ಬಿಜೆಪಿ ಟಿಕೆಟ್ | ಜಗದೀಶ್ ಶೆಟ್ಟರ್ ಅಸಮಾಧಾನ ಸ್ಪೋಟ | ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ |

April 12, 2023
10:59 AM

ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಆರಂಭಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ಈ ನಡುವಲ್ಲೇ ಬಿಜೆಪಿ ಕೊನೆಗೂ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

Advertisement

ಈ ಪಟ್ಟಿಯಲ್ಲಿ ಕೆಲ ಹಾಲಿ ಶಾಸಕರಿಗೆ ಹೈಕಮಾಂಡ್ ಕೊಕ್​ ನೀಡಿದ್ದು, ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರಿಗೂ ಕೂಡ ಟಿಕೆಟ್​ ನೀಡಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಶೆಟ್ಟರ್​ ಅವರು, ಈ ಬಾರಿಯ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿಯೇ ತೀರುತ್ತೇನೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದರು.

ಈ ಬೆಳವಣಿಗೆ ನಡುವಲ್ಲೇ ಬಿಜೆಪಿ ಹೈಕಮಾಂಡ್ ಜಗದೀಶ್ ಶೆಟ್ಟರ್ ಅವರನ್ನು ನವದೆಹಲಿಗೆ ಬರುವಂತೆ ದಿಢೀರ್ ಆಹ್ವಾನ ನೀಡಿದೆ. ಅದರಂತೆ ಜಗದೀಶ್ ಶೆಟ್ಟರ್​ ಇಂದು ದೆಹಲಿಗೆ ತೆರಳುತ್ತಿದ್ದು, ಅದಕ್ಕೂ ಮೊದಲು ಸುದ್ದಿಗೋಷ್ಠಿ ನಡೆಸಿ ಟಿಕೆಟ್​ ಸಿಗುವ ಕುರಿತು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ನಾಯಕರು ದೆಹಲಿಗೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುತ್ತಿದ್ದೇನೆ. ಯಡಿಯೂರಪ್ಪ ಅವರನ್ನು ಭೇಟಿಯಾಗಬೇಕಿತ್ತು. ಆದರೆ, ಬೇಗ ಹೋಗಬೇಕಾಗಿರುವ ಕಾರಣ ಬೆಂಗಳೂರು ಏರ್​ಪೋರ್ಟ್ ನಿಂದ ನೇರವಾಗಿ ದೆಹಲಿಗೆ ಹೋಗುತ್ತಿದ್ದೇನೆ. ಮಂತ್ರಿ ಸ್ಥಾನ ಸಿಗದಿದ್ದರೂ 2 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಕೆಲಸ ಮಾಡುವುದಕ್ಕೆ ಮಂತ್ರಿ ಸ್ಥಾನವೇ ಬೇಕು ಅಂತೇನಿಲ್ಲ. ನನಗೆ ಯಾವುದೇ ಸ್ಥಾನಮಾನ ನೀಡದಿದ್ದರೂ ಕೆಲಸ ಮಾಡಿದ್ದೇನೆ. ರಾಷ್ಟ್ರೀಯ ನಾಯಕರಿಂದ ಪಾಸಿಟಿವ್ ರೆಸ್ಪಾನ್ಸ್ ಬರುವ ವಿಶ್ವಾಸವಿದೆ ಎಂದು ಹೇಳಿದರು.

ಯಾವುದೇ ಸ್ಥಾನಮಾನ ಇಲ್ಲದಿದ್ದರೂ ಪಕ್ಷದಲ್ಲಿ ಇದ್ದೇನೆ. ಯಾವುದೇ ಅಧಿಕಾರ ಇಲ್ಲದೆ ಪಕ್ಷ ಸಂಘಟನೆ ಮಾಡಿದ್ದೇನೆ. ಎಷ್ಟೋ ಕೆಲಸಗಳನ್ನು ನಮ್ಮ ಸಚಿವರ ಮೂಲಕ ಮಾಡಿಸಿದ್ದೇನೆ. ರಾಜಕಾರಣದಲ್ಲಿ ಗೌರವಯುತವಾಗಿ ನಿವೃತ್ತಿಯಾಗಬೇಕು. ಈ ರೀತಿ ಪಕ್ಷದಿಂದ ಹೊರಗಡೆ ಹೋಗಬಾರದು. ಬಿಜೆಪಿ ಟಿಕೆಟ್ ಸಿಕ್ಕವರಲ್ಲಿ 75-76 ವರ್ಷದವರು ಇದ್ದಾರೆ. ಅವರನ್ನು ಸೀನಿಯರ್ಸ್ ಎನ್ನುವುದಿಲ್ಲವೇ ಎಂದು ಪ್ರಶ್ನಿಸಿದರು. ಇದೇ ವೇಳೆ ರಾಷ್ಟ್ರೀಯ ನಾಯಕರ ಭಾವನೆ‌ ಮೇಲೆ ನನ್ನ ನಿರ್ಧಾರವಿರುತ್ತದೆ ಎಂದು ಸ್ಪಷ್ಟಪಡಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ
May 9, 2025
7:51 AM
by: ದ ರೂರಲ್ ಮಿರರ್.ಕಾಂ
ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |
May 9, 2025
7:46 AM
by: ದ ರೂರಲ್ ಮಿರರ್.ಕಾಂ
ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?
May 9, 2025
7:39 AM
by: ದ ರೂರಲ್ ಮಿರರ್.ಕಾಂ
ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ
May 8, 2025
8:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group