ಪಂಜದಲ್ಲಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಉಪವಾಸ ಸತ್ಯಾಗ್ರಹ |

October 2, 2023
7:17 PM
ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಗಾಂಧೀಜಯಂತಿ ದಿನದಂದು ಪಂಜದಲ್ಲಿ ಉಪವಾಸ ಸತ್ಯಾಗ್ರಹ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲೆಯ ಪಂಜದಲ್ಲಿ ಇರುವ ಏಕೈಕ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಗಾಂಧೀಜಯಂತಿ ದಿನದಂದು ಉಪವಾಸ ಸತ್ಯಾಗ್ರಹ ನಡೆಯಿತು.ಪಂಜದ  ಗಾಂಧಿ ವಿದ್ಯಾಪೀಠದ ವತಿಯಿಂದ ಗಾಂಧಿ ಜಯಂತಿಯಂದು ಉಪವಾಸ ಸತ್ಯಾಗ್ರಹ ನಡೆಸಲಾಯಿತು.

Advertisement
Advertisement
Advertisement
Advertisement

ಈ ಸಂದರ್ಭ ಗಾಂಧಿ ವಿದ್ಯಾಪೀಠದ ಅಧ್ಯಕ್ಷ ಪುರುಷೋತ್ತಮ ಮೂಡೂರು  ಮಾತನಾಡಿ  ಪಂಜದಲ್ಲಿ ಸರ್ಕಾರಿ ಆಸ್ಪತ್ರೆ 24 ಗಂಟೆಗಳ ಸೇವೆ ಒದಗಿಸುವಂತಾಗಬೇಕು. ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆ ನೀಡಲು ಪಂಜದಂತಹ ಪ್ರದೇಶದಲ್ಲಿ ಸರ್ಕಾರಿ ಆಸ್ಪತ್ರೆ ಬೇಕಿದೆ ಎಂದು ಹೇಳಿದರು. ಪಂಜ ನಾಡಕಚೇರಿ ವ್ಯಾಪ್ತಿಯಲ್ಲಿ ಸುಮಾರು 21 ಗ್ರಾಮಗಳ ಜನರು ಚಿಕಿತ್ಸೆ ಪಡೆಯಲು ಇದೇ ಆಸ್ಪತ್ರೆಯನ್ನು ಆವಲಂಬಿಸಿರುತ್ತಾರೆ.

Advertisement

ಹೀಗಾಗಿ ಸರ್ಕಾರದಿಂದ ಮೂರು ಎಕರೆಯಷ್ಟು ಜಾಗವನ್ನು ಆಸ್ಪತ್ರೆ ಅಭಿವೃದ್ಧಿಗೆ ಮೀಸಲಾಗಿ ಇಟ್ಟಿರುವರು ಅಲ್ಲದೆ ಸುಮಾರು ಎರಡು ಕೋಟಿ ವೆಚ್ಚದಲ್ಲಿ ನೂತನ ಆಸ್ಪತ್ರೆಯನ್ನು ಕೂಡ ನಿರ್ಮಿಸಿ ಅದರಲ್ಲಿ 12 ಬೆಡ್ ಗಳನ್ನು ಹಾಕುವ ವ್ಯವಸ್ಥೆ ಕೂಡ ಇದೆ. ಈ ಬಗ್ಗೆ ಹಲವು ಬಾರಿ ಗ್ರಾಮ ಪಂಚಾಯತ್ ಹಾಗೂ ಉಳಿದ ಇಲಾಖೆಗಳಿಗೆ ಮನವಿ ಸಲ್ಲಿಸಿದರು ಇಲ್ಲಿಯವರೆಗೆ ಏನು ಪ್ರಯೋಜನ ಆಗಿಲ್ಲ. ಆದುದರಿಂದ ಸರ್ಕಾರ ಕೂಡಲೇ ಇತ್ತ ಕಡೆ ಗಮನಹರಿಸಿ  ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಎಂದು ಒತ್ತಾಯಿಸಿದರು.

Advertisement

ಈ ಸಂದರ್ಭದಲ್ಲಿ ವಿದ್ಯಾ ಪೀಠದ ಸಂಚಾಲಕ ಜಿನ್ನಪ್ಪ ಗೌಡ ಅಳ್ಪೆ, ಪಶುವೈದ್ಯ  ದೇವಿ ಪ್ರಸಾದ್ ಕಾನತ್ತೂರು, ಕಲ್ಮಡ್ಕ ಗ್ರಾಪಂ ಅಧ್ಯಕ್ಷ ಮಹೇಶ್‌ ಕುಮಾರ್‌ ಕರಿಕಳ, ಸಾಮಾಜಿಕ ಮುಖಂಡ ಲಕ್ಷ್ಮೀಶ ಗಬ್ಲಡ್ಕ , ಲಕ್ಷ್ಮಣ ಬೊಳ್ಳಾಜೆ ಮೊದಲಾದವರು ಭೇಟಿ ನೀಡಿ ಬೆಂಬಲ ಸೂಚಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror