ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ

March 12, 2025
6:58 AM

ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಅಕ್ರಮ ಮರಳು ಸಾಗಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ವಿಧಾನಪರಿಷತ್‌ನಲ್ಲಿಂದು ತಿಳಿಸಿದ್ದಾರೆ.………ಮುಂದೆ ಓದಿ……..

ವಿಧಾನಪರಿಷತ್‌ನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಡಾ.ಧನಂಜಯ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಕ್ರಮ ಮರಳು ಸಾಗಾಟ ಮಾಡಿದವರ ವಿರುದ್ಧ 23,572 ಪ್ರಕರಣಗಳನ್ನು ಪತ್ತೆ ಹಚ್ಚಿ, 7629 ಎಫ್‌ಐಆರ್ ದಾಖಲಿಸಲಾಗಿದೆ. ಕಾನೂನುಬಾಹಿರವಾಗಿ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದವರಿಂದ 47  ಕೋಟಿ ರೂಪಾಯಿ ದಂಡ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಒಟ್ಟು 260 ಮರಳು ಬ್ಲಾಕ್‌ಗಳು ಹಾಗೂ 879 ಎಂ-ಸ್ಟಾಂಡ್ ಬ್ಲಾಕ್‌ಗಳಿವೆ. 2023-24 ನೇ ಸಾಲಿನಲ್ಲಿ 24,10,236 ಮೆಟ್ರಿನ್ ಟನ್ ಮರಳಿನಿಂದ 35 ಕೋಟಿ 68 ಲಕ್ಷ ರೂಪಾಯಿ ರಾಜಧನ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror