ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು

April 10, 2025
9:58 AM
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವಲ್ಲಿ ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂದು ಮಿಜೋರಾಂ ಮುಖ್ಯಮಂತ್ರಿ ಲಾಲ್ಡುಹೋಮ  ಹೇಳಿದ್ದಾರೆ.

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು ಹೆಚ್ಚುತ್ತಿರುವುದರಿಂದ  ಮಿಜೋರಾಂ ಅಡಿಕೆ ಬೆಳೆಗಾರರು  ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಆಮದು ಕಾರಣದಿಂದ ಸ್ಥಳೀಯ ಅಡಿಕೆ ಬೆಳೆಗಾರರಿಗೆ  ನ್ಯಾಯಯುತ ಬೆಲೆಗೆ ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಮಿಜೋರಾಂ ಮುಖ್ಯಮಂತ್ರಿ ಲಾಲ್ಡುಹೋಮ  ಹೇಳಿದ್ದಾರೆ.…..ಮುಂದೆ ಓದಿ….

Advertisement

ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವಲ್ಲಿ ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ‘ಅಡಿಕೆ ಕೃಷಿಯ ವೈಜ್ಞಾನಿಕ ವಿಧಾನಗಳು ಮತ್ತು ಕೀಟ ನಿರ್ವಹಣೆ’ ಕುರಿತು ತರಬೇತಿ ಮತ್ತು ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು ಆಮದು ಸಮಸ್ಯೆಯನ್ನು ಪರಿಹರಿಸಲು ಮತ್ತು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ  ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ಚೆಂಫಾಯಿ ಮತ್ತು ಜಮುವಾಂಗ್‌ನಲ್ಲಿ ಅಡಿಕೆ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 7.43 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ ಎಂದು ಅವರು ಇದೇ ವೇಳೆ ಮುಖ್ಯಮಂತ್ರಿಗಳು ಘೋಷಿಸಿದರು. ಈ ಘಟಕಗಳು ಅಡಿಕೆಯ ಸರಿಯಾದ ಸಂಸ್ಕರಣೆಯನ್ನು, ಮೌಲ್ಯವರ್ಧಿತ ಉತ್ಪನ್ನಗಳಿಗೆ ಕಾರಣವಾಗಲಿದೆ ಹಾಗೂ ಮಾರುಕಟ್ಟೆ ವ್ಯವಸ್ಥೆಗೂ ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ
April 25, 2025
7:47 AM
by: The Rural Mirror ಸುದ್ದಿಜಾಲ
ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ
April 25, 2025
7:42 AM
by: The Rural Mirror ಸುದ್ದಿಜಾಲ
ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ
April 25, 2025
7:31 AM
by: The Rural Mirror ಸುದ್ದಿಜಾಲ
ಶುಕ್ರ ಮತ್ತು ರಾಹು ಮೀನ ರಾಶಿಯಲ್ಲಿ ಸಂಯೋಗ | 5 ರಾಶಿಚಕ್ರಗಳಲ್ಲಿ ವಿಶೇಷ ಪ್ರಭಾವ |
April 25, 2025
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group