ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಡಿಕೆ ಆಮದು ರದ್ದು ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ದೇಶೀಯ ಅಡಿಕೆ ಧಾರಣೆಯು ಆಮದು ಅಡಿಕೆಯ ಕಾರಣದಿಂದ ಇಳಿಕೆಯಾಗಿದ್ದು, ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಕಾಂಗ್ರೆಸ್ ಬದ್ಧವಾಗಿದೆ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭೂತಾನ್, ಬರ್ಮಾ ಜತೆಗಿನ ಅಡಿಕೆ ಆಮದು ಒಪ್ಪಂದ ರದ್ದು ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ ಎಂದು “ವಿಜಯಕರ್ನಾಟಕ” ವರದಿ ಮಾಡಿದೆ.
ಭೂತಾನ್ ಅಡಿಕೆ ಆಮದಿಗಿಂತಲೂ ಚಾಲಿ ಅಡಿಕೆಯ ಮೇಲೆ ಅಕ್ರಮವಾಗಿ ಸಾಗಾಟವಾಗುತ್ತಿರುವ ಬರ್ಮಾ ಅಡಿಕೆಯಿಂದ ಸಮಸ್ಯೆಯಾಗುತ್ತಿದೆ. ಅಕ್ರಮವಾಗಿ ಅಡಿಕೆಯನ್ನು ಬರ್ಮಾದಿಂದ ಸಾಗಾಟ ಮಾಡಲಾಗುತ್ತಿದೆ. ಹೀಗಾಗಿ ದೇಶೀ ಚಾಲಿ ಅಡಿಕೆಯ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆಯೂ ಕ್ರಮವಾಗಬೇಕು ಎನ್ನುವುದು ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರ ಒತ್ತಾಯ ಇತ್ತು.
ರಾಜ್ಯದ ಕೆಲವು ಕಡೆ ಮಳೆ ಕಡಿಮೆ ಇದ್ದು, ಮುಂದಿನ 7 ದಿನಗಳ ಹವಾಮಾನ…
ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…
ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…