ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಆಯೋಜಿಸಿದ್ದ ವಿಶ್ವವಿದ್ಯಾಲಯದ 9 ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಕೃಷಿ ಮತ್ತು ತೋಟಗಾರಿಕೆ ಪದವೀಧರರು, ವಿದ್ಯಾರ್ಥಿಗಳು ರೈತರಿಗೆ ಲಾಭದಾಯಕವಾದ, ಪರಿಸರಕ್ಕೆ ಪೂರಕವಾದ ಕೃಷಿ ಸಂಶೋಧನೆಗಳನ್ನು ಕೈಗೊಂಡು ಕೊಡುಗೆ ನೀಡಬೇಕೆಂದು ಕರೆ ನೀಡಿದ್ದಾರೆ. ಘಟಿಕೋತ್ಸವದಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ 17 ಪದವಿ ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಬಾಜನರಾಗಿದ್ದಾರೆ. ಅವರಿಗೆ ಒಟ್ಟು 31 ಚಿನ್ನದ ಪದಕಗಳನ್ನು ನೀಡಲಾಯಿತು. ಘಟಿಕೋತ್ಸವದಲ್ಲಿ ಒಟ್ಟು 994 ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…
ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…
ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, …
ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…