Advertisement
ಸುದ್ದಿಗಳು

ವಾಯುಪಡೆಯ ಯುದ್ಧ ಘಟಕದ ಮೊದಲ ಮಹಿಳಾ ಮುಖ್ಯಸ್ಥೆ ಶಾಲಿಜಾ | ಯಾರಿವರು ಗೊತ್ತಾ?

Share

ಭಾರತೀಯ ವಾಯುಪಡೆಯು ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರನ್ನು ಪಶ್ಚಿಮ ವಲಯದಲ್ಲಿನ ಮುಂಚೂಣಿ ಯುದ್ಧ ಘಟಕದ ಕಮಾಂಡರ್‌ ಆಗಿ ನೇಮಕ ಮಾಡಲಾಗಿದೆ. ಆ ಮೂಲಕ ಐಎಎಫ್‌ನ ಯಾವುದೇ ಯುದ್ಧ ಘಟಕವನ್ನು ಮುನ್ನಡೆಸಲಿರುವ ಮೊದಲ ಮಹಿಳೆ ಎನ್ನುವ ಹಿರಿಮೆಗೆ ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರು ಪಾತ್ರರಾಗಿದ್ದಾರೆ.

2003ರಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರು ಐಎಎಫ್ ಸೇರ್ಪಡೆಯಾಗಿದ್ದರು. ಇವರು ಪಶ್ಚಿಮ ವಲಯದ ಹೆಲಿಕಾಪ್ಟರ್ ಘಟಕವೊಂದರ ಫ್ಲೈಟ್ ಕಮಾಂಡರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಗ್ರೂಪ್ ಕ್ಯಾಪ್ಟನ್ ಹುದ್ದೆಯು ಸೇನೆಯಲ್ಲಿನ ಕರ್ನಲ್ ಹುದ್ದೆಗೆ ಸರಿಸಮನಾಗಿದೆ.

ಸದ್ಯ ಕಮಾಂಡ್ ಹೆಲಿಕಾಪ್ಟರ್ ಮುಂಚೂಣಿ ಕಾರ್ಯಾಚರಣೆಯ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಾಲಿಜಾ ಧಾಮಿ, ಎರಡು ಸಂದರ್ಭಗಳಲ್ಲಿ ಏರ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್ ಆಗಿ ಪಡೆಯನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ.

ವಾಯುಪಡೆಯಲ್ಲಿ ಹಲವು ಪ್ರಥಮಗಳ ಕೀರ್ತಿ ಪಡೆದ ಹೆಗ್ಗಳಿಕೆಗೆ ಪಾತ್ರರಾಗಿರುವ ಶಾಲಿಜಾ, 15ಕ್ಕೂ ಹೆಚ್ಚು ವರ್ಷಗಳ ಅನುಭವಗಳನ್ನು ಐಎಎಫ್‌ನಲ್ಲಿ ಪಡೆದಿದ್ದಾರೆ. ಪಂಜಾಬ್‌ನ ಲೂಧಿಯಾನದಲ್ಲಿ ಜನಿಸಿದ ಇವರು 2003ರಲ್ಲಿ ಎಚ್‌ಎಎಲ್ ಎಚ್‌ಪಿಟಿ-32 ದೀಪಕ್ ಅನ್ನು ಮೊದಲ ಬಾರಿಗೆ ಏಕಾಂಗಿಯಾಗಿ ಹಾರಿಸಿದ್ದರು. 2003ರಲ್ಲಿ ಐಎಎಫ್‌ನಲ್ಲಿ ಫ್ಲೈಯಿಂಗ್ ಆಫೀಸರ್ ಆಗಿ ನೇಮಕಗೊಂಡು 2005ರಲ್ಲಿ ಫ್ಲೈಟ್ ಲೆಫ್ಟಿನೆಂಟ್ ಹಾಗೂ 2009ರಲ್ಲಿ ಸ್ಕ್ವಾಡ್ರನ್ ಲೀಡರ್ ಆಗಿ ಬಡ್ತಿ ಪಡೆದಿದ್ದರು.

