Advertisement
MIRROR FOCUS

ಮಾನವೀಯತೆ ಮತ್ತು ಭಾರತೀಯತೆ | “ಒಳ್ಳೆಯವರಾಗೋಣ” |

Share

ಮನಸುಗಳ, ಗುಣ ನಡತೆಗಳ, ವ್ಯವಹಾರಗಳ, ಸಂಬಂಧಗಳ, ದೇಶ ಭಕ್ತಿಯ ಶುದ್ದತೆಗೆ ಮನಸ್ಸುಗಳ ಅಂತರಂಗದ ಚಳವಳಿಯ ಕಳಕಳಿಯ ಮನವಿ ಮತ್ತು ಪ್ರೀತಿಯ ಕರೆ……..

Advertisement
Advertisement
Advertisement

ಆತ್ಮೀಯರೆ,
ನೀವು ಯಾರೇ ಆಗಿರಿ, ಎಲ್ಲೇ ಇರಿ, ಯಾವ ವಯಸ್ಸು, ಲಿಂಗ, ಧರ್ಮ, ಭಾಷೆಯವರೇ ಆಗಿರಿ, ಯಾವ ಸಂದರ್ಭ, ಸನ್ನಿವೇಶ, ಪ್ರದೇಶದಲ್ಲೇ ವಾಸವಾಗಿರಿ, ಯಾವ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸ್ಥರದಲ್ಲೇ ಇರಿ, ಇನ್ನು ಮುಂದೆ ನಿಮ್ಮ ಈಗಿನ ಕೆಟ್ಟತನದಲ್ಲಿ ಕನಿಷ್ಠ ಶೇಕಡಾ 10% ರಷ್ಟು ಕಡಿಮೆ ಮಾಡಿಕೊಳ್ಳಿ. ಅದು ನಿಮ್ಮ ವೈಯಕ್ತಿಕ ನಡವಳಿಕೆಯೇ ಇರಲಿ, ವ್ಯವಹಾರವೇ ಇರಲಿ, ಸಂಬಂಧಗಳಲ್ಲೇ ಇರಲಿ, ಮಾನವೀಯ ಮೌಲ್ಯಗಳಲ್ಲೇ ಇರಲಿ ಕನಿಷ್ಠ ಕನಿಷ್ಠ 10% ಪರ್ಸೆಂಟ್ ಈಗಿನ ಸ್ಥಿತಿಗಿಂತ ಉತ್ತಮ ಪಡಿಸಿಕೊಳ್ಳಿ…. ಒಳ್ಳೆಯದು ಯಾವುದು, ಕೆಟ್ಟದ್ದು ಯಾವುದು ಎಂದು ಯಾವುದೇ ಸಂಶೋಧನೆ ಮಾಡಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರಿಗೂ ಈ ಸಮಾಜದ ನಡವಳಿಕೆಯ ಬಗ್ಗೆ ತಿಳಿದೇ ಇರುತ್ತದೆ…..

Advertisement

ಇದೇ ಆಗಸ್ಟ್ 15 ರ ಸ್ವಾತಂತ್ರ್ಯ ದಿನದಿಂದ ಮುಂದಿನ ವರ್ಷದ ಸ್ವಾತಂತ್ರ್ಯ ದಿನದೊಳಗಾಗಿ ಈ ಶೇಕಡಾ10% ಬದಲಾವಣೆ ನಮ್ಮಲ್ಲಿ ಬರಲೇಬೇಕು. ಅದನ್ನು ನಮ್ಮ ಆತ್ಮಸಾಕ್ಷಿಗೆ ಒಪ್ಪಿಸಬೇಕು‌. ನಮ್ಮ ಚಿಂತನಾ ಕ್ರಮವನ್ನು ವಿಶಾಲ ಮತ್ತು ಹೆಚ್ಚು ನಾಗರಿಕ ಗೊಳಿಸಿಕೊಳ್ಳಬೇಕು. ಸಮಗ್ರ ಚಿಂತನೆಯನ್ನು ಅಳವಡಿಸಿಕೊಳ್ಳಬೇಕು. ಅದು ಈ ದೇಶಕ್ಕೆ, ನಮ್ಮ ಪ್ರೀತಿ ಪಾತ್ರರಿಗೆ, ನಮ್ಮ ಸಂಸ್ಕೃತಿಗೆ, ಈ ಸೃಷ್ಟಿಗೆ ನಾವು ಕೊಡಬಹುದಾದ ಒಂದು ಕಾಣಿಕೆ……

ಉದಾಹರಣೆಗೆ,
ನೀವು ಸರ್ಕಾರಿ ಅಧಿಕಾರಿಯಾಗಿದ್ದು ಇಲ್ಲಿಯವರೆಗೂ ಲಂಚ ಪಡೆಯುವವರಾಗಿದ್ದರೆ ಕನಿಷ್ಠ ಅದರಲ್ಲಿ 10% ಕಡಿಮೆ ಮಾಡಿಕೊಳ್ಳಿ. ತುಂಬಾ ಲಾಭದ ವ್ಯಾಪಾರ ಮಾಡುತ್ತಿದ್ದರೆ ಅದರಲ್ಲಿ ಅತಿ ಎನಿಸಿದರೆ 10% ಬಿಡಿ. ವೈದ್ಯ, ಶಿಕ್ಷಕ, ಪೋಲೀಸ್, ವಕೀಲ, ರಾಜಕಾರಣಿ, ಕಂಟ್ರಾಕ್ಟರ್ ಸೇರಿ ಯಾವುದೇ ವೃತ್ತಿಯಲ್ಲಿ ಇರಿ ಅಲ್ಲಿನ ನಿಮ್ಮ ಮೋಸದ ಪ್ರಮಾಣದಲ್ಲಿ ಕನಿಷ್ಠ ಹತ್ತು ಪರ್ಸೆಂಟ್ ಕಡಿಮೆ ಮಾಡಿಕೊಳ್ಳಿ. ಮೋಸ ವಂಚನೆ ಸುಳ್ಳು ಅಸೂಯೆ, ಬೇರೆಯವರ ಬಗ್ಗೆ ಚಾಡಿ, ಕಳ್ಳತನ, ಅತ್ಯಂತ ಕೆಟ್ಟ ಬೈಗುಳ, ಇನ್ನೊಬ್ಬರ ಮನಸ್ಸಿಗೆ ನೋವು ಮಾಡುವುದು ಮುಂತಾದ ವಿಷಯಗಳಲ್ಲಿ ಕನಿಷ್ಠ 10% ಕಡಿಮೆ ಮಾಡಿಕೊಳ್ಳಿ…..

Advertisement

ಗೆಳೆಯರೆ ಇದಕ್ಕಾಗಿ ನೀವು ಯಾವುದೇ ವಿಶೇಷ ಶ್ರಮ, ಹಣ, ಸಮಯ ಯಾವುದೂ ಮೀಸಲಿಡಬೇಕಾಗಿಲ್ಲ. ಇದನ್ನು ಓದಿದ ತಕ್ಷಣ ಕೇವಲ 5 ನಿಮಿಷ ಮೌನಕ್ಕೆ ಜಾರಿ ನಿಮಗೆ ಒಪ್ಪಿತ ಎನಿಸಿದರೆ ನಿಮ್ಮ ಅತಿ ಹೆಚ್ಚು ಕೆಟ್ಟತನ ಅನಿಸುವುದರಲ್ಲಿ ಹತ್ತು ಪರ್ಸೆಂಟ್ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಿ….  ಈ ಸಮಾಜ ಬದಲಾಗಬೇಕು, ನಮ್ಮ ಮಕ್ಕಳಿಗೆ ಇದಕ್ಕಿಂತ ಉತ್ತಮ ಸಮಾಜ ಬಳುವಳಿಯಾಗಿ ನೀಡಬೇಕು ಎಂಬ ಮನೋಭಾವ ನಿಮ್ಮದಾಗಿದ್ದರೆ ದಯವಿಟ್ಟು ದೇಶದ ಮತ್ತು ನಮ್ಮ ಸ್ವಂತ ಹಿತಾಸಕ್ತಿಯಿಂದ ಸ್ವಯಂ ಸ್ಪೂರ್ತಿ ಪಡೆದು ಇದನ್ನು ಪಾಲಿಸೋಣ. ಮುಂದಿನ ‌ಆಗಸ್ಟ್ 15 ರ ನಂತರ ಮತ್ತೆ ಇನ್ನೂ ಹೆಚ್ಚಿನ ಬದಲಾವಣೆಗೆ ಪ್ರಯತ್ನಿಸೋಣ…..

ಇಲ್ಲಿ ನಾವು ಕಳೆದುಕೊಳ್ಳುವುದು ಏನೂ ಇಲ್ಲ. ಪಡೆದುಕೊಳ್ಳುವುದೇ ಹೆಚ್ಚು. ಒಂದು ಒಳ್ಳೆಯ ಅನುಭವ ನಮ್ಮದಾಗುತ್ತದೆ. ಒಂದು ವೇಳೆ ನಿಮ್ಮಲ್ಲಿ ಯಾವುದೇ ಕೆಟ್ಟ ಗುಣ ಇಲ್ಲ ಎಂದು ಭಾವಿಸುವುದಾದರೆ ನಿಮಗೆ ಅಭಿನಂದನೆಗಳು ಮತ್ತು ನಿಮ್ಮ ಪಾದಗಳಿಗೆ ಸಾಷ್ಟಾಂಗ ನಮಸ್ಕಾರಗಳು. ಆದರೆ ಇಂದಿನ ಸಮಾಜ ನೋಡಿದರೆ ಬಹುತೇಕ ಕೆಟ್ಟ ನಡವಳಿಕೆಯ ಜನರೇ ಹೆಚ್ಚಾಗಿ ಕಾಣುತ್ತಾರೆ. ಆದ್ದರಿಂದ ನಮ್ಮ ನಮ್ಮ ವಿಲ್ ಪವರ್ ಉಪಯೋಗಿಸಿ ಈ ಮಾನಸಿಕ ನಿಯಂತ್ರಣ ಸಾಧಿಸೋಣ…..

Advertisement

ಕರ್ನಾಟಕದ ಮಟ್ಟಿಗೆ ಇದೊಂದು ಚಳವಳಿಯ ರೂಪ ಪಡೆಯಲು ಪ್ರಯತ್ನಿಸೋಣ. ಒಮ್ಮೆ ವ್ಯಕ್ತಿ ಆತ್ಮಸಾಕ್ಷಿಗೆ ಅನುಗುಣವಾಗಿ ಜೀವಿಸಲು ಪ್ರಾರಂಭಿಸಿದರೆ ನಮ್ಮ ಇಂದಿನ ಬಹುತೇಕ ಸಮಸ್ಯೆಗಳು ತನ್ನಿಂದ ತಾನೇ ಕಡಿಮೆಯಾಗಿ ಜನರ ನೆಮ್ಮದಿಯ ಮಟ್ಟ ಹೆಚ್ಚಾಗುತ್ತದೆ. ವೈಯಕ್ತಿಕ ಸಮಸ್ಯೆಗಳು ಸೇರಿ ಅನೇಕ ತೊಂದರೆಗಳಿಗೆ ಪರಿಹಾರ ದೊರೆಯುತ್ತದೆ….

ವ್ಯಕ್ತಿ ಒಳ್ಳೆಯವನಾಗದೆ ಯಾವುದೇ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ. ಯಾವುದೇ ಕಾನೂನು, ಯಾವುದೇ ಶಿಕ್ಷೆಯ ಭಯ ಜನರನ್ನು ಬದಲಾಯಿಸಲಾರದು. ರೈತರ, ಕಾರ್ಮಿಕರ, ಮಹಿಳೆಯರ, ಜಾತಿ ವ್ಯವಸ್ಥೆಯ, ಭ್ರಷ್ಟಾಚಾರದ ಎಲ್ಲಾ ಸಮಸ್ಯೆಗಳಿಗೂ ಮದ್ದಾಗಬಲ್ಲ ಈ
” ಒಳ್ಳೆಯವರಾಗಿ ” ಬದಲಾಗುವ ಚಳವಳಿಗೆ ನಿಮ್ಮನ್ನು ಸ್ವಾಗತಿಸುತ್ತಾ,
ನಿಮ್ಮ ಸಹಕಾರ ನಿರೀಕ್ಷಿಸುತ್ತಾ…. ಇದಕ್ಕೆ ಆ…. ಓ…. ಎಂಬ ಪ್ರಚಾರದ ಅವಶ್ಯಕತೆ ಇಲ್ಲ. ನಿಂತ ನೆಲೆಯಲ್ಲೇ ಒಂದು ಪ್ರತಿಜ್ಞಾ ನಿರ್ಧಾರ ಕೈಗೊಂಡು ಸಾಮೂಹಿಕವಾಗಿ ಇದನ್ನು ಪಾಲಿಸೋಣ.

Advertisement

2024 ರ ಆಗಸ್ಟ್ 15 ರಿಂದ
” ಒಳ್ಳೆಯವರಾಗೋಣ “…ಭಾರತೀಯತೆ…….ವಿಶ್ವ ಮಾನವತೆ ಅತಿ ಎತ್ತರದ ಆದರ್ಶ, ಸದ್ಯಕ್ಕೆ ಆ ಎತ್ತರಕ್ಕೆ ನಾವು ಏರಲಾಗುವುದಿಲ್ಲ, ಕನಿಷ್ಠ ಮೇಲೆ ನೋಡುತ್ತಾ ಹತ್ತುವ ಪ್ರಯತ್ನ ಮಾಡಬಹುದು….. ಆದರೆ,ಕೈಗೆಟುಕುವ ವಾಸ್ತವೆವೆಂದರೆ                                         ” ಭಾರತೀಯತೆ ”

