ಕೊಂಕಣ ರೈಲ್ವೆ ಮಾರ್ಗದ ರೈಲುಗಳಿಗೆ ನಿರ್ಮಿಸಲಾದ ವಿದ್ಯುತ್ ಗ್ರಿಡ್ ಉದ್ಘಾಟನೆ

August 1, 2025
7:49 PM

ಕೊಂಕಣ ರೈಲ್ವೆ ಮಾರ್ಗದ ರೈಲುಗಳಿಗೆ ಕೆಪಿಸಿಯಿಂದ ನೇರವಾಗಿ ವಿದ್ಯುತ್ ಒದಗಿಸಲು ನಿರ್ಮಿಸಲಾದ ವಿದ್ಯುತ್ ಗ್ರಿಡ್ ಅನ್ನು ಕೊಂಕಣ ರೈಲ್ವೆ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಜಾ ಉದ್ಘಾಟಿಸಿದರು.

ರಾಜ್ಯಗಳ ವಿದ್ಯುತ್ ಪೂರೈಕೆ ಕಂಪನಿಗಳಿಂದ ಕೊಂಕಣ ರೈಲ್ವೆ ನಿಗಮವು ವಿದ್ಯುತ್ ಪಡೆಯುತ್ತಿದ್ದು, ರಾಜ್ಯದ ಮುಲಿ, ಬಾರ್ಕೂರು, ಸೇನಾಪುರ, ಕುಂದಾಪುರ ಮುರ್ಡೇಶ್ವರ, ಕುಮಟಾ, ಕಾರವಾರ ಹೀಗೆ ವಿದ್ಯುತ್ ಗ್ರಿಡ್‌ಗಳಿಂದ ವಿದ್ಯುತ್ ಸಂಪರ್ಕ ಹೊಂದಲಾಗಿದೆ. ಆದರೆ ಈ ಗ್ರಿಡ್‌ಗಳಲ್ಲಿ ವಿದ್ಯುತ್ ಕೈಕೊಟ್ಟರೆ, ರೈಲುಗಳ ಸಂಚಾರಕ್ಕೆ ಗೋವಾದ ಬಾಳ್ಳಿ ಗ್ರಿಡ್‌ನಿಂದ ಕರ್ನಾಟಕ ವಿದ್ಯುತ್ ಪಡೆಯಬೇಕಿತ್ತು. ಈ ಸಮಸ್ಯೆ ತಪ್ಪಿಸಲು ವಿದ್ಯುತ್ ಉತ್ಪಾದಿಸುವ ಕೆಪಿಸಿಯಿಂದಲೇ ನೇರವಾಗಿ ಪಡೆಯಲು ವಿದ್ಯುತ್ ನಿಗಮವು ಓಪನ್ ಆಕ್ಸಿಸ್ ಬಿಲ್ಲಿಂಗ್ ವ್ಯವಸ್ಥೆಯನ್ನು ಮಾಡಿಕೊಂಡಿದೆ. ಕದ್ರಾ ವಿದ್ಯುದಾಗಾರದಿಂದ ನೇರವಾಗಿ 110 ಕೆವಿ ವಿದ್ಯುತ್ ಲೈನ್ ಎಳೆದು ವಿದ್ಯುತ್ ಸಂಪರ್ಕ ಪಡೆಯಲಾಗಿದೆ. ಇದರಿಂದ ಮುರ್ಡೇಶ್ವರ ಅಥವಾ ಕುಮಟಾ ಮುಂತಾದೆಡೆ ವಿದ್ಯುತ್ ಸಂಪರ್ಕ ಕೈಕೊಟ್ಟರೆ, ಗೋವಾ ಮೊರೆ ಹೋಗುವ ಅವಶ್ಯಕತೆ ಇಲ್ಲ ಎಂದು ಕೊಂಕಣ ರೈಲ್ವೆ ನಿಗಮ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?
October 5, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror