ಪ್ರಧಾನಿ ನರೇಂದ್ರ ಮೋದಿ ಅವರು ಹೈದರಬಾದ್‌ನಲ್ಲಿ 11 ನೇ ಶತಮಾನದ ಸಂತ ಮತ್ತು ಸಮಾಜ ಸುಧಾಕರ ರಾಮಾನುಜಾಚಾರ್ಯರ 216 ಅಡಿ ಪ್ರತಿಮೆಯನ್ನು ಫೆಬ್ರವರಿ 5 ರಂದು ಅನಾವರಣಗೊಳಿಸಲಿದ್ದಾರೆ. ಸಮಾನತೆಯ ಪ್ರತಿಮೆ ಎಂದು ಬಣ್ಣಿಸಲಾದ ಈ ಪ್ರತಿಮೆಯನ್ನು ಶಂಶಾಬಾದ್‌ನಲ್ಲಿ 45 ಎಕರೆ ಸಂಕೀರ್ಣದಲ್ಲಿ ಸ್ಥಾಪಿಸಲಾಗಿದೆ.
ಹೊರಾಂಗಣ 216 ಅಡಿ ಪ್ರತಿಮೆಯು ಕುಳಿತುಕೊಳ್ಳುವ ಭಂಗಿಯಲ್ಲಿ ಎತ್ತರದ ಪ್ರತಿಮೆಗಳಲ್ಲಿ ಒಂದಾಗಿದ್ದು, ಚಿನ್ನ, ಬೆಳ್ಳಿ, ತಾಮ್ರ, ಹಿತ್ತಾಳೆ ಮತ್ತು ಸತುವು ಐದು ಲೋಹಗಳ ಮಿಶ್ರಣವಾದ ಪಂಚಲೋಹದಿಂದ ಪ್ರತಿಮೆಯನ್ನು ಮಾಡಲಾಗಿದೆ. ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಖ್ಯಾತ ಆಧ್ಯಾತ್ಮಕ ಗುರು ಚಿನ್ನ ಜೀಯರ್ ಸ್ವಾಮಿ ಅವರೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇನ್ನು ಹಲವಾರು ಮುಖ್ಯಮಂತ್ರಿಗಳು, ರಾಜಕಾರಣಿಗಳು, ಸೆಲೆಬ್ರಿಟಿಗಳು ಮತ್ತು ನಟರು ಕೂಡ ಸಮಾರಂಭದಲ್ಲಿ ಪಾಲ್ಗೋಳ್ಳಲಿದ್ದಾರೆ.
ಫೆಬ್ರವರಿ 13 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಮಾನುಜರ ಪ್ರತಿಮೆಯ ಒಳ ಕೋಣೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಆಹಾರೋತ್ಪಾದನೆಯ ಕ್ಷೇತ್ರದಲ್ಲಿ ಹಾಲಿ ಉತ್ಪಾದನೆಯ ಪಾತ್ರ ಅತ್ಯಂತ ಪ್ರಮುಖವಾಗಿದೆ. ಭಾರತದಲ್ಲಿ ಆಹಾರ ಪದಾರ್ಥಗಳಿಗಾಗಿ…
ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಹೆಚ್ಚುವರಿ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ ವತಿಯಿಂದ ಮಂಗಳೂರಿನ…
2024 ನೇ ಇಸವಿಯಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ…
ಬೆಂಬಲಬೆಲೆ ಯೋಜನೆಯಡಿ ಶೇಂಗಾ ಖರೀದಿ ನೋಂದಣಿ ಮತ್ತು ಖರೀದಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು…
2024-25 ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತಿಯ ಪಿಯುಸಿ ಪರೀಕ್ಷೆ-1 ರ ಅಂತಿಮ…