ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ ನಡೆದಿದೆ. ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಹಲವಾರು ಸಾವುನೋವುಗಳಾಗಿರುವ ಸಾಧ್ಯತೆ ಇದೆ. ಈ ವಿಮಾನ ಅಹಮದಾಬಾದ್‌ನಿಂದ ಲಂಡನ್‌ಗೆ ಹೋಗುತ್ತಿತ್ತು. ಅಪಘಾತದ ಕಾರಣದ ಬಗ್ಗೆ ಇನ್ನೂ ಯಾವುದೇ ಅಧಿಕೃತ ವರದಿಗಳು ಬಿಡುಗಡೆಯಾಗಿಲ್ಲ.ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಇಂದು ಮಧ್ಯಾಹ್ನ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದ್ದು ದಟ್ಟ ಹೊಗೆಯ ಮೋಡ ಆವರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಈ ವಿಮಾನ ಅಹಮದಾಬಾದ್‌ನಿಂದ ಲಂಡನ್‌ಗೆ ಹೋಗುತ್ತಿತ್ತು. ವಿಮಾನದೊಳಗಿದ್ದ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ರಕ್ಷಣಾ ಮತ್ತು ಸ್ಥಳಾಂತರಿಸುವ ಕಾರ್ಯಾಚರಣೆಗಳು ನಡೆಯುತ್ತಿವೆ. ಈ ವಿಮಾನದಲ್ಲಿ 242 ಪ್ರಯಾಣಿಕರಿದ್ದರು. ಅದು ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನವಾಗಿತ್ತು. ವಿಮಾನದಲ್ಲಿ 168 ಭಾರತೀಯರು, 53 ಮಂದಿ ಬ್ರಿಟಿಷ್ ನಾಗರೀಕರು, ಒಬ್ಬರು ಕೆನಡಿಯನ್, ಏಳು ಮಂದಿ ಪೋರ್ಚಿಗೀಸ್ ಪ್ರಜೆಗಳು ಇದ್ದರು ಎಂದು ಏರ್ ಇಂಡಿಯಾ ಖಚಿತಪಡಿಸಿದೆ.
ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…
‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…