ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು ಕೃಷಿ ವಲಯದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕ್ರಮ ಕೈಗೊಂಡಿದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಅಧಿವೇಶನದಲ್ಲಿ ಹೇಳಿದರು.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 4 ಲಕ್ಷ ಕೋಟಿ ರೂಪಾಯಿ, ಪಿಎಂ ಫಸಲ್ ಬಿಮಾ ಯೋಜನೆಯಡಿ 2 ಲಕ್ಷ 12 ಸಾವಿರ ಕೋಟಿ ರೂಪಾಯಿಯನ್ನು ರೈತರ ಖಾತೆಗಳಿಗೆ ನೇರವಾಗಿ ಪಾವತಿಸಲಾಗಿದೆ. ರಸಗೊಬ್ಬರ ಸಬ್ಸಿಡಿಗೆ 14 ಲಕ್ಷದ 6 ಸಾವಿರ ಕೋಟಿ ರೂಪಾಯಿ ಒದಗಿಸಲಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಯೂರಿಯಾ ಗೊಬ್ಬರ ದರ ಏರಿಕೆ ಇದ್ದಾಗ್ಯೂ, ಅತ್ಯಂತ ಕಡಿಮೆ ಬೆಲೆಗೆ ರೈತರಿಗೆ ಒದಗಿಸಲಾಗಿದೆ ಎಂದು ತಿಳಿಸಿದರು. ಸರ್ಕಾರದ ಕ್ರಮಗಳಿಂದಾಗಿ ಇಳುವರಿ ಗಣನೀಯ ಏರಿಕೆಯಾಗಿದ್ದು, ಕೃಷಿ ಮಾರುಕಟ್ಟೆ ವಿಸ್ತರಣೆಯಾಗಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ಉತ್ಪನ್ನ ಖರೀದಿ, ಸಕಾಲದಲ್ಲಿ ನಷ್ಟ ಪರಿಹಾರ ಮುಂತಾದ ಕ್ರಮಗಳಿಂದ ಲಕ್ಷಾಂತರ ರೈತರಿಗೆ ಅನುಕೂಲವಾಗಿದ್ದು, ಆದಾಯ ಹೆಚ್ಚಳವಾಗಿದೆ ಎಂದು ವಿವರಿಸಿದರು.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…