ರೈತರಿಗೆ ಮಾಹಿತಿ ಸಲಹೆ, ಮಾರ್ಗದರ್ಶನ ನೀಡುವ ಉದ್ದೇಶದಿಂದ ಕೃಷಿ ಇಲಾಖೆ ಆಯುಕ್ತಾಲಯದಲ್ಲಿ ಸ್ಥಾಪಿಸಿರುವ ಏಕೀಕೃತ ಸಹಾಯವಾಣಿ ಕರೆ ಕೇಂದ್ರವನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಉದ್ಘಾಟಿಸಿದರು. ಇದೇ ವೇಳೆ ಬೆಳೆ ಸಮೀಕ್ಷೆ ಕುರಿತು ತರಬೇತುದಾರರಿಗೆ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರ ನಡೆಯುತ್ತಿದೆ.
ಕೃಷಿ ಇಲಾಖೆಯಲ್ಲಿ ರೈತರ ಮಾಹಿತಿ, ಸಲಹೆ, ಮಾರ್ಗದರ್ಶನಕ್ಕೆ ಏಕೀಕೃತ ಸಹಾಯವಾಣಿ ಕರೆ ಕೇಂದ್ರ ಇಂದಿನಿಂದ ಪ್ರಾರಂಭವಾಗಿದೆ. ವಿವಿಧ 8 ಯೋಜನೆಗಳ ಮಾಹಿತಿಗೆ ಇದ್ದ ಪ್ರತ್ಯೇಕ ದೂರವಾಣಿ ಸಂಖ್ಯೆಗಳನ್ನು ಒಗ್ಗೂಡಿಸಿ ಒಂದೇ ಸಂಖ್ಯೆಯಲ್ಲಿ ಎಲ್ಲ ಮಾಹಿತಿಗಳು ಲಭ್ಯವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ.ನೂತನ ರೈತ ಸಹಾಯವಾಣಿ ಕರೆ ಸಂಖ್ಯೆ 1800425355 ಗೆ ಸಂಪರ್ಕಿಸಿ ಮಾಹಿತಿ, ಮಾರ್ಗದರ್ಶನ ಪಡೆಯಬಹುದಾಗಿದೆ.
ಮುಂದಿನ ದಿನಗಳಲ್ಲಿ ರೈತರಿಗೆ ಇನ್ನು ಹೆಚ್ಚಿನ ಅನುಕೂಲವಾಗುವ IVR-ML ಮತ್ತು AI (Interactive Voice Response, Machine Learning & Artificial Intelligence) ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ಮಾಹಿತಿ, ಪರಿಹಾರಗಳನ್ನು ಮತ್ತಷ್ಟು ಸುಲಭ ಹಾಗೂ ಪರಿಣಾಮಕಾರಿಯಾಗಿ ರೈತರಿಗೆ ತಲುಪುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದರು.
ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನೂಪ್ ಕುಮಾರ್, ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ್, ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿ ನೀರಿಗೆ…
ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಗಮನದಲ್ಲಿಟ್ಟುಕೊಂಡು ಮಧ್ಯ ರೈಲ್ವೆಯು ಛತ್ರಪತಿ ಶಿವಾಜಿ…
ಬೇಸಿಗೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ ಅಭಾವ ನೀಗಿಸಲು ಪ್ರಮುಖ ಜಲಾಶಯಗಳ ನಿರ್ವಹಣೆ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಪತ್ತೆ ಹಾಗೂ ಅವುಗಳ ಚಲನವಲನದ ಮಾಹಿತಿ ಪಡೆಯಲು ರೇಡಿಯೋ…
ನಂದಿನಿಯ ಎಲ್ಲಾ ಬ್ರ್ಯಾಂಡ್ ಹಾಲಿನ ಜೊತೆಗೆ ಮೊಸರಿನ ದರವು ಒಂದು ಲೀಟರ್ಗೆ 4…