ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

June 10, 2025
7:38 AM
ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ 15 ರವರೆಗೆ ಕೊಂಕಣ ಮತ್ತು ಗೋವಾದ ಮೇಲೆ ಭಾರೀ ಮಳೆಯಾಗುವ ಸಾಧ್ಯತೆಯಿದೆ

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ಬಿಸಿಲಿನ ವಾತಾವರಣ ಹಾಗೂ ತೀವ್ರ ತಾಪಮಾನ ಇರುತ್ತದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಾದ ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿ, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಪೂರ್ವ ಭಾಗಗಳಲ್ಲಿ ಮುಂದಿನ ಎರಡು ದಿನಗಳವರೆಗೆ ತಾಪಮಾನದ ವಾತಾವರಣ ಇರುತ್ತದೆ ಎಂದು ಆರೆಂಜ್‌ ಅಲರ್ಟ್‌  ನೀಡಿದೆ.

ಹವಾಮಾನ ಇಲಾಖೆ ಪ್ರಕಾರ, ಬಿಹಾರ, ಗಂಗಾನದಿಯ ಪಶ್ಚಿಮ ಬಂಗಾಳ, ಒಡಿಶಾ ಮತ್ತು ತಮಿಳುನಾಡು ಬಿಸಿ ಮತ್ತು ಒಣಹವೆ ವಾತಾವರಣ ಇರಲಿದೆ. ದೇಶದ ದಕ್ಷಿಣ ಭಾಗಗಳಲ್ಲಿ ಮಾನ್ಸೂನ್ ವೇಗ ಪಡೆಯುವ ಸಾಧ್ಯತೆಯಿದೆ ಎಂದು ಸಂಸ್ಥೆ ಹೇಳಿದೆ. ಈ ತಿಂಗಳ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು 13 ರಿಂದ 15 ರವರೆಗೆ ಕೊಂಕಣ ಮತ್ತು ಗೋವಾದ ಮೇಲೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. 13 ರವರೆಗೆ ದಕ್ಷಿಣ ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗುಡುಗು ಸಹಿತ, ಮಿಂಚು ಮತ್ತು ಬಿರುಗಾಳಿಯೊಂದಿಗೆ  ಹಾಗೂ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 2 ರಿಂದ 3 ದಿನಗಳಲ್ಲಿ ಮಧ್ಯ ಮತ್ತು ಪೂರ್ವ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ರಾಜ್ಯದಾದ್ಯಂತ ವ್ಯಾಪಕವಾಗಿ  ಮಳೆಯಾಗಲಿದೆ. ಜೂನ್12 ಹಾಗೂ 13 ರಂದು ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ, ಕೆಲವು ಕಡೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror