ಸಂಸದೆ ಹಾಗೂ ನಟಿ ಸುಮಲತಾ ಅಂಬರೀಶ್ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕು ದೊಡ್ಡರಸಿಕೆರೆ ಗ್ರಾಮದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಮತದಾನ ನಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ ಕೂಡ. ಹಾಗಾಗಿ ತಪ್ಪದೇ ಎಲ್ಲರೂ ಮತದಾನ ಮಾಡಿ. ಯಾರು ವೋಟು ಹಾಕುವುದಿಲ್ಲವೋ ಅವರು ಪ್ರಶ್ನೆ ಮಾಡುವ ಹಕ್ಕನ್ನೇ ಕಳೆದುಕೊಳ್ಳುತ್ತಾರೆ’ ಎಂದು ಮಾತನಾಡಿದರು.
ಕುಟುಂಬ ಸಮೇತ ಸಾಮಾನ್ಯರಂತೆ ಮತದಾನ ಕೇಂದ್ರಕ್ಕೆ ಬಂದ ಡಾಲಿ ಧನಂಜಯ್ ಮತದಾನ ಮಾಡಿದ್ದಾರೆ. ಸಹೋದರಿ, ಸಹೋದರ ಸೇರಿದಂತೆ ಕುಟುಂಬದ ಸದಸ್ಯರೊಂದಿಗೆ ಅರಸಿಕೆರೆ ತಾಲ್ಲೂಕು ಕಾಳೇನಹಳ್ಳಿ ಮತದಾನ ಕೇಂದ್ರಕ್ಕೆ ಆಗಮಸಿದ್ದ ಧನಂಜಯ್, ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ.
ಬಿಳಿ ಶರ್ಟ್ ಹಾಗೂ ಲುಂಗಿ ಧರಿಸಿದ್ದ ಧನಂಜಯ್, ತಾವು ಕಲಿತಿದ್ದ ಶಾಲೆಯಲ್ಲೇ ಮತದಾನ ಮಾಡಿ ಸಂಭ್ರಮಿಸಿದ್ದರು. ಅದೇ ಸಮಯದಲ್ಲಿ ಆಗಮಿಸಿದ್ದ ಅಭಿಮಾನಿಗಳ ಜೊತೆ ಸೆಲ್ಫಿಗೆ ಸಹಕರಿಸಿದರು. ನೆಚ್ಚಿನ ನಟನ ಜೊತೆ ಅನೇಕರು ಫೋಟೋ ತಗೆಸಿಕೊಂಡು ಖುಷಿ ಪಟ್ಟರು. ಮತದಾನ ಎಷ್ಟು ಶ್ರೇಷ್ಠ ಎನ್ನುವ ಕುರಿತು ಡಾಲಿ ಮಾತನಾಡಿದರು.
ಡಿವೈನ್ ಸ್ಟಾರ್, ನಟ ರಿಷಬ್ ಶೆಟ್ಟಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಮಾಡಿದ್ದಾರೆ. ಉಡುಪಿ ಜಿಲ್ಲೆ, ಬೈಂದೂರು ತಾಲೂಕಿನ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವೈಟ್ ಅಂಡ್ ವೈಟ್ ಡ್ರೆಸ್ ನಲ್ಲಿ ಬಂದಿದ್ದ ರಿಷಬ್ ಶೆಟ್ಟಿ ಮತದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…