ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಕೇಂದ್ರ ಸರ್ಕಾರ ಅಧಿಕೃತವಾಗಿ ಜಾರಿಗೊಳಿಸಲು ಮುಂದಾಗಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯದಿಂದ ಅಧಿಸೂಚನೆ ಪ್ರಕಟವಾಗಿದೆ.
ಕಳೆದ ತಿಂಗಳು ಗೃಹ ಸಚಿವ ಅಮಿತ್ ಶಾ ಅವರು ಚುನಾವಣೆ ಘೋಷಣೆಯಾಗುವ ಮುನ್ನ ಸಿಎಎ ಜಾರಿ ಮಾಡೇ ಮಾಡುತ್ತೇವೆ ಹೇಳಿಕೆ ನೀಡಿದ್ದರು. ರಾಷ್ಟ್ರ ಪತಿಗಳು ಕಾಯ್ದೆಗೆ ಸಹಿ ಹಾಕಿದ್ದರೂ ಇಲ್ಲಿಯವರೆಗೆ ಜಾರಿ ಆಗಿರಲಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ 2019(ಸಿಎಎ) ಜಾರಿಗೊಳಿಸಿ ರ ಅಧಿಸೂಚನೆ ಹೊರಡಿಸಿದ ನಂತರ ಈಶಾನ್ಯ ದೆಹಲಿ, ಶಾಹೀನ್ ಬಾಗ್, ಜಾಮಿಯಾ ಮತ್ತು ರಾಷ್ಟ್ರ ರಾಜಧಾನಿಯ ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೆಲವು ಭಾಗಗಳಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದ್ದು,
2019ರಲ್ಲಿ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ ನಂತರ ದೇಶದಲ್ಲಿ ಭಾರೀ ಪ್ರತಿಭಟನೆ ನಡೆದ ಕಾರಣ ಇನ್ನೂ ಸಿಎಎ ಜಾರಿಯಾಗಿಲ್ಲ. ಈ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಗಳಿಂದ ಬರುವ ಹಿಂದೂ, ಸಿಖ್, ಜೈನ್, ಕ್ರೈಸ್ತ ಮತ್ತು ಬೌದ್ಧ ಸಮುದಾಯದವರಿಗೆ ಭಾರತದ ಪೌರತ್ವ ನೀಡಲಾಗುತ್ತದೆ.
The Prime Minister Narendra Modi-led government on Monday announced the implementation of the Citizenship Amendment Act (CAA).
Source : News Agencies
ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…
ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ ಗ್ರಾಮ ಪಂಚಾಯತಿಯನ್ನು ದತ್ತು ಸ್ವೀಕಾರ ಮಾಡಬೇಕೆಂದು…
ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…