ಪಶು ಸಖಿಯರ ಮಾಸಿಕ ಗೌರವಧನ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

April 6, 2025
7:00 AM
ರಾಜ್ಯದಲ್ಲಿ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ 89 ಲಕ್ಷ ಲೀಟರ್‌ಗೆ ಇಳಿಕೆಯಾಗಿದೆ.ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟ  3.40 ಲೀಟರ್ ಲಕ್ಷ ಹಾಲು ಉತ್ಪಾದನೆ ಮಾಡುತ್ತಿದ್ದು, ಹೆಚ್ಚುವರಿಯಾಗಿ  1.60 ಲೀ. ಲಕ್ಷ ಹಾಲನ್ನು ಇತರ ಜಿಲ್ಲೆಗಳಿಂದ ಆಮದು ಮಾಡುತ್ತಿದೆ.

ಪಶುಸಂಗೋಪನಾ ಇಲಾಖೆಯಡಿ ಕಾರ್ಯನಿರ್ವಹಿಸುವ ಪಶು ಸಖಿಯರ ಮಾಸಿಕ ಗೌರವಧನ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದ ಗ್ರಾಮಾಂತರ ಭಾಗದಲ್ಲಿ ಪಶು ಸಖಿಯರ ಅವರ ಸೇವೆ ಶ್ಲಾಘನೀಯ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕ ಒಕ್ಕೂಟ ಲಾಭದಲ್ಲಿದೆ. ರಾಜ್ಯದಲ್ಲಿ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ 89 ಲಕ್ಷ ಲೀಟರ್‌ಗೆ ಇಳಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪಶುಸಖಿಯರನ್ನು ಕೇಂದ್ರ ಸರ್ಕಾರದಿಂದ ನೇಮಕ ಮಾಡಲಾಗಿದ್ದು, ಅವರು ಇಲಾಖೆ ಮತ್ತು ರೈತರ ನಡುವೆ ಕೊಂಡಿಯಾಗಿ ಉತ್ತಮ ರೀತಿಯಲ್ಲಿ ಜವಾಬ್ದಾರಿಯುತವಾಗಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಶುಸಖಿಯರು  ಗ್ರಾಮೀಣ ಪ್ರದೇಶದಲ್ಲಿ  ರೈತರ ಮನೆ ಬಾಗಿಲಿಗೆ ಹೋಗಿ  ಜಾನುವಾರುಗಳಿಗೆ ಕೃತಕ ಗರ್ಭಧಾರಣೆ ಮತ್ತು  ಜಾನುವಾರ ನಿರ್ವಹಣಾ ಸೇವೆಗಳನ್ನು  ಮತ್ತು ಮಾಹಿತಿಯನ್ನು ನೀಡುತ್ತಿದ್ದಾರೆ.   ಪಶುಸಖಿಯರಿಗೆ ಕಡಿಮೆ ಗೌರವಧನ ನೀಡಲಾಗುತ್ತಿದ್ದು , ಅವರಿಗೆ ಕನಿಷ್ಠ  5000  ರೂ ಗೌರವಧನ  ಹೆಚ್ಚಳ ಮಾಡಲು  ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲಾಗುತ್ತದೆ ಎಂದು ಅವರು ಹೇಳಿದರು.  ಈ ನಿಟ್ಟಿನಲ್ಲಿ   ಪಶು ಸಖಿಯರಿಗೆ ನೀಡುವ ಗೌರವ ಧನದ ಹೆಚ್ಚಳದ ಬಗ್ಗೆ   ಮುಖ್ಯಮಂತ್ರಿಗೆ  ಮನವಿ ಮಾಡುತ್ತೇನೆ ಎಂದು ಅವರು ಭರವಸೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟ  3.40 ಲೀಟರ್ ಲಕ್ಷ ಹಾಲು ಉತ್ಪಾದನೆ ಮಾಡುತ್ತಿದ್ದು, ಹೆಚ್ಚುವರಿಯಾಗಿ  1.60 ಲೀ. ಲಕ್ಷ ಹಾಲನ್ನು ಇತರ ಜಿಲ್ಲೆಗಳಿಂದ ಆಮದು ಮಾಡುತ್ತಿದೆ.  ಹಾಲು ಉತ್ಪಾದನೆಗಿಂತಲೂ ಖರ್ಚು ಮಾಡಿ ಉತ್ತಮ ಲಾಭಗಳಿಸಿದೆ.  ಮೈಸೂರಿನಲ್ಲಿ  ಶೇಕಡಾ 40 ರಷ್ಟು ಹಾಲು ಖರ್ಚಾಗುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟ ಉತ್ತಮ ನಿರ್ವಹಣೆ ಮಾಡುತ್ತಿದೆ ಎಂದು ಸಚಿವರು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ
April 7, 2026
11:25 AM
by: ಮಹೇಶ್ ಪುಚ್ಚಪ್ಪಾಡಿ
ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
April 7, 2026
7:34 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror