ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

February 6, 2025
7:33 AM
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ ಜೀವ ಉಳಿಸಲು ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಸ್ಥಳೀಯರಿಗೆ ಮಾಹಿತಿ ನೀಡಲು ಸರ್ಕಾರ ಪ್ರಯತ್ನ ನಡೆಸಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ

ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುವ ಹಿನ್ನೆಲೆಯಲ್ಲಿ ಅವುಗಳ ಚಲನ ವಲನಗಳನ್ನು ಗಮನ ಹರಿಸಲು ಆನೆಗಳ ಹಿಂಡಿನ ನೇತೃತ್ವವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನ ಅರಣ್ಯ ಭವನದಲ್ಲಿ  ಕೆ.ಪಿ. ಟ್ರ್ಯಾಕರ್ ಎಂಬ ರೇಡಿಯೋ ಕಾಲರ್‌ಗಳನ್ನು ಬಂಡೀಪುರ ಮತ್ತು ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶದ ಅಧಿಕಾರಿಗಳಿಗೆ ಸಚಿವರು ಹಸ್ತಾಂತರಿಸಿದರು.  6 ಸಾವಿರದ 395 ಆನೆಗಳನ್ನು ಹೊಂದಿರುವ ಕರ್ನಾಟಕ ದೇಶದಲ್ಲಿ ಅತಿ ಹೆಚ್ಚಿನ ಆನೆಗಳ ಸಂಖ್ಯೆಯನ್ನು ಹೊಂದಿದೆ. ಆದರೆ ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ. ಅಮೂಲ್ಯವಾದ ಜೀವ ಉಳಿಸಲು ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಸ್ಥಳೀಯರಿಗೆ ಮಾಹಿತಿ ನೀಡಲು ಸರ್ಕಾರ ಪ್ರಯತ್ನ ನಡೆಸಿದೆ ಎಂದು ಹೇಳಿದ್ದಾರೆ. ಅರಣ್ಯ ಇಲಾಖೆ ಪರಿಸರ ಸ್ನೇಹಿಯಾದ ಕಚ್ಚಾವಸ್ತುಗಳನ್ನೇ ಬಳಸಿ ಈ ರೇಡಿಯೋ ಕಾಲರ್ ತಯಾರಿಸಿದ್ದು, ವನ್ಯಜೀವಿಗಳಿಗಾಗಲೀ, ಪರಿಸರಕ್ಕಾಗಲೀ ಅಪಾಯವಿಲ್ಲ ಎಂದು ಅರಣ್ಯ ಸಚಿವರು ಸ್ಪಷ್ಟಪಡಿಸಿದ್ದಾರೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ ಮರಗಳನ್ನು ಕಟಾವು ಮಾಡಲು ಅನುಮತಿ | 2 ವರ್ಷದಲ್ಲಿ 189241 ಮರ ಕಡಿಯಲು ಅನುಮತಿ |
March 10, 2025
11:01 PM
by: ದ ರೂರಲ್ ಮಿರರ್.ಕಾಂ
ಮಹಾಕುಂಭದ ವೇಳೆ ಗಂಗಾ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು |
March 10, 2025
10:32 PM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಮುಂದುವರಿದ ಒಣಹವೆ | ಕರಾವಳಿಯಲ್ಲಿ ಬಿಸಿ ತಾಪಮಾನ ಸಾಧ್ಯತೆ | ಸಿಂಧನೂರಿನಲ್ಲಿ 41.4 ಡಿಗ್ರಿ ಉಷ್ಣಾಂಶ ದಾಖಲು
March 10, 2025
10:24 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-03-2025 | ಮತ್ತಷ್ಟು ತಾಪಮಾನ ಏರಿಕೆ ಸಾಧ್ಯತೆ | ಮಾ.18 ರಿಂದ ಕೆಲವು ಕಡೆ ಮಳೆ ನಿರೀಕ್ಷೆ |
March 10, 2025
1:58 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror