ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಅಕ್ರಮ ಮರಳು ಸಾಗಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ವಿಧಾನಪರಿಷತ್‌ನಲ್ಲಿಂದು ತಿಳಿಸಿದ್ದಾರೆ.………ಮುಂದೆ ಓದಿ……..
ವಿಧಾನಪರಿಷತ್‌ನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಡಾ.ಧನಂಜಯ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಕ್ರಮ ಮರಳು ಸಾಗಾಟ ಮಾಡಿದವರ ವಿರುದ್ಧ 23,572 ಪ್ರಕರಣಗಳನ್ನು ಪತ್ತೆ ಹಚ್ಚಿ, 7629 ಎಫ್‌ಐಆರ್ ದಾಖಲಿಸಲಾಗಿದೆ. ಕಾನೂನುಬಾಹಿರವಾಗಿ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದವರಿಂದ 47 ಕೋಟಿ ರೂಪಾಯಿ ದಂಡ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಒಟ್ಟು 260 ಮರಳು ಬ್ಲಾಕ್‌ಗಳು ಹಾಗೂ 879 ಎಂ-ಸ್ಟಾಂಡ್ ಬ್ಲಾಕ್‌ಗಳಿವೆ. 2023-24 ನೇ ಸಾಲಿನಲ್ಲಿ 24,10,236 ಮೆಟ್ರಿನ್ ಟನ್ ಮರಳಿನಿಂದ 35 ಕೋಟಿ 68 ಲಕ್ಷ ರೂಪಾಯಿ ರಾಜಧನ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.