ಇತ್ತೀಚೆಗೆ ಈಶಾನ್ಯ ರಾಜ್ಯಗಳ ಮೂಲಕ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ವಿಪರೀತವಾಗಿ ನಡೆಯುತ್ತಿದೆ. ಇದೀಗ ಅಸ್ಸಾಂನಲ್ಲಿಯೂ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ ಪತ್ತೆಯಾಗಿದೆ. ಅಸ್ಸಾಂನ ಚುರೈಬರಿ ಪೊಲೀಸರು ಕರೀಮ್‌ಗಂಜ್‌ನಿಂದ ಧರ್ಮನಗರಕ್ಕೆ ಅಕ್ರಮ ಬರ್ಮಾ ಅಡಿಕೆಗಳನ್ನು ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದೆ.
ವರದಿಯ ಪ್ರಕಾರ, ಅಸ್ಸಾಂನ ಕರೀಮ್‌ಗಂಜ್‌ನಿಂದ ಮೊಟ್ಟೆಗಳ ಪೆಟ್ಟಿಗೆ ರವಾನೆಯೊಂದಿಗೆ ಬರ್ಮಾದ ಅಡಿಕೆಯನ್ನು ಸಾಗಿಸಲಾಗುತ್ತಿತ್ತು. ಸುಮಾರು ಹತ್ತು ಚೀಲಗಳಲ್ಲಿದ್ದ ಅಡಿಕೆ ವಶಕ್ಕೆ ಪಡೆಯಲಾಗಿದೆ. ಸುಮಾರು ಎರಡೂವರೆ ಲಕ್ಷ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿದೆ.ಅಕ್ರಮ ವ್ಯಾಪಾರದಲ್ಲಿ ತೊಡಗಿರುವ ಜುಲ್ಫಿಕರ್ ಅಲಿ (30) ಮತ್ತು ಪ್ರಸೇನ್‌ಜಿತ್ ದೇಬ್ (28) ಎಂದು ಗುರುತಿಸಲಾಗಿದೆ. ಇಬ್ಬರೂ ವ್ಯಕ್ತಿಗಳು ತ್ರಿಪುರಾ ರಾಜ್ಯದವರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…