Advertisement
MIRROR FOCUS

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

Share

ದೇಶದ ಕೃಷಿ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ ಭಾರತೀಯ ಕೃಷಿ ಸಂಶೋಧನಾ ಮಂಡಳಿ  (ICAR) ಮಹತ್ವದ ಹೆಜ್ಜೆ ಇಟ್ಟಿದ್ದು, ವಿಶೇಷ ಟಾಸ್ಕ್ ಫೋರ್ಸ್ ರಚನೆಗೆ ಘೋಷಣೆ ಮಾಡಿದೆ. ಹವಾಮಾನ ಬದಲಾವಣೆ, ಸಂಪನ್ಮೂಲ ಕೊರತೆ ಹಾಗೂ ಕೃಷಿಯಲ್ಲಿ ಎದುರಾಗುತ್ತಿರುವ ಸವಾಲುಗಳನ್ನು ಎದುರಿಸಲು ಈ ತಂಡ ಕಾರ್ಯನಿರ್ವಹಿಸಲಿದೆ.

1929ರಲ್ಲಿ ಸ್ಥಾಪನೆಯಾದ ICAR ದೇಶದ ಕೃಷಿ ಸಂಶೋಧನೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಸಂಸ್ಥೆಯಾಗಿದ್ದು, ಕೃಷಿ, ತೋಟಗಾರಿಕೆ, ಮೀನುಗಾರಿಕೆ ಮತ್ತು ಪಶುಪಾಲನೆ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರವಹಿಸುತ್ತಿದೆ.

 ಟಾಸ್ಕ್ ಫೋರ್ಸ್ ಮುಖ್ಯ ಉದ್ದೇಶಗಳು : ವಿಶೇಷ ಟಾಸ್ಕ್ ಫೋರ್ಸ್ ಕೃಷಿಯಲ್ಲಿ ಎದುರಾಗುತ್ತಿರುವ ಸವಾಲುಗಳನ್ನು ಎದುರಿಸಲು ಕೆಲಸ ಮಾಡುತ್ತದೆ. ವಿಶೇಷವಾಗಿ ಹವಾಮಾನ ಬದಲಾವಣೆಗೆ ತಕ್ಕ ಕೃಷಿ ವ್ಯವಸ್ಥೆ ನಿರ್ಮಾಣ , ಆಹಾರ ಭದ್ರತೆ ಹೆಚ್ಚಿಸುವುದು, ರೈತರಿಗೆ ನೇರ ತಾಂತ್ರಿಕ ಮಾರ್ಗದರ್ಶನ, ಸಂಪನ್ಮೂಲಗಳ ಸಮರ್ಪಕ ಬಳಕೆ ಮಾಡಲು ನೆರವಾಗಲಿದೆ.

 ಪ್ರಮುಖ ಕ್ರಮಗಳು

  • 100 ಜಿಲ್ಲೆಗಳಲ್ಲಿ ರೈತರ ಸಂಪರ್ಕ ವಿಸ್ತರಣೆ
  • ಮಣ್ಣಿನ ಆರೋಗ್ಯ ಹಾಗೂ ಗೊಬ್ಬರ ಬಳಕೆ ಸುಧಾರಣೆ
  • ಬೆಳೆ ವೈವಿಧ್ಯೀಕರಣಕ್ಕೆ ಉತ್ತೇಜನ
  • ಮಿಲ್ಲೆಟ್ ಬೆಳೆಯ ಪ್ರದೇಶಗಳ ಮ್ಯಾಪಿಂಗ್
  • ಕೃಷಿಯಲ್ಲಿ ಯಂತ್ರೋಪಕರಣ ಮತ್ತು ತಂತ್ರಜ್ಞಾನ ಬಳಕೆ ಹೆಚ್ಚಿಸುವುದು

ಈ ಕ್ರಮಗಳು ರೈತರ ಉತ್ಪಾದನೆ ಹಾಗೂ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡುವುದಾಗಿ ನಿರೀಕ್ಷಿಸಲಾಗಿದೆ.

 ಹವಾಮಾನ ಸವಾಲುಗಳಿಗೆ ಪರಿಹಾರ : ಹವಾಮಾನ ಬದಲಾವಣೆ ಹಿನ್ನೆಲೆಯಲ್ಲಿ ಕೃಷಿಯಲ್ಲಿ ಸ್ಥಿರತೆ ಅತ್ಯಂತ ಅಗತ್ಯವಾಗಿದೆ. ಈ ಟಾಸ್ಕ್ ಫೋರ್ಸ್ ಆ ದಿಕ್ಕಿನಲ್ಲಿ ಸಮಗ್ರ ಪರಿಹಾರ ಒದಗಿಸಲು ರೂಪಿಸಲಾಗಿದೆ.

ರೈತರಿಗೆ ಲಾಭ ಏನು? : ಇದರಿಂದ ರೈತರಿಗೆ ಪ್ರಮುಖವಾಗಿ ವಿವಿಧ ಲಾಭಗಳ ಬಗ್ಗೆ ನಿರೀಕ್ಷಿಸಲಾಗಿದೆ. ಉತ್ಪಾದನೆ ಹೆಚ್ಚಳ, ವೆಚ್ಚ ಕಡಿತ, ನವೀನ ತಂತ್ರಜ್ಞಾನ ಬಳಕೆ, ನೇರ ಮಾರ್ಗದರ್ಶನ  ಒಟ್ಟಾರೆ, ರೈತರ ಆದಾಯ ಮತ್ತು ಭದ್ರತೆ ಹೆಚ್ಚುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ICAR ಟಾಸ್ಕ್ ಫೋರ್ಸ್ ಕೃಷಿ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಗಬಹುದು.  ಹವಾಮಾನ ಸವಾಲುಗಳನ್ನು ಎದುರಿಸಿ, ಸ್ಥಿರ ಮತ್ತು ಲಾಭದಾಯಕ ಕೃಷಿಗೆ ದಾರಿ ಮಾಡಿಕೊಡುವ ಪ್ರಮುಖ ಹೆಜ್ಜೆ ಇದು ಎಂದು ನಿರೀಕ್ಷಿಸಲಾಗಿದೆ.

ICAR has announced a Special Task Force to strengthen India’s agriculture sector. The initiative focuses on climate-resilient farming, improved productivity, and better farmer support, aiming to enhance income and sustainability.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

5 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

13 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

14 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

14 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

1 day ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

1 day ago