ಧರ್ಮ ಇರುವುದೇ ನಮಗಾಗಿ. ಆ ಧರ್ಮ ಸಂರಕ್ಷಿಸುವುದು ಪ್ರತಿಯೊಬ್ಬರು ಕರ್ತವ್ಯ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಕ್ಷೇತ್ರ ಮಂಜುನಾಥ ದೇಗುಲಕ್ಕೆ ಭೇಟಿ ನೀಡಿದ ಅವರು ಶ್ರೀಮಂಜುನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ದಕ್ಷಿಣ ಕನ್ನಡ ಜಿಲ್ಲೆ ಅದರಲ್ಲಿಯೂ ಕರಾವಳಿ ಭಾಗದಲ್ಲಿ ಧಾರ್ಮಿಕ ಶ್ರದ್ಧಾ ಕ್ಷೇತ್ರಗಳು ಹೆಚ್ಚಾಗಿದ್ದು, ಧಾರ್ಮಿಕ ಕಾರ್ಯಗಳನ್ನು, ಸಂಪ್ರದಾಯಗಳನ್ನು ಅನೂಚಾನವಾಗಿ ನಡೆಸಿಕೊಂಡು ಬರುತ್ತಿವೆ. ಆ ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಯನ್ನ ಗೌರವಿಸಿ ಪಾಲಿಸಬೇಕಾದುದ್ದೂ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ಇದಕ್ಕೂ ಮುನ್ನ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾದರು. ಬಳಿಕ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕಲ್ಯಾಣ ಮಂಟಪಗಳ ಸಮುಚ್ಚಯವನ್ನು ಡಿ ಕೆ ಶಿವಕುಮಾರ್ ಉದ್ಘಾಟಿಸಿದರು. ನಂತರ, ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿ ಕನ್ಯಾಡಿ ಕ್ಷೇತ್ರಕ್ಕೆ ಭೇಟಿ ನೀಡಿದರು.