ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ | ಮುಖ್ಯಮಂತ್ರಿ ಸಿದ್ದರಾಮಯ್ಯ

August 28, 2024
1:11 PM

ಘಟಪ್ರಭಾ ನದಿಯ(Ghataprabha River) ಪ್ರವಾಹದಿಂದಾಗಿ(Flood) ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Sidharamaiha) ಅವರು ತಿಳಿಸಿದರು. ಅವರು ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಮುಧೋಳ(Mudhola) ತಾಲೂಕಿನ ರೈತರ(Farmer) ನಿಯೋಗದೊಂದಿಗೆ ಚರ್ಚೆ ನಡೆಸಿದರು.

Advertisement
Advertisement

ನೀರಾವರಿ ಸಚಿವರು, ಕಂದಾಯ ಸಚಿವರು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರೊಂದಿಗೆ ಆದಷ್ಟು ಬೇಗನೆ ಸಭೆ ನಡೆಸಿ ಈ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು. ಘಟಪ್ರಭಾ ನದಿಯ ಪ್ರವಾಹದಿಂದಾಗಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಒಟ್ಟು 34639 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 2019 ರಲ್ಲಿ 15088 ಹೆಕ್ಟೇರ್‌, 2021ರಲ್ಲಿ 7051 ಹೆಕ್ಟೇರ್ ಮತ್ತು 2024‌ ರಲ್ಲಿ 12500 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಉಂಟಾಗಿದೆ. ಇದಕ್ಕೆ ಸೂಕ್ತ ಬೆಳೆ ಪರಿಹಾರ ಹಾಗೂ ಶಾಶ್ವತ ಪರಿಹಾರ ಒದಗಿಸಬೇಕು ಎಂದು ರೈತರ ನಿಯೋಗ ಮನವಿ ಮಾಡಿತು.

Advertisement

ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ನೀರಾವರಿ ಕ್ಷೇತ್ರದ ಕಬ್ಬಿನ ಬೆಳೆಗೆ ಪ್ರತಿ ಹೆಕ್ಟೇರಿಗೆ ರೂ. 22,500 ರಂತೆ ಪರಿಹಾರ ಧನ ನಿಗದಿಪಡಿಸಲಾಗಿದ್ದು, ಇತರ ಬೆಳೆಗಳಿಗೆ ರೂ. 17000 ನಿಗದಿಪಡಿಸಲಾಗಿದೆ. ಇದರಿಂದ ರೈತರಿಗೆ ಯಾವುದೇ ರೀತಿಯ ಪ್ರಯೋಜನವಾಗುವುದಿಲ್ಲ. ಈಗಾಗಲೇ ಕೃಷಿ ವಿಶ್ವವಿದ್ಯಾಲಯ ಕರ್ನಾಟಕದ ಕಬ್ಬು ಬೆಳೆಯಲು ತಗಲುವ ವೆಚ್ಚ ಪ್ರತಿ ಹೆಕ್ಟೇರ್‌ಗೆ 1.50 ಲಕ್ಷ ರೂ. ನಿಗದಿಪಡಿಸಿದ್ದು, ಇದು ಸಹ ಅವೈಜ್ಞಾನಿಕವಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇದು ಕನಿಷ್ಟವಾಗಿದ್ದು, ಪ್ರತಿ ಎಕರೆ ಕಬ್ಬು ಬೆಳೆಗೆ ರೂ. 1 ಲಕ್ಷ ಹಾಗೂ ಇತರ ಬೆಳೆಗಳಿಗೆ ರೂ.50 ಸಾವಿರ ಪರಿಹಾರವನ್ನು ನೀಡಬೇಕು.

ಎನ್‌.ಡಿ.ಆರ್.ಎಫ್‌ ಮತ್ತು ಎಸ್.ಡಿ.ಆರ್.ಎಫ್‌ ಮಾನದಂಡಗಳನ್ನು ಪರಿಗಣಿಸದೆ ಹಾನಿಗೊಳಗಾದ ಎಲ್ಲಾ ಕ್ಷೇತ್ರಕ್ಕೂ ಪರಿಹಾರ ಧನವನ್ನು ನೀಡಬೇಕು ಎಂದು ರೈತರು ಮನವಿ ಸಲ್ಲಿಸಿದರು. ಅಬಕಾರಿ ಸಚಿವ ಆರ್.‌ ಬಿ.ತಿಮ್ಮಾಪುರ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ | ದಕ್ಷಿಣ ಕನ್ನಡದಲ್ಲೂ ಯಶಸ್ವಿಯಾಗಿ ಅನುಷ್ಟಾನ |
September 16, 2024
11:17 AM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಹೆಚ್ಚಳ ಚರ್ಚೆ| ಹೈನುಗಾರರಿಗೆ ಪ್ರಯೋಜನವೇನು…? |
September 16, 2024
10:54 AM
by: ದ ರೂರಲ್ ಮಿರರ್.ಕಾಂ
ಭಾರತೀಯ ಕಿಸಾನ್‌ ಸಂಘದ ವತಿಯಿಂದ ಬಲರಾಮ ಜಯಂತಿ ಕಾರ್ಯಕ್ರಮ | ಆಡಿಯೋ ವರದಿ |
September 15, 2024
10:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2024 | ಸೆ.21ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಸಾಧ್ಯತೆ |
September 15, 2024
4:16 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror