ಕೃಷಿ ವಲಯದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕ್ರಮ

August 6, 2025
7:22 AM

ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು ಕೃಷಿ ವಲಯದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕ್ರಮ ಕೈಗೊಂಡಿದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಅಧಿವೇಶನದಲ್ಲಿ ಹೇಳಿದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 4 ಲಕ್ಷ ಕೋಟಿ ರೂಪಾಯಿ, ಪಿಎಂ ಫಸಲ್ ಬಿಮಾ ಯೋಜನೆಯಡಿ 2 ಲಕ್ಷ 12 ಸಾವಿರ ಕೋಟಿ ರೂಪಾಯಿಯನ್ನು ರೈತರ ಖಾತೆಗಳಿಗೆ ನೇರವಾಗಿ ಪಾವತಿಸಲಾಗಿದೆ.  ರಸಗೊಬ್ಬರ ಸಬ್ಸಿಡಿಗೆ 14 ಲಕ್ಷದ 6 ಸಾವಿರ ಕೋಟಿ ರೂಪಾಯಿ ಒದಗಿಸಲಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಯೂರಿಯಾ ಗೊಬ್ಬರ ದರ ಏರಿಕೆ ಇದ್ದಾಗ್ಯೂ, ಅತ್ಯಂತ ಕಡಿಮೆ ಬೆಲೆಗೆ ರೈತರಿಗೆ ಒದಗಿಸಲಾಗಿದೆ ಎಂದು ತಿಳಿಸಿದರು. ಸರ್ಕಾರದ ಕ್ರಮಗಳಿಂದಾಗಿ ಇಳುವರಿ ಗಣನೀಯ ಏರಿಕೆಯಾಗಿದ್ದು, ಕೃಷಿ ಮಾರುಕಟ್ಟೆ ವಿಸ್ತರಣೆಯಾಗಿದೆ.  ಕನಿಷ್ಠ ಬೆಂಬಲ ಬೆಲೆಯಲ್ಲಿ ಉತ್ಪನ್ನ ಖರೀದಿ, ಸಕಾಲದಲ್ಲಿ ನಷ್ಟ ಪರಿಹಾರ ಮುಂತಾದ ಕ್ರಮಗಳಿಂದ ಲಕ್ಷಾಂತರ ರೈತರಿಗೆ ಅನುಕೂಲವಾಗಿದ್ದು, ಆದಾಯ ಹೆಚ್ಚಳವಾಗಿದೆ ಎಂದು ವಿವರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror