥಾಪನೆಗೆ ಈಗಾಗಲೇ ಜಾಗ ಗುರುತಿಸಲಾಗಿದ್ದು, ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದು ಸಚಿವರು ಹೇಳಿದರು.
8 ಕಾಡಾನೆ ಕಾರ್ಯಪಡೆ ತಂಡಗಳು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಸ್ತುತ ನಾಲ್ಕು ಕಾಡಾನೆ ಕಾರ್ಯಪಡೆ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಮಾನವ–ಕಾಡಾನೆ ಸಂಘರ್ಷವನ್ನು ನಿಯಂತ್ರಿಸುವ ಉದ್ದೇಶದಿಂದ ಹೆಚ್ಚುವರಿಯಾಗಿ ನಾಲ್ಕು ಕಾರ್ಯಪಡೆ ತಂಡಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಕಾಡಾನೆ ತಡೆ ಬ್ಯಾರಿಕೇಡ್ ಅಳವಡಿಕೆಗೆ ಕ್ರಮ : ಜಿಲ್ಲೆಯಲ್ಲಿ ಸುಮಾರು 20 ಕಿಲೋಮೀಟರ್ ಉದ್ದದ ಕಾಡಾನೆ ತಡೆ ಬ್ಯಾರಿಕೇಡ್ ಅಳವಡಿಸುವಂತೆ ಬೇಡಿಕೆ ಸಲ್ಲಿಕೆಯಾಗಿದೆ. ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಕಾಡಾನೆಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಬ್ಯಾರಿಕೇಡ್ ಅಳವಡಿಕೆಗೂ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಕಾಡಾನೆಗಳ ಸಂಚಾರದಿಂದ ಉಂಟಾಗುತ್ತಿರುವ ಬೆಳೆ ಹಾನಿ, ಜೀವಹಾನಿ ಹಾಗೂ ಮಾನವ–ವನ್ಯಜೀವಿ ಸಂಘರ್ಷವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅವರು ಹೇಳಿದರು.
ಅಕ್ವಾನ್ ಚಂಡಮಾರುತವು ನವೆಂಬರ್ 20ರಂದು ಒಡಿಸ್ಸಾ ಕರಾವಳಿಯಲ್ಲಿ ದುರ್ಬಲವಾಗಿ ಭೂ ಪ್ರವೇಶಿಸುವ ಸಾಧ್ಯತೆಯಿದೆ.…
ನವೆಂಬರ್ ಮೊದಲ ವಾರದಲ್ಲಿ ₹300ರ ಗಡಿ ದಾಟಿದ್ದ ನೈಸರ್ಗಿಕ ರಬ್ಬರ್ ಧಾರಣೆ ಇದೀಗ…
2025-26ನೇ ಸಾಲಿನಲ್ಲಿ ಭಾರತದ ತೋಟಗಾರಿಕೆ ಉತ್ಪಾದನೆ 3869.15 ಲಕ್ಷ ಟನ್ ತಲುಪುವ ನಿರೀಕ್ಷೆಯಿದ್ದು,…
ಅಮರಮೂಡ್ನೂರು ಗ್ರಾಮದ ಕೃಷಿಕ ಶಿವರಾಂ ಪೈಲೂರು ಅವರು 24 ದಿನಗಳಿಂದ ಪ್ರತಿದಿನ ಏಕಾಂಗಿಯಾಗಿ…
ನವೆಂಬರ್ 18ರಂದು ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಅಕ್ವಾನ್…
ಸುಳ್ಯದಲ್ಲಿ ನಡೆದ ಚಿತ್ರಜಾತ್ರೆ ಸ್ಥಳೀಯ ಕಲಾವಿದರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು, ಕಲಾಕೃತಿಗಳನ್ನು ಮಾರಾಟ…