ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ |ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್

September 28, 2024
7:52 PM

ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ ಕೇಳಬಾರದು. ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ ಪತ್ರ ಬರೆಯಿರಿ ಎಂದು ಉಪಮುಖ್ಯಮಂತ್ರಿ ಡಿ .ಕೆ.ಶಿವಕುಮಾರ್ ತಿಳಿಸಿದ್ದಾರೆ.  

ಸಾತನೂರಿನ ಗ್ರಾಮಾಂತರ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ತಾಲೂಕಿನಲ್ಲಿ ಪಾರದರ್ಶಕವಾಗಿ ಆಡಳಿತ ನಡೆಯಬೇಕು. ನನ್ನನ್ನು ಗೆಲ್ಲಿಸಿದ ನಿಮ್ಮ ಋಣ ತೀರಿಸಬೇಕು ಎಂದರು.  ಈ ಹಿಂದೆ 8 ಸಾವಿರಕ್ಕೂ ಹೆಚ್ಚು ಜನರಿಗೆ ಬಗರ್ ಹುಕುಂ ಜಮೀನು ನೀಡಿದ್ದೇವೆ. ನಿವೇಶನ, ಮನೆ ಹಂಚಿದ್ದೇವೆ.  ಕನಕಪುರ ಭಾಗದಲ್ಲಿ 2-3 ಲಕ್ಷಕ್ಕೆ ಜಮೀನು ಕೇಳುವವರು ಇರಲಿಲ್ಲ.ಈ ಭಾಗವನ್ನು ಅಭಿವೃದ್ಧಿ ಮಾಡಿದ ಪರಿಣಾಮವಾಗಿ ಜಮೀನುಗಳ ಬೆಲೆಯೂ ಹೆಚ್ಚಾಗಿದೆ. ಎರಡು, ಮೂರು ಲಕ್ಷ ಬಾಳುತ್ತಿದ್ದ ಜಮೀನುಗಳ ಬೆಲೆ ದುಪ್ಪಟ್ಟಾಗಿದೆ. ನಾನು ಹಿಂದೆ ಜಮೀನುಗಳನ್ನು ಮಾರಬೇಡಿ ಎಂದು ಸಲಹೆ ನೀಡಿದ್ದೆ. ಆದರೂ ಒಂದಷ್ಟು ಜನ ಜಮೀನುಗಳನ್ನು ಮಾರಿಕೊಂಡಿದ್ದಾರೆ ಎಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror