Advertisement
MIRROR FOCUS

ಕೋಲಾರದಲ್ಲಿ ಸೌರ ವಿದ್ಯುತ್ ಯೋಜನೆ ಜಾರಿ | ಒಣಗುತ್ತಿರುವ ತೋಟವನ್ನು ಉಳಿಸಿಕೊಂಡ ರೈತರು |

Share

ಬೆಳೆ ಬೆಳೆದು ಫಲ ನೀಡುವ ಹೊತ್ತಿಗೆ ನೀರುಣಿಸಲಾಗದೆ ಇಡೀ ಫಸಲು ಒಣಗುತ್ತಿರುವ ಸನ್ನಿವೇಶವನ್ನು ಕೋಲಾರದ ಕೆಲವು ಕಡೆ ರೈತರು ಅನುಭವಿಸುತ್ತಿದ್ದರು. ನೀರಿದ್ದರೂ ವಿದ್ಯುತ್‌ ಪೂರೈಕೆಯಲ್ಲಿನ ವ್ಯತ್ಯಯವೇ ಬೆಳೆ ನಾಶಕ್ಕೆ ಕಾರಣವಾಗಿತ್ತು.‌ ಈಗ ರಾಷ್ಟ್ರೀಯ ವಿಕಾಸ ಕಾರ್ಯಕ್ರಮದಡಿ ಸೌರ ವಿದ್ಯುತ್ ಪಂಪ್ ಸೆಟ್ ಅಳವಡಿಸಿ ಬಳಿಕ ನಿರಂತರವಾಗಿ ನೀರು ಹಾಯಿಸುವ ಮೂಲಕ ಕೃಷಿಯನ್ನು ಉಳಿಸಿಕೊಂಡು ಉತ್ತಮ ಫಸಲು ತೆಗೆಯುತ್ತಿದ್ದಾರೆ ರೈತರು.

Advertisement
Advertisement
Advertisement

ರಾಜ್ಯದಲ್ಲಿ ಕೋಲಾರ ಅತಿ ಹೆಚ್ಚು ಕೊಳವೆ ಬಾವಿಗಳನ್ನು ಹೊಂದಿರುವ ಜಿಲ್ಲೆ.  ಆದರೆ ಸಮರ್ಪಕವಾದ ವಿದ್ಯುತ್ ಪೂರೈಕೆ ಆಗದೆ ರೈತರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರೈತರ ಸಮಸ್ಯೆಗಳಿಗೆ ಪರಿಹಾರವಾಗಿ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಕಾಸ ಕಾರ್ಯಕ್ರಮದಡಿ ಸೌರ ವಿದ್ಯುತ್ ಯೋಜನೆಯನ್ನು ಜಾರಿಗೆ ತಂದಿದ್ದು, ಕೋಲಾರದಲ್ಲಿ ಈಗ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ.

Advertisement

ಕೋಲಾರ ಜಿಲ್ಲೆಯಲ್ಲಿ  ರೈತರು ಕೊಳವಿ ಬಾವಿಗಳಿಗೆ ಅವಲಂಬಿತರಾಗಿದ್ದಾರೆ. ಆದರೆ ಸಮರ್ಪಕ ವಿದ್ಯುತ್ ಪೂರೈಕೆಯಾಗದೆ ಕೃಷಿಕರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹಗಲು ರಾತ್ರಿ ತೋಟಗಳಿಗೆ ನೀರು ಹರಿಸಲು ರೈತರು ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಸಮಸ್ಯೆಗೆ ಪರಿಹಾರವಾಗಿ ರಾಷ್ಟ್ರೀಯ ಕೃಷಿ ವಿಕಾಸ ಕಾರ್ಯಕ್ರಮದಡಿ ಸೌರ ವಿದ್ಯುತ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಸೌರ ವಿದ್ಯುತ್ ನಿರಂತರವಾಗಿ ನವೀಕರಿಸಬಹುದಾದ ಇಂಧನವಾಗಿದೆ. ಈ ಯೋಜನೆಯನ್ನು ಕೋಲಾರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಲಾಗಿದೆ.

