#WeatherReport | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | 8 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ |

October 6, 2022
10:06 AM

ಹಲವು ರಾಜ್ಯಗಳಲ್ಲಿ ಮುಂಗಾರು ಹಿಂದೆ ಸರಿದಿದೆ. ಈ ನಡುವೆಯೇ ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತದ ಕಾರಣದಿಂದ ಮತ್ತೆ ಮಳೆಯಾಗುವ ಲಕ್ಷಣ ಕಾಣಿಸಿದೆ. ರಾಜ್ಯದಲ್ಲಿ 8 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ  ತಿಳಿಸಿದೆ.

ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿದ್ದು, ಅದು ಆಂಧ್ರಪ್ರದೇಶದ ಕರಾವಳಿ ಭಾಗದತ್ತ ಬೀಸುತ್ತಿದೆ. ಮತ್ತೊಂದು ಮೇಲ್ಮೈ ಸುಳಿಗಾಳಿ ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ಉಂಟಾಗಿದೆ. ಇದು ಸಮುದ್ರ ಮಟ್ಟದಿಂದ ಸುಮಾರು 5ಕೀ.ಮೀ. ಎತ್ತರದಲ್ಲಿದೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಭಾಗದಲ್ಲಿಅ.10 ರಂದು ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರು ಹಾಗೂ ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ತುಮಕೂರು ಒಂದು ದಿನ ‘ಎಲ್ಲೋ ಅಲರ್ಟ್, ಪಡೆದ ಜಿಲ್ಲೆಗಳಾಗಿವೆ. ಇದರ ಹೊರತು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಮೂರು ದಿನ ಸಾಮಾನ್ಯವಾಗಿ ಮಳೆ ಬೀಳಲಿದೆ. ಬೆಂಗಳೂರಿನಲ್ಲಿ ಚಳಿಯ ವಾತಾವರಣವೂ ಇರಲಿದೆ.

ಮುಂಗಾರು ಹಿಂದೆ ಸರಿದ ಬಳಿಕ  ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ, ಹಲವು ಪ್ರದೇಶಗಳಲ್ಲಿ ಹವಾಮಾನದಲ್ಲಿ ಬದಲಾವಣೆ ಕಂಡುಬಂದಿದೆ. ಹೀಗಾಗಿ ದೇಶದ ಹಲವು ಪ್ರದೇಶಗಳಲ್ಲಿ ಮುಂಗಾರು ಮಳೆಯ ಮುನ್ಸೂಚನೆಯಂತೆಯೇ ಇದೆ. ಗುರುವಾರದಂದು ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಮಧ್ಯಪ್ರದೇಶ, ಬಿಹಾರ ಸೇರಿದಂತೆ ಅನೇಕ ನೆರೆಯ ರಾಜ್ಯಗಳಲ್ಲಿ ಮಳೆಯಾಗಬಹುದು. ಉತ್ತರ ಪ್ರದೇಶ, ಮಧ್ಯಪ್ರದೇಶ, ಪೂರ್ವ ರಾಜಸ್ಥಾನ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಮುಂಗಾರು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಹವಾಮಾನ ಇಲಾಖೆ ಪ್ರಕಾರ ಅ.9  ರವರೆಗೆ ಉತ್ತರಾಖಂಡ್ ಮತ್ತು ಹಿಮಾಚಲ ಪ್ರದೇಶದ ಹಲವು ಪ್ರದೇಶಗಳಲ್ಲಿ ಭಾರೀ ನ್ ಮಳೆಯಾಗುವ ಸಾಧ್ಯತೆಯಿದೆ. ಇದರ ಜೊತೆಗೆ ಬಿಹಾರ ಮತ್ತು ಜಾರ್ಖಂಡ್ ನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈಶಾನ್ಯ ಭಾರತ, ಸಿಕ್ಕಿಂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕೊಂಕಣ, ಗೋವಾ, ಕರಾವಳಿ ಕರ್ನಾಟಕ, ಪಶ್ಚಿಮ ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror