ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ ಅಡಿಕೆಯ ಮೂಲದ ಬಗ್ಗೆ ತನಿಖೆ ಆರಂಭಿಸಿದೆ. ವಶಪಡಿಸಿಕೊಂಡ ಅಡಿಕೆಯ ಮೌಲ್ಯ ಸುಮಾರು 2.48 ಕೋಟಿ ರೂಪಾಯಿ ಎಂದು ಅಂದಾಜಿಸಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ಗುಪ್ತಚರ ಮಾಹಿತಿಯ ಮೇರೆಗೆ, ಅಸ್ಸಾಂ ರೈಫಲ್ಸ್ ಆಗಸ್ಟ್ 11 ರಂದು ಮಿಜೋರಾಂನ ಚಾಂಫೈನ ರುವಾಂಟ್ಲಾಂಗ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ಕಾರ್ಯಾಚರಣೆಯಲ್ಲಿ ಅಕ್ರಮ ಅಡಿಕೆ ಸಾಗಾಟ ಪತ್ತೆಯಾಗಿದೆ. ಈ ಪ್ರದೇಶದಲ್ಲಿ ನಿಷಿದ್ಧ ವಸ್ತುಗಳ ಸಾಗಣೆಯನ್ನು ತಡೆಯಲು ಸತತ ಪ್ರಯತ್ನ ಮಾಡುತ್ತಿದೆ.ವಶಪಡಿಸಿಕೊಂಡ ವಸ್ತುಗಳನ್ನು ಹೆಚ್ಚಿನ ತನಿಖೆ ಮತ್ತು ಕಾನೂನು ಕ್ರಮಕ್ಕಾಗಿ ಚಂಫೈನ ಕಸ್ಟಮ್ಸ್ ಗೆ ಹಸ್ತಾಂತರಿಸಲಾಗಿದೆ. ಇದಕ್ಕೂ ಮೊದಲು, ಭಾರತೀಯ ಸೇನೆಯ ಸ್ಪಿನೆರವಿನೊಂದಿದೆ, ಅಸ್ಸಾಂ ರೈಫಲ್ಸ್ ಮತ್ತು ಮಣಿಪುರ ಪೊಲೀಸರು ಆಗಸ್ಟ್ 2 ರಿಂದ 10 ರವರೆಗೆ ಮಣಿಪುರದ ಹಲವಾರು ಜಿಲ್ಲೆಗಳಲ್ಲಿ ಕಾರ್ಯಾಚರಣೆಗಳನ್ನು ನಡೆಸಿದರು. ಅಡಿಕೆ ಸಾಗಾಟವು ಇದುವರೆಗೂ ಕಳ್ಳಸಾಗಾಣಿಕೆ ನಡೆಯುತ್ತಿತ್ತು. ಬರ್ಮಾ ಅಡಿಕೆಯನ್ನು ಗಡಿಭಾಗದಲ್ಲಿ ಕಳ್ಳಸಾಗಾಣಿಕೆಯ ಮೂಲಕ ಸಾಗಿಸಿ ನಂತರ ದೇಶದ ವಿವಿಧ ಕಡೆಗಳಿಗೆ ಸಾಗಿಸುವ ದಂಧೆ ನಡೆಯುತ್ತಿತ್ತು. ಈ ಬಾರಿ ಅಡಿಕೆಯ ಮೂಲದ ಬಗ್ಗೆ ತನಿಖೆಯಾಗುತ್ತಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…