ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಶ್ವ ಪರಿಸರ ದಿನಾಚರಣೆ 2025 ಉದ್ಘಾಟಿಸಿ, ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ. ಈ ಬಾರಿಯ ವಿಶ್ವ ಪರಿಸರ ದಿನಾಚರಣೆಯ ಘೋಷವಾಕ್ಯ ಪ್ಲಾಸ್ಟಿಕ್ ಮಾಲಿನ್ಯ ಕೊನೆಗಾಣಿಸಿ ಎಂದಿದೆ. ಇದು ಕಷ್ಟದ ಕೆಲಸವಾದರೂ ನಾವು ಮಾಡಲೇಬೇಕಾಗುತ್ತದೆ. ಪರಿಸರ ಶುದ್ಧವಾಗಿದ್ದರೆ ಜನರ ಆರೋಗ್ಯ, ಪ್ರಕೃತಿಯನ್ನು ಉಳಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. ದುರಾಸೆಯಿಂದ ಪ್ರಕೃತಿಯನ್ನು ನಾಶ ಮಾಡಿದರೆ ನಮ್ಮನ್ನು ನಾವೇ ನಾಶ ಮಾಡಿಕೊಂಡಂತೆ. ರಾಜ್ಯದಲ್ಲಿನ ಪಶ್ಚಿಮ ಘಟ್ಟ, ವೈವಿಧ್ಯಮಯ ಕಾಡು, ನದಿಗಳು, ಜೀವ ಸಂಪತ್ತನ್ನು ನಾವು ಕಾಪಾಡಬೇಕು ಎಂದು ಕರೆ ನೀಡಿದ್ದಾರೆ.
ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ …
ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…
ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …
ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…
ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ಹಾಸನ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಆತಂಕ ದೂರ…