#MysoreDasara | ಸಂಗೀತ ನಾದಬ್ರಹ್ಮ ಹಂಸಲೇಖರಿಂದ ಮೈಸೂರು ದಸರಾ ಉದ್ಘಾಟನೆ | ಸಿಎಂ ಸಿದ್ದರಾಮಯ್ಯ ಘೋಷಣೆ |

August 29, 2023
2:42 PM
ಮೈಸೂರು ದಸರಾವನ್ನುಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

ನಾಡಹಬ್ಬ ದಸರಾಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈಗಾಗಲೇ ತಯಾರಿ ಜೋರಾಗೆ ನಡೆಯುತ್ತಿದೆ. ಪ್ರತೀ ದಸರಾಕ್ಕೆ  ದಸರಾ ಉದ್ಘಾಟನೆಯ ಗಣ್ಯ ವ್ಯಕ್ತಿ ಯಾರೋ ಅನ್ನೋ ಬಗ್ಗೆ ಕುತೂಹಲ ಇರುತ್ತದೆ. ಈ ಬಾರಿಯ ಮೈಸೂರು #Mysuru ದಸರಾವನ್ನುಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ #Hamsalekha ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದಸಾರ ಅಕ್ಟೋಬರ್​ 15 ರ ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಮೈಸೂರು ದಸರಾ ಉದ್ಘಾಟನೆ ನೆರವೇರಲಿದೆ.

Advertisement

ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅಲ್ಲದೇ ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ. ಮೈಸೂರಿನ 119 ವೃತ್ತಗಳಲ್ಲಿ ಅಂದರೇ ಬರೋಬ್ಬರಿ 135 ಕಿ.ಮೀ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲು ತೀರ್ಮಾನಿಸಲಾಗಿದೆ. ಕೆ.ಆರ್.ವೃತ್ತ, ಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಗನ್​ಹೌಸ್ ವೃತ್ತ, ಎಲ್​ಐಸಿ ವೃತ್ತ ಸೇರಿ ನಗರದ ಹಲವು ಕಡೆ ದೀಪಾಲಂಕಾರ ಮಾಡಲಾಗುತ್ತೆ. ಮೈಸೂರಿನ ಸರ್ಕಾರಿ ಕಟ್ಟಡಗಳಿಗೂ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ.

ಮೈಸೂರು ದಸರಾ ಹಬ್ಬಕ್ಕೆ ಈಗಿನಿಂದಲೇ ಗಜಪಡೆಯ ತಾಲೀಮು ಆರಂಭವಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಂಪುರ ಆನೆ ಶಿಬಿರದಿಂದ ದಸರಾ ಜಂಬೂ ಸವಾರಿಗೆ ಎರಡು ಆನೆಗಳು ಆಯ್ಕೆಯಾಗಿವೆ.  ಆನೆ ಶಿಬಿರದಲ್ಲಿ ಪಾರ್ಥಸಾರಥಿ ಮತ್ತು ಕಲ್ಪನಾ ಎರಡು ಆನೆಗಳಿಗೆ ತಾಲೀಮು ನೀಡಲಾಗುತ್ತಿದೆ. ವಾಹನಗಳ ಶಬ್ದಗಳಿಗೆ ಹೆದರಬಾರದೆಂದು ಪ್ರತಿನಿತ್ಯ ಗುಂಡ್ಲುಪೇಟೆ, ಕೇರಳ ಹೆದ್ದಾರಿಯಲ್ಲಿ ಆನೆಗಳು ಪ್ರತಿದಿನ 10 ಕಿ.ಮೀ ಸಂಚಾರ ಮಾಡುತ್ತಿವೆ.  ರಾಂಪುರ ಆನೆ ಶಿಬಿರದಿಂದ ಮೂಲೆಹೊಳೆ ಚೆಕ್ ಪೋಸ್ಟ್ ವರೆಗೂ ನಿತ್ಯ ತಾಲೀಮು ನೀಡಲಾಗುತ್ತಿದೆ.

ಏರ್ ಶೋ ಆಯೋಜನಗೆ ಚಿಂತನೆ : ಪ್ರಸಕ್ತ ವರ್ಷ ದಸರಾ ಅಂಗವಾಗಿ ಏರ್ ಶೋ ಆಯೋಜಿಸಲು ಚಿಂತನೆ ಇದೆ.  ಈ ವಿಚಾರವಾಗಿ ರಕ್ಷಣಾ ಸಚಿವರ ಜೊತೆ ಚರ್ಚೆ ಮಾಡುತ್ತೇವೆ. ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ ದಸರಾ ವೇಳೆ ಏರ್ ಶೋ ಆಯೋಜಿಸಿದ್ದೆವು. ಮೈಸೂರು ದಸರಾ ಮಹೋತ್ಸವದಲ್ಲಿ ಅನಗತ್ಯ ಖರ್ಚು ಇರಬಾರದು. ಶಕ್ತಿ ಯೋಜನೆ ಜಾರಿಯಾಗಿರುವ ಕಾರಣ ಮಹಿಳೆಯರು ಹೆಚ್ಚು ಬರುವ ಸಾಧ್ಯತೆ ಇದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

 

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಾಲು ಮೊಸರು, ವಿದ್ಯುತ್ ದರ ದುಬಾರಿ | ಬೆಂಗಳೂರಿನಲ್ಲಿ ಕಸಕ್ಕೂ ತೆರಿಗೆ | ರೈತರಿಗೆ ಪ್ರೋತ್ಸಾಹಧನಕ್ಕೆ ನಿರ್ಧಾರ |
April 1, 2025
8:00 AM
by: The Rural Mirror ಸುದ್ದಿಜಾಲ
ದೇವಸ್ಥಾನದ ಬ್ರಹ್ಮಕಲಶೋತ್ಸವಗಳಲ್ಲಿ “ರಾಜಕೀಯದ ಚಪ್ಪಲು” ಹೊರಗಿಡಬೇಕು |
April 1, 2025
7:23 AM
by: ಮಹೇಶ್ ಪುಚ್ಚಪ್ಪಾಡಿ
ಏಪ್ರಿಲ್ 3 ಹಾಗೂ 4 ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ | ಎಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
March 31, 2025
11:40 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣ ಪತ್ತೆ | ಹೆಚ್ಚುತ್ತಿರುವ ಬರ್ಮಾ ಅಡಿಕೆ ಸಾಗಾಟ |
March 31, 2025
9:38 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group