ಹಾಸನ ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆ ಜಾರಿಯಾಗಿದ್ದು, ವಿವಿದೆಡೆ ಯಶಸ್ವಿಯಾಗಿದೆ. ಜನರು ಸಂಸತ ವ್ಯಕ್ತಪಡಿಸಿದ್ದಾರೆ. ಕೊಣನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆ ಯಶಸ್ವಿ ಆಗಿದ್ದು, 1 ಸಾವಿರದ 914 ಮನೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿವಾಕರ್ ಹೇಳಿದರು. ಒಟ್ಟು ನಾಲ್ಕು ಹಂತದಲ್ಲಿ 2 ಸಾವಿರಕ್ಕೂ ಹೆಚ್ಚು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಾಗಿದ್ದು ಈಗಾಗಲೇ ಶೇಕಡ 70ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಈ ತಿಂಗಳ ಅಂತ್ಯದ ವೇಳೆ ಎಲ್ಲಾ ಕಾಮಗಾರಿ ಮುಗಿಯಲಿದೆ. ಜಲಜೀವನ್ ಮಿಷನ್ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಾಹಣಾಧಿಕಾರಿ ಜೊತೆ ಸಭೆ ನಡೆಸಲಾಗಿದೆ ಎಂದು ಕಾರ್ಯಪಾಲಕ ಅಭಿಯಂತರರಾದ ನವ್ಯಶ್ರೀ ಹೇಳಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel