ರಾಜ್ಯ ವಿಧಾನ ಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ತಾನು ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಭರವಸೆ ನೀಡಿತ್ತು.
ಚುನಾವಣಾ ಸಂದರ್ಭದಲ್ಲೇ ಕಾಂಗ್ರೆಸ್ ಹಿರಿಯ ನಾಯಕರುಗಳಾದ ಸಿದ್ದರಾಮಯ್ಯ ಮತ್ತು ಡಿ. ಕೆ. ಶಿವಕುಮಾರ್ ಇಬ್ಬರೂ ವೀಡಿಯೋ ಒಂದನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಇಬ್ಬರೂ ನಾಯಕರು ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ನಿರ್ಧಾರ ಪ್ರಕಟಿಸುವದಾಗಿಯೂ ಹೇಳಿದ್ದರು. ಇದೀಗ ರಾಜ್ಯದ ಜನತೆ ಗ್ಯಾರಂಟಿ ಯೋಜನೆಗಳ ಫಲಾನುಭವಿ ಗಳಾಗಲು ಎದುರು ನೋಡುತಿದ್ದಾರೆ. ಆದರೆ ಈಗ ಗ್ಯಾರಂಟಿ ಯೋಜನೆಗಳ ಜಾರಿಗೆ ಕಾಂಗ್ರೆಸ್ ನಾಯಕರೇ ಹಿಂದೇಟು ಹಾಕುತ್ತಿರುವ ಕುರಿತು ಚರ್ಚೆಯಾಗುತ್ತಿದೆ.
ಮಂಗಳವಾರ ಮಾಧ್ಯಮಗಳ ಜತೆ ಮಾತನಾಡಿದ ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ, ಆದರೆ ಕೆಲವು ಷರತ್ತುಗಳೊಂದಿಗೆ ಎಂದು ಹೇಳಿದ್ದಾರೆ. ಪ್ರತಿ ಇಲಾಖೆಯ ಸಚಿವರು ಹಲವು ಸುತ್ತಿನ ಸಭೆ, ಸಮಾಲೋಚನೆ ನಡೆಸಿ ಕಾಂಗ್ರೆಸ್ ನ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಬೇಕಾಗುತ್ತದೆ ಎಂದು ಹೇಳಿದ್ದಾರೆ. ಇವರ ಈ ಹೇಳಿಕೆ ಸಾಮಾಜಿಕ ತಾಣಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.
ಕಾಂಗ್ರೆಸ್ ಘೋಷಿಸಿದ್ದ ಕುಟುಂಬದ ಮಹಿಳೆಗೆ ಪ್ರತಿ ತಿಂಗಳು ₹2,000 ನೀಡುವ ಗೃಹಲಕ್ಷ್ಮಿ ಯೋಜನೆ, ಪ್ರತಿ ತಿಂಗಳು ಗೃಹ ಬಳಕೆಯ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ, ಪದವಿಧರರಿಗೆ ₹3,000 ಹಾಗೂ ಡಿಪ್ಲೋಮಾ ಪದವೀಧರರಿಗೆ ₹1,500 ನೀಡುವ ಯುವನಿಧಿ ಯೋಜನೆ, ರಾಜ್ಯದ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್ ಪ್ರಯಾಣ ಹಾಗೂ ಬಿಪಿಎಲ್ ಕಾರ್ಡ್ ದಾರರಿಗೆ 10 ಕೆ.ಜಿ. ಅನ್ನಭಾಗ್ಯ ಯೋಜನೆಯ ಐದು ಗ್ಯಾರಂಟಿ ಕಾರ್ಡ್ ಗಳ ಉಚಿತ ಭರವಸೆಗಳ ಅನುಷ್ಠಾನಕ್ಕೆ ಹತ್ತಾರು ಸವಾಲುಗಳಿವೆ.
ಈ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ವಾರ್ಷಿಕ ಸುಮಾರು 40,000 ಕೋಟಿ ರೂ. ಬೇಕಾಗಲಿದ್ದು, ಇದು ರಾಜ್ಯ ಬಜೆಟ್ ಮೊತ್ತದ ಕೇವಲ 15% ಆಗಲಿದೆ ಎಂದು ಆರ್ಥಿಕ ತಜ್ಞರು ತಿಳಿಸಿದ್ದಾರೆ. ಆದರೆ, ಕಾಂಗ್ರೆಸ್ ಘೋಷಿಸಿದಂತೆ ರಾಜ್ಯದ ಎಲ್ಲರಿಗೂ ಈ ಯೋಜನೆಗಳನ್ನು ಅನ್ವಯಿಸಿದರೆ ಅಂದಾಜು ಮೊತ್ತ 60,000 ಕೋಟಿ ರೂ. ದಾಟುವ ಸಾಧ್ಯತೆ ಇದೆ. ರಾಜ್ಯದ ವಾರ್ಷಿಕ ಬಜೆಟ್ ಇರುವುದೇ ಮೂರು ಲಕ್ಷ ಕೋಟಿ ರೂಪಾಯಿಗಳಿಗೂ ಆಸುಪಾಸು. ಅದರಲ್ಲೂ ಈ ಹಿಂದೆ ಮಾಡಿರುವ ಸಾಲದ ಮೇಲಿನ ಬಡ್ಡಿ ಕಟ್ಟಲು ವಾರ್ಷಿಕ ಮೂವತ್ತು ಸಾವಿರ ಕೋಟಿ ರೂಪಾಯಿ ಬೇಕಾಗುತ್ತದೆ.ಗ್ಯಾರಂಟಿ ಯೋಜನೆಗಳ ಜಾರಿಗೆ ಕಾಂಗ್ರೆಸ್ ಮತ್ತೆ ಸಾಲ ಮಾಡಬೇಕಾಗುತ್ತದೆ, ಇಲ್ಲವೇ ಬಡ ವರ್ಗಕ್ಕೆ ಮಾತ್ರ ಉಚಿತ ಯೋಜನೆ ಜಾರಿಗೊಳಿಸಬೇಕಾಗುತ್ತದೆ, ಅದರಲ್ಲೂ ಪಧವೀಧರರಿಗೆ ಘೋಷಿಸಿರುವ ತಿಂಗಳ ನಿರುದ್ಯೋಗ ಭತ್ಯೆಯ 3೦೦೦ ರೂಪಾಯಿಗಳನ್ನು ನೀಡಲು ಫಲಾನುಭವಿಗಳ ಆಯ್ಕೆಯೇ ದೊಡ್ಡ ತಲೆ ನೋವಾಗಲಿದೆ. ಏಕೆಂದರೆ ಖಾಸಗೀ ಊದ್ಯೋಗ , ಸ್ವಉದ್ಯೋಗ ಮಾಡುತ್ತಿರುವ ಲಕ್ಷಾಂತರ ಯುವಕರಿದ್ದು ಇವರಲ್ಲಿ ನಿರುದ್ಯೋಗಿಗಳನ್ನು ಗುರುತಿಸುವುದೇ ದೊಡ್ಡ ಸವಾಲಾಗಲಿದೆ.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…