ಸಿಯಾಚಿನ್‌ನಲ್ಲಿ ಕಾರ್ಯ ನಿರ್ವಹಿಸುವ ಭಾರತೀಯ ಸೇನೆಯ ಫೈರ್ ಆಂಡ್ ಫ್ಯೂರಿ ಕಾರ್ಪ್ಸ್‌ನ ಮೊದಲ ಮಹಿಳಾ ಅಧಿಕಾರಿಯಾಗಿ ಕ್ಯಾಪ್ಟನ್ ಶಿವ ಚೌಹಾಣ್ ಅವರನ್ನು ನೇಮಿಸಿದ ಸಂದರ್ಭದಲ್ಲಿಯೇ ಶಾಲಿಜಾ ಅವರ ನೇಮಕ ನಡೆದಿದೆ. ಪ್ರಸ್ತುತ ಐಎಎಫ್ ಸುಮಾರು 20 ಮಹಿಳಾ ಯುದ್ಧ ವಿಮಾನ ಪೈಲಟ್‌ಗಳನ್ನು ಹೊಂದಿದೆ.

ಐಎಎಫ್ ಇತಿಹಾಸದಲ್ಲಿ ಯಾವುದೇ ಮುಂಚೂಣಿ ಯುದ್ಧ ಘಟಕದ ಅಧಿಕಾರವನ್ನು ಈವರೆಗೂ ಮಹಿಳಾ ಅಧಿಕಾರಿಗೆ ನೀಡಿದ ಉದಾಹರಣೆಯೇ ಇಲ್ಲ. ಆದರೆ ಈ ತಿಂಗಳ ಆರಂಭದಲ್ಲಿ ಸೇನೆಯು ಮಹಿಳಾ ಅಧಿಕಾರಿಗಳನ್ನು ಇದೇ ಮೊದಲ ಬಾರಿಗೆ ವೈದ್ಯಕೀಯ ತಂಡದ ಆಚೆಗೆ ಕಮಾಂಡ್ ಕಾರ್ಯಗಳಿಗೆ ನಿಯೋಜಿಸುವುದನ್ನು ಆರಂಭಿಸಿದೆ.

ಮುಂಚೂಣಿ ನೆಲೆ ಸೇರಿದಂತೆ ಕಾರ್ಯಾಚರಣೆ ನಡೆಸುವ ಪ್ರದೇಶಗಳಲ್ಲಿನ ಸುಮಾರು 50 ಘಟಕಗಳ ನೇತೃತ್ವವನ್ನು ಶಾಲಿಜಾ ಧಾಮಿ ಅವರು ವಹಿಸಿಕೊಳ್ಳುತ್ತಿದ್ದಾರೆ. ಇದು ಉತ್ತರ ಮತ್ತು ಪೂರ್ವ ಎರಡೂ ಕಮಾಂಡ್‌ಗಳಲ್ಲಿ ನಡೆದಿದೆ.

ಅತ್ಯಂತ ಕ್ಲಿಷ್ಟಕರ ವಾತಾವರಣವಿರುವ, 15,600 ಅಡಿ ಎತ್ತರದ ಸಿಯಾಚಿನ್ ಪ್ರದೇಶದಲ್ಲಿ ಕ್ಯಾಪ್ಟನ್ ಶಿವ ಚೌಹಾಣ್ ಮೊದಲ ಮಹಿಳಾ ಅಧಿಕಾರಿಯಾಗಿ ಫೈರ್ ಆಂಡ್ ಫ್ಯೂರಿ ಕಾರ್ಪ್ಸ್ ವಿಭಾಗದಲ್ಲಿ ನೇಮಕಗೊಂಡಿದ್ದರು. ಜನವರಿಯಲ್ಲಿ ಅವರು ಮೂರು ತಿಂಗಳ ಕಾಲದ ಕಾರ್ಯಾಚರಣೆಗೆ ನಿಯೋಜನೆಗೊಂಡಿದ್ದರು. ಇದಕ್ಕೂ ಮುನ್ನ ಅವರು ಒಂದು ತಿಂಗಳ ಕಠಿಣ ತರಬೇತಿ ಪಡೆದಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

19 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

20 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

20 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

1 day ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

2 days ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

2 days ago