ಚುನಾವಣಾ ಪ್ರಚಾರದ ಅಬ್ಬರದಲ್ಲಿ ಮೈ ಮರೆಯಬೇಡಿ. ಕೊರೊನಾ ಸಂಖ್ಯೆ ಹೆಚ್ಚಳವಾಗುತ್ತಿದೆ ಈ ಕುರಿತು ಗಮನಹರಿಸಿ ಎಂದು ಆರೋಗ್ಯ ಇಲಾಖೆ ಮಾಹಿತಿ ರವಾನೆ ಮಾಡಿದೆ.
ಹೆಚ್ಚುತ್ತಿರುವ ಕೋವಿಡ್ ಹರಡದಂತೆ ಎಚ್ಚರ ವಹಿಸುವುದು ಮುಖ್ಯವಾಗುತ್ತದೆ. ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಚುನಾವಣಾ ಸಿಬ್ಬಂದಿಗಳಿಗೆ ಬೂಸ್ಟರ್ ಡೋಸ್ ಕಡ್ಡಾಯಗೊಳಿಸಲಾಗಿದೆ. ಚುನಾವಣಾ ರ್ಯಾಲಿ ಸಂದರ್ಭದಲ್ಲಿ ಕೋವಿಡ್ ಹರಡುವಿಕೆ ಪ್ರಕ್ರಿಯೆ ಹೆಚ್ಚಾದಲ್ಲಿ ಆಯಾ ರಾಜಕೀಯ ಪಕ್ಷವೇ ಹೊಣೆ ಹೊರಬೇಕು ಎಂದು ತಿಳಿಸಲಾಗಿದೆ.
ಸಾರ್ವಜನಿಕ ಪ್ರದೇಶಗಳ ಆಯ್ಕೆ ಪ್ರಕಾರ ಸುವಿಧ ಆಪ್ ಮೂಲಕವೇ ನೀಡಬೇಕು. ಮತದಾನದ ದಿನ ಹೆಲ್ಪ್ ಡೆಸ್ಕ್ ಆರಂಭಿಸಬೇಕು ಎಂದು ತಿಳಿಸಲಾಗಿದೆ. ಮತ ಹಾಕಲು ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ನಿಯಮಾನುಸಾರ ಟೋಕನ್ ವಿತರಿಸಬೇಕು. ಸಾಮಾಜಿಕ ಅಂತರ ಕಾಪಾಡಲು ಮತಗಟ್ಟೆ ಹಾಗೂ ಹೊರಭಾಗದಲ್ಲಿ ಮಾರ್ಕ್ ಮಾಡಬೇಕು ಎಂದು ಹೇಳಲಾಗಿದೆ.
ಎಲ್ಲಾ ಮತಗಟ್ಟೆಗಳ ಮುಂದೆ ಕೋವಿಡ್ ಜಾಗೃತಿ ಬಗ್ಗೆ ಪೋಸ್ಟರ್ ಅಳವಡಿಸಬೇಕು. ಮತದಾನದ ಕೊನೆಯ ಒಂದು ಗಂಟೆ ಕೋವಿಡ್ ಸೋಂಕಿತರಿಗೆ ಮತದಾನ ಮಾಡಲು ಮೀಸಲಿಡಬೇಕು ಎಂದು ತಿಳಿಸಿದ್ದಾರೆ. ಮತದಾನ ಮಾಡುವವರೂ ಈ ಕುರಿತು ಜಾಗೃತರಾಗಿರಬೇಕು. ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸಿ ಮತದಾನ ಮಾಡಬೇಕು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆಯಿಂದ ಬೆಳಗಾವಿಯ ಹೋಮ್ ಪಾರ್ಕ್ ನಲ್ಲಿ…
ದೇಶಾದ್ಯಂತ ಒಂದೇ ದಿನ 47 ಸ್ಥಳಗಳಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು ಬೆಂಗಳೂರಿನ ಎನ್ಎಸಿಐಎ…
ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…
ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…
ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…