ಕಾಂಗ್ರೆಸ್‌ ಘೋಷಿಸಿದ ಉಚಿತ ಗ್ಯಾರಂಟಿಗಳು | ಯೋಜನೆಗಳ ಜಾರಿ ಬಗ್ಗೆ ಏನಾಂತಾರೆ..? | ಉಲ್ಟಾ ಹೊಡೆದ ಕಾಂಗ್ರೆಸ್‌ ನಾಯಕ |

May 16, 2023
6:58 PM

ರಾಜ್ಯ ವಿಧಾನ ಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ ಪಕ್ಷವು ತಾನು ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಭರವಸೆ ನೀಡಿತ್ತು. 

Advertisement
Advertisement
Advertisement

ಚುನಾವಣಾ ಸಂದರ್ಭದಲ್ಲೇ ಕಾಂಗ್ರೆಸ್‌ ಹಿರಿಯ ನಾಯಕರುಗಳಾದ ಸಿದ್ದರಾಮಯ್ಯ ಮತ್ತು ಡಿ. ಕೆ. ಶಿವಕುಮಾರ್‌ ಇಬ್ಬರೂ ವೀಡಿಯೋ ಒಂದನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಇಬ್ಬರೂ ನಾಯಕರು ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ನಿರ್ಧಾರ ಪ್ರಕಟಿಸುವದಾಗಿಯೂ ಹೇಳಿದ್ದರು. ಇದೀಗ  ರಾಜ್ಯದ ಜನತೆ ಗ್ಯಾರಂಟಿ ಯೋಜನೆಗಳ ಫಲಾನುಭವಿ ಗಳಾಗಲು ಎದುರು ನೋಡುತಿದ್ದಾರೆ. ಆದರೆ ಈಗ ಗ್ಯಾರಂಟಿ ಯೋಜನೆಗಳ ಜಾರಿಗೆ ಕಾಂಗ್ರೆಸ್‌ ನಾಯಕರೇ ಹಿಂದೇಟು ಹಾಕುತ್ತಿರುವ ಕುರಿತು ಚರ್ಚೆಯಾಗುತ್ತಿದೆ.

Advertisement

ಮಂಗಳವಾರ ಮಾಧ್ಯಮಗಳ ಜತೆ ಮಾತನಾಡಿದ ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ, ಆದರೆ ಕೆಲವು ಷರತ್ತುಗಳೊಂದಿಗೆ ಎಂದು ಹೇಳಿದ್ದಾರೆ. ಪ್ರತಿ ಇಲಾಖೆಯ ಸಚಿವರು ಹಲವು ಸುತ್ತಿನ ಸಭೆ, ಸಮಾಲೋಚನೆ ನಡೆಸಿ ಕಾಂಗ್ರೆಸ್ ನ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಬೇಕಾಗುತ್ತದೆ ಎಂದು ಹೇಳಿದ್ದಾರೆ. ಇವರ ಈ ಹೇಳಿಕೆ ಸಾಮಾಜಿಕ ತಾಣಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.

ಕಾಂಗ್ರೆಸ್‌ ಘೋಷಿಸಿದ್ದ ಕುಟುಂಬದ ಮಹಿಳೆಗೆ ಪ್ರತಿ ತಿಂಗಳು ₹2,000 ನೀಡುವ ಗೃಹಲಕ್ಷ್ಮಿ ಯೋಜನೆ, ಪ್ರತಿ ತಿಂಗಳು ಗೃಹ ಬಳಕೆಯ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ, ಪದವಿಧರರಿಗೆ ₹3,000 ಹಾಗೂ ಡಿಪ್ಲೋಮಾ ಪದವೀಧರರಿಗೆ ₹1,500 ನೀಡುವ ಯುವನಿಧಿ ಯೋಜನೆ, ರಾಜ್ಯದ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್ ಪ್ರಯಾಣ ಹಾಗೂ ಬಿಪಿಎಲ್ ಕಾರ್ಡ್ ದಾರರಿಗೆ 10 ಕೆ.ಜಿ. ಅನ್ನಭಾಗ್ಯ ಯೋಜನೆಯ ಐದು ಗ್ಯಾರಂಟಿ ಕಾರ್ಡ್ ಗಳ  ಉಚಿತ ಭರವಸೆಗಳ ಅನುಷ್ಠಾನಕ್ಕೆ ಹತ್ತಾರು ಸವಾಲುಗಳಿವೆ.

