ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು ಹೆಚ್ಚುತ್ತಿರುವುದರಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಆಮದು ಕಾರಣದಿಂದ ಸ್ಥಳೀಯ ಅಡಿಕೆ ಬೆಳೆಗಾರರಿಗೆ ನ್ಯಾಯಯುತ ಬೆಲೆಗೆ ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಮಿಜೋರಾಂ ಮುಖ್ಯಮಂತ್ರಿ ಲಾಲ್ಡುಹೋಮ ಹೇಳಿದ್ದಾರೆ.…..ಮುಂದೆ ಓದಿ….
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವಲ್ಲಿ ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ‘ಅಡಿಕೆ ಕೃಷಿಯ ವೈಜ್ಞಾನಿಕ ವಿಧಾನಗಳು ಮತ್ತು ಕೀಟ ನಿರ್ವಹಣೆ’ ಕುರಿತು ತರಬೇತಿ ಮತ್ತು ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು ಆಮದು ಸಮಸ್ಯೆಯನ್ನು ಪರಿಹರಿಸಲು ಮತ್ತು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ಚೆಂಫಾಯಿ ಮತ್ತು ಜಮುವಾಂಗ್‌ನಲ್ಲಿ ಅಡಿಕೆ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 7.43 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ ಎಂದು ಅವರು ಇದೇ ವೇಳೆ ಮುಖ್ಯಮಂತ್ರಿಗಳು ಘೋಷಿಸಿದರು. ಈ ಘಟಕಗಳು ಅಡಿಕೆಯ ಸರಿಯಾದ ಸಂಸ್ಕರಣೆಯನ್ನು, ಮೌಲ್ಯವರ್ಧಿತ ಉತ್ಪನ್ನಗಳಿಗೆ ಕಾರಣವಾಗಲಿದೆ ಹಾಗೂ ಮಾರುಕಟ್ಟೆ ವ್ಯವಸ್ಥೆಗೂ ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…