ರೈತರ ತೋಟದಲ್ಲಿ ಸೌರ ವಿದ್ಯುತ್ ಫಲಕಗಳನ್ನು ಅಳವಡಿಸಿ ವಿದ್ಯುತ್ ಉತ್ಪಾದನೆ ಮಾಡಿ ಕೃಷಿ ಹೊಂಡ ಅಥವಾ ಕೊಳವೆ  ಬಾವಿಯಿಂದ ತೋಟಗಳಿಗೆ ನೀರು ಹರಿಸಲಾಗುತ್ತಿದೆ. ತಾಲೂಕಿನ ಚದುಮನಹಳ್ಳಿ ಗ್ರಾಮದ ರೈತ ನಾರಾಯಣಸ್ವಾಮಿ ತಮ್ಮ ಸೀಬೆ ತೋಟದಲ್ಲಿ ಸೌರ ವಿದ್ಯುತ್ ಫಲಕ ಅಳವಡಿಸಿ ತೋಟಕ್ಕೆ ನೀರು ಹಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ. 7 ಎಕರೆ ಸೀಬೆ ಬೆಳೆದಿದ್ದು, ವಿದ್ಯುತ್ ಸಮರ್ಪಕ ಪೂರೈಕೆಯಾಗದೇ ಸರಿಯಾದ ಸಮಯಕ್ಕೆ ಬೆಳೆಗೆ ನೀರು ಪೂರೈಕೆ ಮಾಡಲು ಆಗುತ್ತಿರಲಿಲ್ಲ. ತೋಟಗಾರಿಕೆ ಇಲಾಖೆಯವರು 5 ಕಿಲೋ ವ್ಯಾಟ್ ಸೋಲಾರ್ ವಿದ್ಯುತ್ ಹಾಕಿಕೊಳ್ಳುವಂತೆ ನೀಡಿದ ಸಲಹೆ ಮೇರೆಗೆ ಅನುಷ್ಟಾನ ಮಾಡಿದರು. ಸೌರ ವಿದ್ಯುತ್ ಪಂಪ್ ಸೆಟ್ ಅಳವಡಿಸಿ ಬಳಿಕ ನಿರಂತರವಾಗಿ ನೀರು ಹರಿಸಲಾಗುತ್ತಿದೆ ಎನ್ನುತ್ತಾರೆ  ಯೋಜನೆಯ ಫಲಾನುಭವಿ ಗಗನ್.

Advertisement

ಸೌರ ವಿದ್ಯುತ್ ಯೋಜನೆ ಅವಳವಡಿಸಿಕೊಂಡ ಮೇಲೆ ಎರಡು ಎಕರೆ ಬೀನ್ಸ್ ಬೆಳೆದು, ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದೇವೆ ಎನ್ನುತ್ತಾರೆ ಅದೇ ಗ್ರಾಮದ ಮೃತ್ಯುಂಜಯ.

ಸಹಾಯಕ ತೋಟಗಾರಿಕೆ ಅಧಿಕಾರಿ ನವೀನ್ ಕುಮಾರ್ ಯೋಜನೆಯ ಬಗ್ಗೆ ಮಾತನಾಡುತ್ತಾ, ಸೌರ್ ವಿದ್ಯುತ್ ಪಂಪ್ ಸೆಟ್ ಮೂಲಕ ಬೆಳಗ್ಗೆಯಿಂದ ಸಂಜೆಯ ತನಕ ನೀರು ಹರಿಸಬಹುದು ಎನ್ನುತ್ತಾರೆ.

Advertisement

ಕೋಲಾರ ಜಿಲ್ಲೆಯ 9 ಮಂದಿ ರೈತರು ಕೇಂದ್ರ ಸರ್ಕಾರದಿಂದ ಸಹಾಯಧನದೊಂದಿಗೆ ಸೌರ ವಿದ್ಯುತ್ ಪಂಪ್ ಸೆಟ್ ಅಳವಡಿಸಿದ್ದಾರೆ. ರೈತರು ಸೌರ ವಿದ್ಯುತ್ ಪಂಪ್ ಸೆಟ್ ಗಳನ್ನು ಅಳವಡಿಸಿ ಕಡಿಮೆ ವೆಚ್ಚದಲ್ಲಿ ವಿದ್ಯುತ್ ಉತ್ಪಾದನೆ ಮಾಡಬಹುದಾಗಿದೆ ಎನ್ನುತ್ತಾರೆ  ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ರವಿಕುಮಾರ್.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೊಗ್ರದಲ್ಲಿ ಕಾಲಾವಧಿ ನೇಮ

https://youtu.be/YgcAfgYUbGQ?si=vp1TmN5dQYAkVPBy

2 hours ago

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ

ಸಿರಿಧಾನ್ಯಗಳ  ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು  ಕೃಷಿ ಇಲಾಖೆ  “ಸಿರಿಧಾನ್ಯ ಓಟ…

2 days ago

ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…

2 days ago

ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…

2 days ago

ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ

ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…

2 days ago