ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ಬಿಸಿಲಿನ ವಾತಾವರಣ ಹಾಗೂ ತೀವ್ರ ತಾಪಮಾನ ಇರುತ್ತದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಾದ ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿ, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಪೂರ್ವ ಭಾಗಗಳಲ್ಲಿ ಮುಂದಿನ ಎರಡು ದಿನಗಳವರೆಗೆ ತಾಪಮಾನದ ವಾತಾವರಣ ಇರುತ್ತದೆ ಎಂದು ಆರೆಂಜ್ ಅಲರ್ಟ್ ನೀಡಿದೆ.
ಹವಾಮಾನ ಇಲಾಖೆ ಪ್ರಕಾರ, ಬಿಹಾರ, ಗಂಗಾನದಿಯ ಪಶ್ಚಿಮ ಬಂಗಾಳ, ಒಡಿಶಾ ಮತ್ತು ತಮಿಳುನಾಡು ಬಿಸಿ ಮತ್ತು ಒಣಹವೆ ವಾತಾವರಣ ಇರಲಿದೆ. ದೇಶದ ದಕ್ಷಿಣ ಭಾಗಗಳಲ್ಲಿ ಮಾನ್ಸೂನ್ ವೇಗ ಪಡೆಯುವ ಸಾಧ್ಯತೆಯಿದೆ ಎಂದು ಸಂಸ್ಥೆ ಹೇಳಿದೆ. ಈ ತಿಂಗಳ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು 13 ರಿಂದ 15 ರವರೆಗೆ ಕೊಂಕಣ ಮತ್ತು ಗೋವಾದ ಮೇಲೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. 13 ರವರೆಗೆ ದಕ್ಷಿಣ ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗುಡುಗು ಸಹಿತ, ಮಿಂಚು ಮತ್ತು ಬಿರುಗಾಳಿಯೊಂದಿಗೆ ಹಾಗೂ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 2 ರಿಂದ 3 ದಿನಗಳಲ್ಲಿ ಮಧ್ಯ ಮತ್ತು ಪೂರ್ವ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕ ರಾಜ್ಯದಾದ್ಯಂತ ವ್ಯಾಪಕವಾಗಿ ಮಳೆಯಾಗಲಿದೆ. ಜೂನ್12 ಹಾಗೂ 13 ರಂದು ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ, ಕೆಲವು ಕಡೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ…
ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…
ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…
ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…
ಉತ್ತರ ಪೆಸಿಫಿಕ್ ಸಾಗರದಲ್ಲಿ ಬದಲಾಗುತ್ತಿರುವ ಹವಾಮಾನ - ಪ್ರಭಲ ಭೂಕಂಪ ಹಾಗೂ ಸುನಾಮಿ…