ಪ್ರವಾಹದಿಂದ ಕೊಡಗಿನ ಚೆರಿಯಪರಂಬು, ಕಲ್ಲುಮೊಟ್ಟೆ, ದಕ್ಷಿಣ ಕನ್ನಡದ ಮೊಗೇರಿ ಕುದ್ರು ಪ್ರದೇಶಗಳು ದ್ವೀಪದಂತಾಗಿದ್ದು, ರಾಜ್ಯದ ಸೇತುವೆ, ರಸ್ತೆಗಳು ಜಲಾವೃತವಾಗಿ 10ಕ್ಕೂ ಹೆಚ್ಚು ಕಡೆ ಸಂಚಾರ-ಸಂಪರ್ಕ ಕಡಿತಗೊಂಡಿದೆ. ಇನ್ನು ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್, ಸಕಲೇಶಪುರದ ಬಿಸಿಲೆ ಘಾಟ್ ಸೇರಿ ಕರಾವಳಿ, ಮಲೆನಾಡಿನ 7ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿತವಾಗಿದೆ. ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಗೆ 27 ಜನರು ಸಾವು – ಮಳೆಯಿಂದಾದ ಅನಾಹುತಕ್ಕೆ ಈವರೆಗೂ ಒಟ್ಟು 27 ಜನ ಬಲಿಯಾಗಿದ್ದಾರೆ. ಎಂಟು ಜನ ಸಿಡಿಲಿಗೆ ಬಲಿಯಾಗಿದ್ದಾರೆ. ಅದರಲ್ಲಿ ಕೆಲವರು ಕಾಲು ಜಾರಿ ಹಳ್ಳಗಳಲ್ಲಿ ಬಿದ್ದು ಜೀವ ಕಳೆದುಕೊಂಡಿದ್ದಾರೆ. ಬೆಳಗಾವಿ- ಮಹಾರಾಷ್ಟ್ರ ಗಡಿಯಲ್ಲಿರುವ ಸುಂಡಿ ಫಾಲ್ಸ್ ಧುಮ್ಮಿಕ್ಕಿ ಹರಿಯುತ್ತಿದೆ. ಅಪಾಯವಿದ್ರೂ ರಭಸವಾಗಿ ಹರಿಯುವ ನೀರಿನಲ್ಲಿ ಯುವಕರು ಹುಚ್ಚಾಟವಾಡ್ತಿದ್ದಾರೆ. ಈ ವೇಳೆ ಆಯತಪ್ಪಿ ಬಿದ್ದು ಕೊಚ್ಚಿ ಹೋಗ್ತಿದ್ದ ಯುವಕರು ಒಬ್ಬರಿಗೊಬ್ಬರು ಕೈ ಹಿಡಿದು ಬಚಾವ್ ಆಗಿದ್ದಾರೆ.
ಕಿತ್ತೂರು ಕರ್ನಾಟಕ ಪ್ರಾಂತ್ಯದಲ್ಲಿ ಮಳೆ ಮುಂದುವರಿದಿದೆ. ಜಿಲ್ಲೆಯ ಹರಿದು ಹೋಗುವ ಘಟಪ್ರಭಾ#Ghataprabha River ಉಕ್ಕಿ ಹರಿಯುತ್ತಿದೆ. ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯೊಂದು#bridge ಸಂಪೂರ್ಣವಾಗಿ ಜಲಾವೃತಗೊಂಡಿದ್ದು ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿಯ ಉಪನದಿಯಾಗಿರುವ ಘಟಪ್ರಭಾ ಉಕ್ಕಿ ಹರಿಯುತ್ತಿದೆ. ಜಿಲ್ಲೆಯ ಮೂಲಕ ಹರಿದುಹೋಗುವ ಮತ್ತೊಂದು ನದಿ ಮಲಪ್ರಭಾದಲ್ಲೂ#Malaprabha ಸಾಕಷ್ಟು ನೀರು ಹರಿದು ಬಂದಿದೆ ಮತ್ತು ಅದು ಕೂಡ ಅಪಾಯಮಟ್ಟ ಮೀರಿ ಹರಿಯುತ್ತಿದೆ.
ಮಹಾರಾಷ್ಟ್ರದಲ್ಲಿ ಅಧಿಕ ಮಳೆ: ಚಿಕ್ಕೋಡಿಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿದ್ದ ಬ್ಯಾರೆಜ್ ಮುಳುಗಡೆಮಹಾರಾಷ್ಟ್ರದ ಸತಾರಾ, ಕರಾಡ, ಕೊಲ್ಹಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಇದರಿಂದ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಮಾಂಜರಿ-ಬಾವನಸೌದತ್ತಿಯಲ್ಲಿ ಕೃಷ್ಣ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಮ್ ಬ್ಯಾರೇಜ್ ಜಲಾವೃತವಾಗಿದೆ.
ಉತ್ತರಕನ್ನಡ ಜಿಲ್ಲೆಯ ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ನಿರಂತರವಾಗಿ ಸುರಿಯತ್ತಿರುವ ಮಳೆಯಿಂದಾಗಿ ಜಿಲ್ಲೆಯ ನದಿಗಳು ಉಕ್ಕಿ ಹರಿಯುತ್ತಿದೆ. ಕಾಳಿ ನದಿಯಲ್ಲಿ ಹೆಚ್ಚಿನ ಪ್ರಮಾಣದ ನೀರಿನ ಒಳಹರಿವು ಇದ್ದಿದರಿಂದ ಅಣೆಕಟ್ಟುಗಳು ಭರ್ತಿಯಾಗಿದೆ. ಹೀಗಾಗಿ ಅಣೆಕಟ್ಟುಗಳಿಂದ ನೀರನ್ನ ಹೊರಬಿಡಲಾಗುತ್ತಿದೆ. ಇದರಿಂದ ನದಿ ಪಾತ್ರದ ಜನರಲ್ಲಿ ಪ್ರವಾಹ ಆತಂಕ ಎದುರಾಗಿದೆ. ಅಲ್ಲದೆ ಕಾಳಿ ನದಿ ಆರ್ಭಟಕ್ಕೆ ಕದ್ರಾ ಡ್ಯಾಂ ಭರ್ತಿಯಾಗಿದ್ದು 30,000 ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆ ಕದ್ರಾ ಗ್ರಾಮದ ಹೊರವಲಯದ ಮಹಾಮಾಯ ದೇವಸ್ಥಾನಕ್ಕೆ ನೀರು ನುಗ್ಗಿದೆ.
ಕದ್ರಾ ಸುತ್ತಮುತ್ತಲಿನ 100ಕ್ಕೂ ಹೆಚ್ಚು ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ. ಕಾರವಾರದ ಕಾಳಿ ನದಿ, ಅಂಕೋಲಾದ ಗಂಗಾವಳಿ, ಕುಮಟಾದ ಅಘನಾಶಿನಿ, ಹೊನ್ನಾವರದ ಶರಾವತಿ ನದಿಯಲ್ಲಿ ನೀರು ಹೆಚ್ಚಾಗುತ್ತಿದೆ. ಯಲ್ಲಾಪುರ ಮತ್ತು ಜೋಯಿಡಾ ಭಾಗದಲ್ಲಿ ಅತ್ಯಧಿಕವಾಗಿ ಮಳೆ ಬಿಳ್ತಾ ಇರೋದ್ರಿಂದ ಕಾಳಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಕೊಡ್ಸಳ್ಳಿ ಮತ್ತು ಕದ್ರಾ ಅಣೆಕಟ್ಟುಗಳಿಂದ ಪ್ರತಿ ಗಂಟೆಗೂ 30 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …
ಬೇಸಿಗೆಯಲ್ಲಿ ಈ ಬಾರಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್…