ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

June 12, 2025
3:28 PM

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ ನಡೆದಿದೆ.  ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಹಲವಾರು ಸಾವುನೋವುಗಳಾಗಿರುವ ಸಾಧ್ಯತೆ ಇದೆ. ಈ ವಿಮಾನ ಅಹಮದಾಬಾದ್‌ನಿಂದ ಲಂಡನ್‌ಗೆ ಹೋಗುತ್ತಿತ್ತು. ಅಪಘಾತದ ಕಾರಣದ ಬಗ್ಗೆ ಇನ್ನೂ ಯಾವುದೇ ಅಧಿಕೃತ ವರದಿಗಳು ಬಿಡುಗಡೆಯಾಗಿಲ್ಲ.ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Advertisement

ಇಂದು ಮಧ್ಯಾಹ್ನ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದ್ದು   ದಟ್ಟ ಹೊಗೆಯ ಮೋಡ ಆವರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಈ ವಿಮಾನ ಅಹಮದಾಬಾದ್‌ನಿಂದ ಲಂಡನ್‌ಗೆ ಹೋಗುತ್ತಿತ್ತು. ವಿಮಾನದೊಳಗಿದ್ದ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ರಕ್ಷಣಾ ಮತ್ತು ಸ್ಥಳಾಂತರಿಸುವ ಕಾರ್ಯಾಚರಣೆಗಳು ನಡೆಯುತ್ತಿವೆ. ಈ ವಿಮಾನದಲ್ಲಿ 242 ಪ್ರಯಾಣಿಕರಿದ್ದರು. ಅದು ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನವಾಗಿತ್ತು. ವಿಮಾನದಲ್ಲಿ 168 ಭಾರತೀಯರು,  53 ಮಂದಿ ಬ್ರಿಟಿಷ್‌ ನಾಗರೀಕರು, ಒಬ್ಬರು ಕೆನಡಿಯನ್‌, ಏಳು ಮಂದಿ ಪೋರ್ಚಿಗೀಸ್‌ ಪ್ರಜೆಗಳು ಇದ್ದರು ಎಂದು ಏರ್‌ ಇಂಡಿಯಾ ಖಚಿತಪಡಿಸಿದೆ.

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |
July 12, 2025
1:52 PM
by: ಸಾಯಿಶೇಖರ್ ಕರಿಕಳ
ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror