ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

August 13, 2025
11:03 PM

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ ಅಡಿಕೆಯ ಮೂಲದ ಬಗ್ಗೆ ತನಿಖೆ ಆರಂಭಿಸಿದೆ. ವಶಪಡಿಸಿಕೊಂಡ ಅಡಿಕೆಯ ಮೌಲ್ಯ ಸುಮಾರು  2.48 ಕೋಟಿ ರೂಪಾಯಿ ಎಂದು ಅಂದಾಜಿಸಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಗುಪ್ತಚರ ಮಾಹಿತಿಯ ಮೇರೆಗೆ, ಅಸ್ಸಾಂ ರೈಫಲ್ಸ್ ಆಗಸ್ಟ್ 11 ರಂದು ಮಿಜೋರಾಂನ ಚಾಂಫೈನ ರುವಾಂಟ್ಲಾಂಗ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ಕಾರ್ಯಾಚರಣೆಯಲ್ಲಿ ಅಕ್ರಮ ಅಡಿಕೆ ಸಾಗಾಟ ಪತ್ತೆಯಾಗಿದೆ. ಈ ಪ್ರದೇಶದಲ್ಲಿ ನಿಷಿದ್ಧ ವಸ್ತುಗಳ ಸಾಗಣೆಯನ್ನು ತಡೆಯಲು ಸತತ ಪ್ರಯತ್ನ ಮಾಡುತ್ತಿದೆ.ವಶಪಡಿಸಿಕೊಂಡ ವಸ್ತುಗಳನ್ನು ಹೆಚ್ಚಿನ ತನಿಖೆ ಮತ್ತು ಕಾನೂನು ಕ್ರಮಕ್ಕಾಗಿ ಚಂಫೈನ ಕಸ್ಟಮ್ಸ್ ಗೆ ಹಸ್ತಾಂತರಿಸಲಾಗಿದೆ. ಇದಕ್ಕೂ ಮೊದಲು, ಭಾರತೀಯ ಸೇನೆಯ ಸ್ಪಿನೆರವಿನೊಂದಿದೆ, ಅಸ್ಸಾಂ ರೈಫಲ್ಸ್ ಮತ್ತು ಮಣಿಪುರ ಪೊಲೀಸರು ಆಗಸ್ಟ್ 2 ರಿಂದ 10 ರವರೆಗೆ ಮಣಿಪುರದ ಹಲವಾರು ಜಿಲ್ಲೆಗಳಲ್ಲಿ ಕಾರ್ಯಾಚರಣೆಗಳನ್ನು ನಡೆಸಿದರು. ಅಡಿಕೆ ಸಾಗಾಟವು ಇದುವರೆಗೂ ಕಳ್ಳಸಾಗಾಣಿಕೆ ನಡೆಯುತ್ತಿತ್ತು. ಬರ್ಮಾ ಅಡಿಕೆಯನ್ನು ಗಡಿಭಾಗದಲ್ಲಿ ಕಳ್ಳಸಾಗಾಣಿಕೆಯ ಮೂಲಕ ಸಾಗಿಸಿ ನಂತರ ದೇಶದ ವಿವಿಧ ಕಡೆಗಳಿಗೆ ಸಾಗಿಸುವ ದಂಧೆ ನಡೆಯುತ್ತಿತ್ತು. ಈ ಬಾರಿ ಅಡಿಕೆಯ ಮೂಲದ ಬಗ್ಗೆ ತನಿಖೆಯಾಗುತ್ತಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror