ವಿದ್ಯಾಮಾತಾ ಅಕಾಡೆಮಿ ಸುಳ್ಯ ಶಾಖೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ ಉದ್ಘಾಟನೆ

October 15, 2023
10:37 PM
ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಪೂರ್ವ ತಯಾರಿ ಮತ್ತು ಖಾಸಗಿ ಉದ್ಯೋಗಗಳ ನೇರ ಸಂದರ್ಶನ ಪೂರ್ವ ತಯಾರಿ ಬಗೆಗಿನ ತರಬೇತಿ ಕಾರ್ಯಾಗಾರವು ವಿದ್ಯಾಮಾತಾ ಅಕಾಡೆಮಿಯ ನೂತನ ಸುಳ್ಯ ಶಾಖೆಯಲ್ಲಿ ನಡೆಯಿತು.

ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಪೂರ್ವ ತಯಾರಿ ಮತ್ತು ಖಾಸಗಿ ಉದ್ಯೋಗಗಳ ನೇರ ಸಂದರ್ಶನ ಪೂರ್ವ ತಯಾರಿ ಬಗೆಗಿನ ತರಬೇತಿ ಕಾರ್ಯಾಗಾರವು ವಿದ್ಯಾಮಾತಾ ಅಕಾಡೆಮಿಯ ನೂತನ ಸುಳ್ಯ ಶಾಖೆಯಲ್ಲಿ ನಡೆಯಿತು.

Advertisement
Advertisement

ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ತಾಲೂಕು ಘಟಕದ ಅಧ್ಯಕ್ಷರಾದ ಚಂದ್ರಶೇಖರ ಪೇರಾಲ್  ಉದ್ಘಾಟಿಸಿ, “ವಿದ್ಯಾಮಾತಾ ಅಕಾಡೆಮಿಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯೊಂದು ಸುಳ್ಯಕ್ಕೆ ಅತ್ಯಾವಶ್ಯಕತೆ ಇತ್ತು. ಈ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವವರು ತೀರಾ ವಿರಳ. ಈ ನಿಟ್ಟಿನಲ್ಲಿ ಪುತ್ತೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುವುದರ ಮೂಲಕ ನೂರಾರು ವಿದ್ಯಾರ್ಥಿಗಳು ಸರಕಾರಿ ಹುದ್ದೆಗೆ ಆಯ್ಕೆಯಾಗುವಂತೆ ಮಾಡಿದ ವಿದ್ಯಾಮಾತಾ ಅಕಾಡೆಮಿಯು ಸುಳ್ಯದಲ್ಲಿ ಕೂಡ ಇಂತಹ ತರಬೇತಿಯನ್ನು ಪ್ರಾರಂಭ ಮಾಡಿದ್ದು, ತುಂಬಾ ಖುಷಿಯ ವಿಚಾರವಾಗಿದೆ. ಇದನ್ನು ಈ ಭಾಗದವರು ಸದುಪಯೋಗಪಡಿಸಿಕೊಳ್ಳಬೇಕು” ಎಂದು ಹೇಳಿ ತರಬೇತಿಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.

ಈ ಸಂದರ್ಭದಲ್ಲಿ ವಿದ್ಯಾಮಾತಾ ಅಕಾಡೆಮಿಯ ವತಿಯಿಂದ ಚಂದ್ರಶೇಖರ್ ಪೇರಾಲ್ ಅವರನ್ನು ಸನ್ಮಾನಿಸಲಾಯಿತು.

ವಿದ್ಯಾಮಾತಾ ಅಕಾಡೆಮಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಚಂದ್ರಾವತಿ ಬಡ್ಡಡ್ಕ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆಗೆ ಉದ್ಯೋಗಗಳಿಗೆ ಸಂಬಂಧಿಸಿದ ವೃತ್ತಿಪರ ತರಬೇತಿಯ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾಮಾತಾ ಅಕಾಡೆಮಿಯ ಅಧ್ಯಕ್ಷರಾದ ಭಾಗ್ಯೇಶ್ ರೈ  ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

Advertisement

IAS, KAS, Banking ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿಯ ಬಗ್ಗೆ ತರಬೇತಿಯನ್ನು ಖ್ಯಾತ ಲೇಖಕರು, ವಿದ್ಯಾಮಾತಾ ಅಕಾಡೆಮಿಯ ಗೌರವ ತರಬೇತುದಾರರಾದ  ಅರವಿಂದ ಚೊಕ್ಕಾಡಿ ನಡೆಸಿಕೊಟ್ಟರು. ತರಬೇತುದಾರರಾದ ಡಾ. ಚೈತ್ರ, ಹರ್ಷಿತಾ ಆಚಾರ್ಯ, ಚಂದ್ರಕಾಂತ್ ಗೌಡ ಸ್ಪರ್ಧಾತ್ಮಕ ಪರೀಕ್ಷೆಗಳ, ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಪಡೆಯಲು ಬೇಕಾಗಿರುವ ಉದ್ಯೋಗ ಕೌಶಲ್ಯತೆಗಳ ಬಗ್ಗೆ ಮಾಹಿತಿ ನೀಡಿದರು. ಸುಳ್ಯ ಶಾಖೆಯ ಕಚೇರಿ ಸಹಾಯಕಿ ಪೂರ್ಣಶ್ರೀ ಗೌಡ ಸಹಕರಿಸಿದರು.

Training workshop on preparation for competitive examinations and direct interview preparation for private jobs was held at Sullia Branch of Vidyamata Academy.
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ
May 17, 2025
7:01 AM
by: ದ ರೂರಲ್ ಮಿರರ್.ಕಾಂ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ
May 16, 2025
9:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group