ವ್ಯಕ್ತಿ ಕೇಂದ್ರಿತ ಭಾರತೀಯತೆ ನಮ್ಮ ಬಹುತೇಕ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರವಾಗಬಲ್ಲದು.
ಇದು ತೀರಾ ಅಸಾಧ್ಯವೇನಲ್ಲ.
ಸರಳವಾಗಿ ಹೇಳಬೇಕೆಂದರೆ,
ನನ್ನ ಧರ್ಮ ಭಾರತೀಯತೆ ,
ನನ್ನ ಜಾತಿ ಭಾರತೀಯತೆ,
ನನ್ನ ಮಾತು ಭಾರತೀಯ ಭಾಷೆ,
ನನ್ನ ಸಿದ್ಧಾಂತ ಭಾರತೀಯತೆ,
ನನ್ನ ಸಂಪ್ರದಾಯ ಭಾರತೀಯತೆ ,
ನನ್ನ ನಡವಳಿಕೆ ಭಾರತೀಯತೆ,
ನನ್ನ ಯೋಚನಾ ಕ್ರಮ ಭಾರತೀಯತೆ,
ಕೊನೆಗೆ ನನ್ನ ನಿಷ್ಠೆ ಭಾರತೀಯ ಸಂವಿಧಾನಕ್ಕೆ….

Advertisement

ಹೀಗೆ ವೈವಿಧ್ಯತೆಯನ್ನು ಉಳಿಸಿಕೊಂಡು ಸಮಾನತೆಯ ಆಧಾರದಲ್ಲಿ ಮಾನವೀಯ ನೆಲೆಯ ಭಾರತೀಯತೆ ಎಂಬ ಸಧ್ಯದ ಸಾರ್ವತ್ರಿಕ ಸತ್ಯ ಅಳವಡಿಸಿಕೊಂಡರೆ ಏಕತೆ ತಾನೇ ತಾನಾಗಿ ಬರುತ್ತದೆ.
ವ್ಯಕ್ತಿ ಮತ್ತು ದೇಶದ ಹಿತಚಿಂತನೆಯೇ ಭಾರತೀಯತೆ.
ಇದರಲ್ಲಿ ಭ್ರಷ್ಟಾಚಾರಕ್ಕೂ ಪರಿಹಾರವಿದೆ, ಸ್ತ್ರೀ ಸ್ವಾತಂತ್ರ್ಯಕ್ಕೂ ಉತ್ತರವಿದೆ.
ಮೀಸಲಾತಿ ಎಂಬುದು ಇಲ್ಲಿ ಸಮಸ್ಯೆಯೇ ಅಲ್ಲ.
ಏಕರೂಪದ ನಾಗರೀಕ ಸಂಹಿತೆ ಎಂಬ ಗೊಂದಲಕ್ಕೂ ಇದು ಮದ್ದಾಗಬಹುದು. ದೇಶಭಕ್ತ – ದೇಶದ್ರೋಹಿ ಎಂಬುದಕ್ಕೂ ಇಲ್ಲಿ ಅರ್ಥ ಸಿಗಬಹುದು…..

ಅಂತಿಮವಾಗಿ ಭಾರತೀಯತೆ ಸಣ್ಣ ಮನಸ್ಸುಗಳ, ಕ್ಷುಲ್ಲುಕ ಚಿಂತನೆಯ ಅತಿ ರಂಜಿತ ಭಾವನಾತ್ಮಕತೆಯಲ್ಲ.
ವಾಸ್ತವ ದೃಷ್ಟಿಕೋನದ ಪ್ರಬುದ್ಧ ಮನಸ್ಸಿನ ವೈವಿಧ್ಯ ಜೀವನಶೈಲಿಯ, ಸಮಾನತೆ, ಸೋದರತೆ, ಸೌಹಾರ್ದತೆ, ಮಾನವೀಯತೆ ಸಾರುವ ಬದುಕಿನ ವಿಧಾನ….. INDIA A BEAUTIFUL WAY OF LIFE.

Advertisement
ಬರಹ :
ವಿವೇಕಾನಂದ. ಎಚ್. ಕೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಹವಾಮಾನ ವರದಿ | 24.11.2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ದೂರವಾದ ಮಳೆಯ ಸಾಧ್ಯತೆ

25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

9 hours ago

ಅಡಿಕೆಯ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಹೇಗೆ ? | ವಿಜ್ಞಾನಿ ಡಾ.ಭವಿಷ್ಯ ಅವರಿಂದ ಮಾಹಿತಿ |

ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…

13 hours ago

ಅಡಿಕೆ ಎಲೆಚುಕ್ಕಿರೋಗ ನಿರ್ವಹಣಾ ವಿಧಾನಗಳು ಹೇಗೆ..?

ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..

14 hours ago

ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.

1 day ago

ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…

2 days ago

ಕೃಷಿ ಭೂಮಿ ಉಳಿಸಿಕೊಳ್ಳಲು- ಆರೋಗ್ಯ ಕಾಪಾಡಲು ಸಾವಯವ ಕೃಷಿಯತ್ತ ಒಲವು ಬೆಳೆಸಿ | ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ

ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…

2 days ago