ಹಲವು ರಾಜ್ಯಗಳಲ್ಲಿ ಮುಂಗಾರು ಹಿಂದೆ ಸರಿದಿದೆ. ಈ ನಡುವೆಯೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದ ಮತ್ತೆ ಮಳೆಯಾಗುವ ಲಕ್ಷಣ ಕಾಣಿಸಿದೆ. ರಾಜ್ಯದಲ್ಲಿ 8 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿದ್ದು, ಅದು ಆಂಧ್ರಪ್ರದೇಶದ ಕರಾವಳಿ ಭಾಗದತ್ತ ಬೀಸುತ್ತಿದೆ. ಮತ್ತೊಂದು ಮೇಲ್ಮೈ ಸುಳಿಗಾಳಿ ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ಉಂಟಾಗಿದೆ. ಇದು ಸಮುದ್ರ ಮಟ್ಟದಿಂದ ಸುಮಾರು 5ಕೀ.ಮೀ. ಎತ್ತರದಲ್ಲಿದೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಭಾಗದಲ್ಲಿಅ.10 ರಂದು ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರು ಹಾಗೂ ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ತುಮಕೂರು ಒಂದು ದಿನ ‘ಎಲ್ಲೋ ಅಲರ್ಟ್, ಪಡೆದ ಜಿಲ್ಲೆಗಳಾಗಿವೆ. ಇದರ ಹೊರತು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಮೂರು ದಿನ ಸಾಮಾನ್ಯವಾಗಿ ಮಳೆ ಬೀಳಲಿದೆ. ಬೆಂಗಳೂರಿನಲ್ಲಿ ಚಳಿಯ ವಾತಾವರಣವೂ ಇರಲಿದೆ.
ಮುಂಗಾರು ಹಿಂದೆ ಸರಿದ ಬಳಿಕ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ, ಹಲವು ಪ್ರದೇಶಗಳಲ್ಲಿ ಹವಾಮಾನದಲ್ಲಿ ಬದಲಾವಣೆ ಕಂಡುಬಂದಿದೆ. ಹೀಗಾಗಿ ದೇಶದ ಹಲವು ಪ್ರದೇಶಗಳಲ್ಲಿ ಮುಂಗಾರು ಮಳೆಯ ಮುನ್ಸೂಚನೆಯಂತೆಯೇ ಇದೆ. ಗುರುವಾರದಂದು ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಮಧ್ಯಪ್ರದೇಶ, ಬಿಹಾರ ಸೇರಿದಂತೆ ಅನೇಕ ನೆರೆಯ ರಾಜ್ಯಗಳಲ್ಲಿ ಮಳೆಯಾಗಬಹುದು. ಉತ್ತರ ಪ್ರದೇಶ, ಮಧ್ಯಪ್ರದೇಶ, ಪೂರ್ವ ರಾಜಸ್ಥಾನ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಮುಂಗಾರು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಹವಾಮಾನ ಇಲಾಖೆ ಪ್ರಕಾರ ಅ.9 ರವರೆಗೆ ಉತ್ತರಾಖಂಡ್ ಮತ್ತು ಹಿಮಾಚಲ ಪ್ರದೇಶದ ಹಲವು ಪ್ರದೇಶಗಳಲ್ಲಿ ಭಾರೀ ನ್ ಮಳೆಯಾಗುವ ಸಾಧ್ಯತೆಯಿದೆ. ಇದರ ಜೊತೆಗೆ ಬಿಹಾರ ಮತ್ತು ಜಾರ್ಖಂಡ್ ನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈಶಾನ್ಯ ಭಾರತ, ಸಿಕ್ಕಿಂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕೊಂಕಣ, ಗೋವಾ, ಕರಾವಳಿ ಕರ್ನಾಟಕ, ಪಶ್ಚಿಮ ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…