ದಕ್ಷಿಣ ಕನ್ನಡ ಜಿಲ್ಲೆಯ ಪಂಜದಲ್ಲಿ ಇರುವ ಏಕೈಕ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಗಾಂಧೀಜಯಂತಿ ದಿನದಂದು ಉಪವಾಸ ಸತ್ಯಾಗ್ರಹ ನಡೆಯಿತು.ಪಂಜದ ಗಾಂಧಿ ವಿದ್ಯಾಪೀಠದ ವತಿಯಿಂದ ಗಾಂಧಿ ಜಯಂತಿಯಂದು ಉಪವಾಸ ಸತ್ಯಾಗ್ರಹ ನಡೆಸಲಾಯಿತು.
ಈ ಸಂದರ್ಭ ಗಾಂಧಿ ವಿದ್ಯಾಪೀಠದ ಅಧ್ಯಕ್ಷ ಪುರುಷೋತ್ತಮ ಮೂಡೂರು ಮಾತನಾಡಿ ಪಂಜದಲ್ಲಿ ಸರ್ಕಾರಿ ಆಸ್ಪತ್ರೆ 24 ಗಂಟೆಗಳ ಸೇವೆ ಒದಗಿಸುವಂತಾಗಬೇಕು. ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆ ನೀಡಲು ಪಂಜದಂತಹ ಪ್ರದೇಶದಲ್ಲಿ ಸರ್ಕಾರಿ ಆಸ್ಪತ್ರೆ ಬೇಕಿದೆ ಎಂದು ಹೇಳಿದರು. ಪಂಜ ನಾಡಕಚೇರಿ ವ್ಯಾಪ್ತಿಯಲ್ಲಿ ಸುಮಾರು 21 ಗ್ರಾಮಗಳ ಜನರು ಚಿಕಿತ್ಸೆ ಪಡೆಯಲು ಇದೇ ಆಸ್ಪತ್ರೆಯನ್ನು ಆವಲಂಬಿಸಿರುತ್ತಾರೆ.
ಹೀಗಾಗಿ ಸರ್ಕಾರದಿಂದ ಮೂರು ಎಕರೆಯಷ್ಟು ಜಾಗವನ್ನು ಆಸ್ಪತ್ರೆ ಅಭಿವೃದ್ಧಿಗೆ ಮೀಸಲಾಗಿ ಇಟ್ಟಿರುವರು ಅಲ್ಲದೆ ಸುಮಾರು ಎರಡು ಕೋಟಿ ವೆಚ್ಚದಲ್ಲಿ ನೂತನ ಆಸ್ಪತ್ರೆಯನ್ನು ಕೂಡ ನಿರ್ಮಿಸಿ ಅದರಲ್ಲಿ 12 ಬೆಡ್ ಗಳನ್ನು ಹಾಕುವ ವ್ಯವಸ್ಥೆ ಕೂಡ ಇದೆ. ಈ ಬಗ್ಗೆ ಹಲವು ಬಾರಿ ಗ್ರಾಮ ಪಂಚಾಯತ್ ಹಾಗೂ ಉಳಿದ ಇಲಾಖೆಗಳಿಗೆ ಮನವಿ ಸಲ್ಲಿಸಿದರು ಇಲ್ಲಿಯವರೆಗೆ ಏನು ಪ್ರಯೋಜನ ಆಗಿಲ್ಲ. ಆದುದರಿಂದ ಸರ್ಕಾರ ಕೂಡಲೇ ಇತ್ತ ಕಡೆ ಗಮನಹರಿಸಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಿದ್ಯಾ ಪೀಠದ ಸಂಚಾಲಕ ಜಿನ್ನಪ್ಪ ಗೌಡ ಅಳ್ಪೆ, ಪಶುವೈದ್ಯ ದೇವಿ ಪ್ರಸಾದ್ ಕಾನತ್ತೂರು, ಕಲ್ಮಡ್ಕ ಗ್ರಾಪಂ ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ, ಸಾಮಾಜಿಕ ಮುಖಂಡ ಲಕ್ಷ್ಮೀಶ ಗಬ್ಲಡ್ಕ , ಲಕ್ಷ್ಮಣ ಬೊಳ್ಳಾಜೆ ಮೊದಲಾದವರು ಭೇಟಿ ನೀಡಿ ಬೆಂಬಲ ಸೂಚಿಸಿದರು.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…