ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುವ ಹಿನ್ನೆಲೆಯಲ್ಲಿ ಅವುಗಳ ಚಲನ ವಲನಗಳನ್ನು ಗಮನ ಹರಿಸಲು ಆನೆಗಳ ಹಿಂಡಿನ ನೇತೃತ್ವವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನ ಅರಣ್ಯ ಭವನದಲ್ಲಿ ಕೆ.ಪಿ. ಟ್ರ್ಯಾಕರ್ ಎಂಬ ರೇಡಿಯೋ ಕಾಲರ್‌ಗಳನ್ನು ಬಂಡೀಪುರ ಮತ್ತು ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶದ ಅಧಿಕಾರಿಗಳಿಗೆ ಸಚಿವರು ಹಸ್ತಾಂತರಿಸಿದರು. 6 ಸಾವಿರದ 395 ಆನೆಗಳನ್ನು ಹೊಂದಿರುವ ಕರ್ನಾಟಕ ದೇಶದಲ್ಲಿ ಅತಿ ಹೆಚ್ಚಿನ ಆನೆಗಳ ಸಂಖ್ಯೆಯನ್ನು ಹೊಂದಿದೆ. ಆದರೆ ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ. ಅಮೂಲ್ಯವಾದ ಜೀವ ಉಳಿಸಲು ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಸ್ಥಳೀಯರಿಗೆ ಮಾಹಿತಿ ನೀಡಲು ಸರ್ಕಾರ ಪ್ರಯತ್ನ ನಡೆಸಿದೆ ಎಂದು ಹೇಳಿದ್ದಾರೆ. ಅರಣ್ಯ ಇಲಾಖೆ ಪರಿಸರ ಸ್ನೇಹಿಯಾದ ಕಚ್ಚಾವಸ್ತುಗಳನ್ನೇ ಬಳಸಿ ಈ ರೇಡಿಯೋ ಕಾಲರ್ ತಯಾರಿಸಿದ್ದು, ವನ್ಯಜೀವಿಗಳಿಗಾಗಲೀ, ಪರಿಸರಕ್ಕಾಗಲೀ ಅಪಾಯವಿಲ್ಲ ಎಂದು ಅರಣ್ಯ ಸಚಿವರು ಸ್ಪಷ್ಟಪಡಿಸಿದ್ದಾರೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490