ಕೃಷಿಯಲ್ಲಿ ಹಸಿರೆಲೆ ಗೊಬ್ಬರಗಳ ಬಳಕೆ ನೂರಾರು ವರ್ಷಗಳಷ್ಟು ಹಿಂದಿನಿಂದಲೂ ಬಂದ ಪದ್ಧತಿ. ಇದು ಮಣ್ಣಿನ ಫಲವತ್ತತೆ ಮತ್ತು ಭೌತಿಕ ಗುಣಧರ್ಮಗಳನ್ನು ಕಾಪಾಡುವಲ್ಲಿ ಬಹಳ ಪರಿಣಾಮಕಾರಿಯಾದ ಪದ್ಧತಿ. ರಾಸಾಯನಿಕ ಗೊಬ್ಬರಗಳ ಉಪಯೋಗದ ಉಪಯೋಗ ಅಧಿಕವಾಗುತ್ತಾ ಹೋದಂತೆ, ಹಸಿರೆಲೆ ಗೊಬ್ಬರಗಳ ಉಪಯೋಗದ ಪ್ರಮಾಣ ಕಡಿಮೆಯಾಗುತ್ತಾ ಬರುತ್ತಿದೆ. ರಸಗೊಬ್ಬರಗಳ ಬೆಲೆ ಅಧಿಕವಾಗುತ್ತಾ ಹೋಗುತ್ತಿರುವ ಈ ಕಾಲದಲ್ಲಿ ಸುಲಭವಾಗಿ ಮತ್ತು ಅಗ್ಗವಾಗಿ ಒದಗುತ್ತಿರುವ ಮತ್ತು ಉಪಯೋಗಿಸಲ್ಪಡಬಹುದಾದ ಹಸಿರೆಲೆ ಗೊಬ್ಬರಗಳ ಬಗ್ಗೆ ಮತ್ತೆ ಗಮನಹರಿಸುವುದು ಅವಶ್ಯಕ.
ಸಸ್ಯಗಳ ಎಲೆ, ಎಲೆಯ ಕಾಂಡ ಮತ್ತು ಬೇರು ಇವುಗಳ ಮೂಲದಿಂದ ದೊರೆಯುವ ಸಾವಯವ ವಸ್ತುಗಳನ್ನು ಹಸಿರೆಲೆ ಗೊಬ್ಬರಳಲ್ಲಿ ಮೂರು ಬಗೆ :
1. ಹಸಿರೆಲೆಯನ್ನೇ ಹೆಚ್ಚು ಕೊಡುವ ವಾರ್ಷಿಕ ಸಸ್ಯಗಳಾದ ಡಯುಂಚ, ಅಪ್ಸೆುಣಬು, ಸಸ್ಬೇನಿಯಾ, ಸೋಯಾ, ಅವರೆ, ಹೆಸರು, ಅಲಸಂದೆ, ಹುರುಳಿ ಮುಂತಾದವು.
2. ಹಸಿರೆಲೆಯನ್ನು ಯಥೇಚ್ಛವಾಗಿ ಕೊಡುವ ಹೊಂಗೆ, ಬೇವು, ಸುಬಾಬುಲ್, ಗ್ಲಿರಿಸೀಡಿಯಾದಂತಹ ಬಹುವಾರ್ಷಿಕ ಮರ ಮತ್ತು
3. ಕಾಯಿ ಕಚ್ಚುವ ಮುನ್ನವೇ ಕಾಂಪೋಸ್ಟ್ ಮಾಡಿಕೊಂಡಾಗಲಿ ಅಥವಾ ನೇರವಾಗಿ ಭೂಮಿಯಲ್ಲಿ ಸೇರಿಸುವಂತಹ ಸಸ್ಯಗಳು ಇವುಗಳಲ್ಲಿ ಮುಖ್ಯವಾಗಿ ಎಕ್ಕ, ಉಗನಿ, ಪಾರ್ಥೇನಿಯಂ, ಕಮ್ಯೂನಿಸ್ಟ್ ಗಿಡ ( ಕ್ರೊಮೊಲೇನಾ ಕಳೆ ), ನೀರು ಸೊಪ್ಪು ಇತ್ಯಾದಿ. ಸುಸ್ಥಿರ ಕೃಷಿಯಲ್ಲಿ ಹಸಿರೆಲೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು, ಇಳುವರಿಯನ್ನು ಹೆಚ್ಚಿಸುವ ಪ್ರಯತ್ನವಾಗಬೇಕು. ಇದಕ್ಕೆ ಹಸಿರೆಲೆ ಗೊಬ್ಬರದ ಬಳಕೆ ಪೂರಕವಾಗಿದೆ.
ಹಸಿರೆಲೆ ಗೊಬ್ಬರದ ಮಹತ್ವ:
1. ಮಣ್ಣಿನ ಭೌತಿಕ, ರಾಸಾಯನಿಕ ಹಾಗೂ ಜೈವಿಕ ಗುಣಗಳ ಅನುಕೂಲಕರವಾದ ಬದಲಾವಣೆಗೆ ಸಹಕಾರಿಯಾಗುವುದು.
2. ಮಣ್ಣಿನಲ್ಲಿ ಸಾವಯವ ಅಂಶವನ್ನು ಕಾಪಾಡಿಕೊಂಡು ಬುರುವುದು.
3. ಮಣ್ಣಿನಲ್ಲಿರುವ ಜೈವಿಕ ಸೂಕ್ಷ್ಮಾಣುಗಳ ಚಟುವಟಿಕೆ ಹಾಗೂ ಅಭಿವೃದ್ಧಿಗೆ ನೆರವಾಗುವುದು. ಇದರಿಂದ ಸಾವಯವ ವಸ್ತುಗಳು ಕೊಳೆತು ಅವುಗಳಲ್ಲಿರುವ ಪೋಷಕಾಂಶಗಳು ಬೆಳೆಗೆ ಲಭ್ಯವಾಗುವುದು.
4. ಮಣ್ಣಿನ ಕೆಳ ಪದರಗಳಲ್ಲಿರುವ ಪೋಷಕಾಂಶಗಳನ್ನು ಬೇರುಗಳು ಹೀರಿಕೊಳ್ಳುವುದರಿಂದ ಈ ಗಿಡಗಳನ್ನು ಕಿತ್ತು ಮತ್ತೆ ಮಣ್ಣಿನಲ್ಲಿ ಸೇರಿಸುವ ಮೂಲಕ ಆಳದಲ್ಲಿರುವ ಸಸ್ಯ ಪೋಷಕಾಂಶಗಳನ್ನು ಮೇಲ್ಪದರಕ್ಕೆ ತರುವ ಕ್ರಿಯೆ ಉಂಟಾಗುವುದು.
5. ಹಸಿರೆಲೆ ಗೊಬ್ಬರದ ಸಸ್ಯಗಳು ಮಣ್ಣಿನ ಮೇಲೆ ಹೊದಿಕೆಯಾಗಿರುವುದರಿಂದ ಮಳೆಯ ನೀರು ಹೆಚ್ಚಾಗಿ ಇಂಗಿ ಮಣ್ಣು ಕೊಚ್ಚಿಹೋಗುವುದು ಕಡಿಮೆಯಾಗುವುದಲ್ಲದೆ ಮಣ್ಣಿನಲ್ಲಿ ತಾಪ ಕಡಿಮೆಯಾಗಿರುವುದು.
6. ವಾತಾವರಣವಲ್ಲಿರುವ ಸಾರಜನಕದ ಸ್ಥಿರೀಕರಣ ಕ್ರಿಯೆಯಲ್ಲಿ ನೆರವಾಗುವುದು.
7. ಸಸ್ಯಗಳ ಕೊಳೆಯುವಿಕೆಯಾಗುವಾಗ ಹೊರಬರುವ ಆಮ್ಲಗಳಿಂದ ಪೋಷಕಾಂಶ ಲಭ್ಯತೆ ಹೆಚ್ಚುವುದು.
8. ಕ್ಷಾರ ಮಣ್ಣಿನ ಸುಧಾರಣೆಯಲ್ಲಿ ನೆರವಾಗುವುದು.
9. ಜಂತು ಹುಳುವಿನ ಬಾಧೆಯ ನಿಯಂತ್ರಣದಲ್ಲೂ ನೆರವಾಗುವುದು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…