Advertisement

ಈ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ವಾರ್ಷಿಕ ಸುಮಾರು 40,000 ಕೋಟಿ ರೂ. ಬೇಕಾಗಲಿದ್ದು, ಇದು ರಾಜ್ಯ ಬಜೆಟ್ ಮೊತ್ತದ ಕೇವಲ 15% ಆಗಲಿದೆ ಎಂದು ಆರ್ಥಿಕ ತಜ್ಞರು ತಿಳಿಸಿದ್ದಾರೆ. ಆದರೆ, ಕಾಂಗ್ರೆಸ್ ಘೋಷಿಸಿದಂತೆ ರಾಜ್ಯದ ಎಲ್ಲರಿಗೂ ಈ ಯೋಜನೆಗಳನ್ನು ಅನ್ವಯಿಸಿದರೆ ಅಂದಾಜು ಮೊತ್ತ 60,000 ಕೋಟಿ ರೂ. ದಾಟುವ ಸಾಧ್ಯತೆ ಇದೆ. ರಾಜ್ಯದ ವಾರ್ಷಿಕ ಬಜೆಟ್‌ ಇರುವುದೇ ಮೂರು ಲಕ್ಷ ಕೋಟಿ ರೂಪಾಯಿಗಳಿಗೂ ಆಸುಪಾಸು. ಅದರಲ್ಲೂ ಈ ಹಿಂದೆ ಮಾಡಿರುವ ಸಾಲದ ಮೇಲಿನ ಬಡ್ಡಿ ಕಟ್ಟಲು ವಾರ್ಷಿಕ ಮೂವತ್ತು ಸಾವಿರ ಕೋಟಿ ರೂಪಾಯಿ ಬೇಕಾಗುತ್ತದೆ.ಗ್ಯಾರಂಟಿ ಯೋಜನೆಗಳ ಜಾರಿಗೆ ಕಾಂಗ್ರೆಸ್‌ ಮತ್ತೆ ಸಾಲ ಮಾಡಬೇಕಾಗುತ್ತದೆ, ಇಲ್ಲವೇ ಬಡ ವರ್ಗಕ್ಕೆ ಮಾತ್ರ ಉಚಿತ ಯೋಜನೆ ಜಾರಿಗೊಳಿಸಬೇಕಾಗುತ್ತದೆ, ಅದರಲ್ಲೂ ಪಧವೀಧರರಿಗೆ ಘೋಷಿಸಿರುವ ತಿಂಗಳ ನಿರುದ್ಯೋಗ ಭತ್ಯೆಯ 3೦೦೦ ರೂಪಾಯಿಗಳನ್ನು ನೀಡಲು ಫಲಾನುಭವಿಗಳ ಆಯ್ಕೆಯೇ ದೊಡ್ಡ ತಲೆ ನೋವಾಗಲಿದೆ. ಏಕೆಂದರೆ ಖಾಸಗೀ ಊದ್ಯೋಗ , ಸ್ವಉದ್ಯೋಗ ಮಾಡುತ್ತಿರುವ ಲಕ್ಷಾಂತರ ಯುವಕರಿದ್ದು ಇವರಲ್ಲಿ ನಿರುದ್ಯೋಗಿಗಳನ್ನು ಗುರುತಿಸುವುದೇ ದೊಡ್ಡ ಸವಾಲಾಗಲಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ
January 19, 2025
10:06 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |
January 19, 2025
11:01 AM
by: ಸಾಯಿಶೇಖರ್ ಕರಿಕಳ
ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ
January 19, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror