#Heavy Rain| ಪಶ್ಚಿಮ ಘಟ್ಟದಲ್ಲಿ ನಿಲ್ಲದ ಮಳೆ : ತುಂಬಿ ಹರಿಯುತ್ತಿವೆ ನದಿಗಳು : ಘಟಪ್ರಭಾ ನದಿ, ಸೇತುವೆ ಜಲಾವೃತ

July 25, 2023
1:16 PM
ಮಳೆಯಿಂದಾದ ಅನಾಹುತಕ್ಕೆ ಈವರೆಗೂ ಒಟ್ಟು 27 ಜನ ಬಲಿಯಾಗಿದ್ದಾರೆ, ರಾಜ್ಯದ ಕೊಡಗು, ಕರಾವಳಿ, ಉತ್ತರ ಕನ್ನಡ, ಬೆಳಗಾವಿಯಲ್ಲಿ ಭಾರಿ ಪ್ರಮಾಣದ ಮಳೆ ಹಿನ್ನೆಲೆ ಜಿಲ್ಲೆಯ ಜೀವ ನದಿಗಳು ಻ಪಾಯದ ಮಟ್ಟ ಮೀರಿ ಹರಿಯುತ್ತಿವೆ.

ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆರಾಯ ಅಬ್ಬರಿಸುತ್ತಿದ್ದಾನೆ. ಬಿಟ್ಟು ಬಿಡದೇ ಸುರಿಯುತ್ತಿರೋ ಧಾರಾಕಾರ ಮಳೆಯಿಂದ ಕರಾವಳಿ, ಮಲೆನಾಡು ಸೇರಿದಂತೆ 7 ಜಿಲ್ಲೆಗಳಲ್ಲಿ ಪ್ರಮುಖ ನದಿಗಳು ಉಕ್ಕಿ ಪ್ರವಾಹ ಕಾಣಿಸಿಕೊಂಡಿದೆ.

ಮಹಾರಾಷ್ಟ್ರದಲ್ಲಿ ಅಧಿಕ ಮಳೆ: ಚಿಕ್ಕೋಡಿಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿದ್ದ ಬ್ಯಾರೆಜ್​ ಮುಳುಗಡೆಮಹಾರಾಷ್ಟ್ರದ ಸತಾರಾ, ಕರಾಡ, ಕೊಲ್ಹಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಇದರಿಂದ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಮಾಂಜರಿ-ಬಾವನಸೌದತ್ತಿಯಲ್ಲಿ ಕೃಷ್ಣ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಮ್ ಬ್ಯಾರೇಜ್ ಜಲಾವೃತವಾಗಿದೆ.

ಉತ್ತರಕನ್ನಡ ಜಿಲ್ಲೆಯ ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ನಿರಂತರವಾಗಿ ಸುರಿಯತ್ತಿರುವ ಮಳೆಯಿಂದಾಗಿ ಜಿಲ್ಲೆಯ ನದಿಗಳು ಉಕ್ಕಿ ಹರಿಯುತ್ತಿದೆ. ಕಾಳಿ ನದಿಯಲ್ಲಿ ಹೆಚ್ಚಿನ ಪ್ರಮಾಣದ ನೀರಿನ ಒಳಹರಿವು ಇದ್ದಿದರಿಂದ ಅಣೆಕಟ್ಟುಗಳು ಭರ್ತಿಯಾಗಿದೆ. ಹೀಗಾಗಿ ಅಣೆಕಟ್ಟುಗಳಿಂದ ನೀರನ್ನ ಹೊರಬಿಡಲಾಗುತ್ತಿದೆ. ಇದರಿಂದ ನದಿ ಪಾತ್ರದ ಜನರಲ್ಲಿ ಪ್ರವಾಹ ಆತಂಕ ಎದುರಾಗಿದೆ. ಅಲ್ಲದೆ ಕಾಳಿ ನದಿ ಆರ್ಭಟಕ್ಕೆ ಕದ್ರಾ ಡ್ಯಾಂ ಭರ್ತಿಯಾಗಿದ್ದು 30,000 ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆ ಕದ್ರಾ ಗ್ರಾಮದ ಹೊರವಲಯದ ಮಹಾಮಾಯ ದೇವಸ್ಥಾನಕ್ಕೆ ನೀರು ನುಗ್ಗಿದೆ.

ಕದ್ರಾ ಸುತ್ತಮುತ್ತಲಿನ 100ಕ್ಕೂ ಹೆಚ್ಚು ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ. ಕಾರವಾರದ ಕಾಳಿ ನದಿ, ಅಂಕೋಲಾದ ಗಂಗಾವಳಿ, ಕುಮಟಾದ ಅಘನಾಶಿನಿ, ಹೊನ್ನಾವರದ ಶರಾವತಿ ನದಿಯಲ್ಲಿ ನೀರು ಹೆಚ್ಚಾಗುತ್ತಿದೆ. ಯಲ್ಲಾಪುರ ಮತ್ತು ಜೋಯಿಡಾ ಭಾಗದಲ್ಲಿ ಅತ್ಯಧಿಕವಾಗಿ ಮಳೆ ಬಿಳ್ತಾ ಇರೋದ್ರಿಂದ ಕಾಳಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಕೊಡ್ಸಳ್ಳಿ ಮತ್ತು ಕದ್ರಾ ಅಣೆಕಟ್ಟುಗಳಿಂದ ಪ್ರತಿ ಗಂಟೆಗೂ 30 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror