#Agriculture |ಏಕೀಕೃತ ರೈತ ಸಹಾಯವಾಣಿ ಕರೆ ಕೇಂದ್ರ ಉದ್ಘಾಟನೆ | ಬೆಳೆ ಸಮೀಕ್ಷೆ ತರಬೇತಿ ಕಾರ್ಯಾಗಾರ |

August 17, 2023
1:09 PM
ಕೃಷಿ ಇಲಾಖೆಯಲ್ಲಿ ರೈತರ ಮಾಹಿತಿ, ಸಲಹೆ, ಮಾರ್ಗದರ್ಶನಕ್ಕೆ ಏಕೀಕೃತ ಸಹಾಯವಾಣಿ ಕರೆ ಕೇಂದ್ರ ಇಂದಿನಿಂದ ಪ್ರಾರಂಭವಾಗಿದೆ. ವಿವಿಧ 8 ಯೋಜನೆಗಳ ಮಾಹಿತಿಗೆ ಇದ್ದ ಪ್ರತ್ಯೇಕ ದೂರವಾಣಿ ಸಂಖ್ಯೆಗಳನ್ನು ಒಗ್ಗೂಡಿಸಿ ಒಂದೇ ಸಂಖ್ಯೆಯಲ್ಲಿ ಎಲ್ಲ ಮಾಹಿತಿಗಳು ಲಭ್ಯವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ.

ರೈತರಿಗೆ ಮಾಹಿತಿ ಸಲಹೆ, ಮಾರ್ಗದರ್ಶನ ನೀಡುವ ಉದ್ದೇಶದಿಂದ ಕೃಷಿ ಇಲಾಖೆ ಆಯುಕ್ತಾಲಯದಲ್ಲಿ ಸ್ಥಾಪಿಸಿರುವ ಏಕೀಕೃತ ಸಹಾಯವಾಣಿ ಕರೆ ಕೇಂದ್ರವನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಉದ್ಘಾಟಿಸಿದರು. ಇದೇ ವೇಳೆ  ಬೆಳೆ ಸಮೀಕ್ಷೆ ಕುರಿತು ತರಬೇತುದಾರರಿಗೆ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರ ನಡೆಯುತ್ತಿದೆ.

ಕೃಷಿ ಇಲಾಖೆಯಲ್ಲಿ ರೈತರ ಮಾಹಿತಿ, ಸಲಹೆ, ಮಾರ್ಗದರ್ಶನಕ್ಕೆ ಏಕೀಕೃತ ಸಹಾಯವಾಣಿ ಕರೆ ಕೇಂದ್ರ ಇಂದಿನಿಂದ ಪ್ರಾರಂಭವಾಗಿದೆ. ವಿವಿಧ 8 ಯೋಜನೆಗಳ ಮಾಹಿತಿಗೆ ಇದ್ದ ಪ್ರತ್ಯೇಕ ದೂರವಾಣಿ ಸಂಖ್ಯೆಗಳನ್ನು ಒಗ್ಗೂಡಿಸಿ ಒಂದೇ ಸಂಖ್ಯೆಯಲ್ಲಿ ಎಲ್ಲ ಮಾಹಿತಿಗಳು ಲಭ್ಯವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ.ನೂತನ ರೈತ ಸಹಾಯವಾಣಿ ಕರೆ ಸಂಖ್ಯೆ 1800425355 ಗೆ ಸಂಪರ್ಕಿಸಿ ಮಾಹಿತಿ, ಮಾರ್ಗದರ್ಶನ ಪಡೆಯಬಹುದಾಗಿದೆ.

ಮುಂದಿನ ದಿನಗಳಲ್ಲಿ ರೈತರಿಗೆ ಇನ್ನು ಹೆಚ್ಚಿನ ಅನುಕೂಲವಾಗುವ IVR-ML ಮತ್ತು AI (Interactive Voice Response, Machine Learning & Artificial Intelligence) ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ಮಾಹಿತಿ, ಪರಿಹಾರಗಳನ್ನು ಮತ್ತಷ್ಟು ಸುಲಭ ಹಾಗೂ ಪರಿಣಾಮಕಾರಿಯಾಗಿ ರೈತರಿಗೆ ತಲುಪುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದರು.

ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನೂಪ್ ಕುಮಾರ್, ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ್, ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ
January 10, 2026
10:30 PM
by: ರೂರಲ್‌ ಮಿರರ್ ಸುದ್ದಿಜಾಲ
ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ
January 10, 2026
10:28 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror